ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್ ನಲ್ಲಿ ನಡೆದ ಜಿ-20 ನಾಯಕರ ಶೃಂಗಸಭೆಯ ಸಂದರ್ಭದಲ್ಲಿ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಪಾನ್ ಪ್ರಧಾನಮಂತ್ರಿ ಘನತೆವೆತ್ತ ಸಾನೇ ತಕೈಚಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಅಕ್ಟೋಬರ್ 29, 2025 ರಂದು ದೂರವಾಣಿ ಕರೆ ಮಾಡಿದ ನಂತರ ಪ್ರಧಾನಮಂತ್ರಿ ತಕೈಚಿ ಅವರೊಂದಿಗಿನ ಪ್ರಧಾನಮಂತ್ರಿ ಅವರ ಮೊದಲ ಮುಖಾಮುಖಿ ಸಭೆ ಇದಾಗಿದೆ.
ನಾಗರಿಕ ಸಂಪರ್ಕ, ಹಂಚಿಕೆಯ ಮೌಲ್ಯಗಳು, ಪರಸ್ಪರ ಸೌಹಾರ್ದತೆ ಮತ್ತು ಮುಕ್ತ ಇಂಡೋ-ಪೆಸಿಫಿಕ್‌ಗೆ ಬದ್ಧತೆಯನ್ನು ಆಧರಿಸಿದ ಭಾರತ-ಜಪಾನ್ ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಪಾಲುದಾರಿಕೆಯ ಮಹತ್ವವನ್ನು ಉಭಯ ನಾಯಕರು ಪುನರುಚ್ಚರಿಸಿದರು. ಪ್ರಾದೇಶಿಕ ಮತ್ತು ಜಾಗತಿಕ ಶಾಂತಿ, ಸಮೃದ್ಧಿ ಮತ್ತು ಸ್ಥಿರತೆಗಾಗಿ ಭಾರತ-ಜಪಾನ್ ಪಾಲುದಾರಿಕೆಯನ್ನು ಗಾಢವಾಗಿಸುವುದಕ್ಕೆ ನಾಯಕರು ತಮ್ಮ ಬದ್ಧತೆಯ ಬಗ್ಗೆ ತಿಳಿಸಿದರು.

15ನೇ ಭಾರತ-ಜಪಾನ್ ವಾರ್ಷಿಕ ಶೃಂಗಸಭೆಯಲ್ಲಿ ದ್ವಿಪಕ್ಷೀಯ ಸಂಬಂಧಗಳಲ್ಲಿ ಕಂಡುಬಂದ ಸ್ಥಿರ ಪ್ರಗತಿಯನ್ನು ನಾಯಕರು ಒಪ್ಪಿಕೊಂಡರು ಮತ್ತು ರಕ್ಷಣೆ, ಭದ್ರತೆ, ವ್ಯಾಪಾರ ಮತ್ತು ಹೂಡಿಕೆ, ಎಸ್.ಎಂ.ಎ ಗಳು, ಕೃತಕ ಬುದ್ಧಿಮತ್ತೆ, ನಿರ್ಣಾಯಕ ಖನಿಜಗಳು, ಅರೆವಾಹಕಗಳು, ಮೂಲಸೌಕರ್ಯ ಅಭಿವೃದ್ಧಿ, ತಂತ್ರಜ್ಞಾನ ಮತ್ತು ನಾವೀನ್ಯತೆ ಮತ್ತು ಜನರಿಂದ ಜನರ ವಿನಿಮಯದಂತಹ ವ್ಯಾಪಕ ಶ್ರೇಣಿಯ ಕ್ಷೇತ್ರಗಳಲ್ಲಿ ಒಪ್ಪಿಕೊಂಡ ಫಲಿತಾಂಶಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸುವಂತೆ ಕರೆ ನೀಡಿದರು. ಕಾರ್ಯತಂತ್ರದ ಕ್ಷೇತ್ರಗಳಲ್ಲಿ ಭಾರತ ಮತ್ತು ಜಪಾನ್ ನಡುವಿನ ಸಹಯೋಗದ ಅವಕಾಶಗಳ ಬಗ್ಗೆ ಚರ್ಚಿಸಿದರು ಮತ್ತು ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ಫೆಬ್ರವರಿ 2026ರಲ್ಲಿ ಭಾರತ ಆಯೋಜಿಸಲಿರುವ AI ಶೃಂಗಸಭೆಗೆ ಪ್ರಧಾನಮಂತ್ರಿ ತಕೈಚಿ ಬೆಂಬಲವನ್ನು ವ್ಯಕ್ತಪಡಿಸಿದರು.
ಭಾರತ ಮತ್ತು ಜಪಾನ್ ಮೌಲ್ಯಯುತ ಪಾಲುದಾರರು ಮತ್ತು ವಿಶ್ವಾಸಾರ್ಹ ಸ್ನೇಹಿತರು ಎಂದು ಇಬ್ಬರೂ ನಾಯಕರು ಪುನರುಚ್ಚರಿಸಿದರು. ಪ್ರಾದೇಶಿಕ ಮತ್ತು ಜಾಗತಿಕ ಶಾಂತಿ, ಸಮೃದ್ಧಿ ಮತ್ತು ಸ್ಥಿರತೆಗೆ ಎರಡೂ ದೇಶಗಳ ನಡುವಿನ ಬಲವಾದ ಸಂಬಂಧಗಳು ಅತ್ಯಗತ್ಯ.
ನಾಯಕರು ಸಂಪರ್ಕದಲ್ಲಿರಲು ಮತ್ತು ಸಾಧ್ಯವಾದಷ್ಟು ಬೇಗ ಮತ್ತೆ ಭೇಟಿಯಾಗಿ ಮಾತುಕತೆ ನಡೆಸಲು ಒಪ್ಪಿಕೊಂಡರು.
Had a productive meeting with Prime Minister Sanae Takaichi of Japan. We discussed ways to add momentum to bilateral cooperation in areas such as innovation, defence, talent mobility and more. We are also looking to enhance trade ties between our nations. A strong India-Japan… pic.twitter.com/4UexmElSwQ
— Narendra Modi (@narendramodi) November 23, 2025


