ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂವಿಧಾನ ದಿನದಂದು ಪ್ಯಾರಿಸ್‌ನ ಯುನೆಸ್ಕೋ ಕೇಂದ್ರ ಕಚೇರಿಯಲ್ಲಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಪುತ್ಥಳಿ ಅನಾವರಣಗೊಳಿಸಿರುವುದಕ್ಕೆ ಅಪಾರ ಹೆಮ್ಮೆ ವ್ಯಕ್ತಪಡಿಸಿದ್ದಾರೆ.
ಈ ಐತಿಹಾಸಿಕ ಸಂದರ್ಭದಲ್ಲಿ ಡಾ. ಅಂಬೇಡ್ಕರ್ ಮತ್ತು ಭಾರತದ ಸಂವಿಧಾನ ರಚನೆಯಲ್ಲಿ ಅವರ ಪ್ರಮುಖ ಪಾತ್ರವನ್ನು ಗುರುತಿಸುವುದು ಅವರಿಗೆ ಸಂದ ಸೂಕ್ತ ಗೌರವವಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ. ಡಾ. ಅಂಬೇಡ್ಕರ್ ಅವರ ಚಿಂತನೆಗಳು ಮತ್ತು ಆದರ್ಶಗಳು ವಿಶ್ವದಾದ್ಯಂತ ಅಸಂಖ್ಯಾತ ಜನರಿಗೆ ಶಕ್ತಿ ಮತ್ತು ಭರವಸೆಯನ್ನು ನೀಡುತ್ತಲೇ ಇವೆ ಎಂದು ಅವರು ಬಲವಾಗಿ ಪ್ರತಿಪಾದಿಸಿದರು.
ಸಾಮಾಜಿಕ ಜಾಲತಾಣ X ಖಾತೆಯಲ್ಲಿ ಶ್ರೀ ಮೋದಿ ಅವರು ಹೀಗೆ ಹೇಳಿದ್ದಾರೆ:
”ಸಂವಿಧಾನ ದಿನವಾದ ಇಂದು ಪ್ಯಾರಿಸ್‌ನ ಯುನೆಸ್ಕೋ ಕೇಂದ್ರ ಕಚೇರಿಯಲ್ಲಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಪುತ್ಥಳಿಯಲ್ಲಿ ಅನಾವರಣಗೊಳಿಸಲಾಗಿದೆ ಎಂಬುದು ಅಪಾರ ಹೆಮ್ಮೆಯ ವಿಷಯವಾಗಿದೆ. ಇದು ಡಾ. ಅಂಬೇಡ್ಕರ್ ಮತ್ತು ನಮ್ಮ ಸಂವಿಧಾನ ರಚನೆಯಲ್ಲಿ ಅವರು ವಹಿಸಿದ ಪಾತ್ರಕ್ಕೆ ಸಂದ ಸೂಕ್ತ ಗೌರವವಾಗಿದೆ. ಅವರ ಚಿಂತನೆಗಳು ಮತ್ತು ಆದರ್ಶಗಳು ಅಸಂಖ್ಯಾತ ಜನರಿಗೆ ಶಕ್ತಿ ಮತ್ತು ಭರವಸೆಯನ್ನು ನೀಡುತ್ತಿವೆ’’.
@UNESCO
@IndiaatUNESCO”
It is a matter of immense pride that today, on Constitution Day, a bust of Dr. Babasaheb Ambedkar was unveiled at the UNESCO Headquarters in Paris. This is a fitting tribute to Dr. Ambedkar and his role in the making of our Constitution. His thoughts and ideals give strength and… pic.twitter.com/CbbsMEK7ji
— Narendra Modi (@narendramodi) November 26, 2025


