ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ನ್ಯೂಜಿಲೆಂಡ್ ಪ್ರಧಾನಮಂತ್ರಿ ಶ್ರೀ ಕ್ರಿಸ್ಟೋಫರ್ ಲುಕ್ಸನ್ ಅವರು ಇಂದು ಲಾವೋ ಪಿಡಿಆರ್ ನ ವಿಯೆಂಟಿಯಾನ್‌ನಲ್ಲಿ ಆಸಿಯಾನ್-ಭಾರತ ಶೃಂಗಸಭೆಯ ನೇಪಥ್ಯದಲ್ಲಿ ಭೇಟಿಯಾದರು. ಉಭಯ ನಾಯಕರ ನಡುವಿನ ಮೊದಲ ಭೇಟಿ ಇದಾಗಿತ್ತು. 

ವ್ಯಾಪಾರ ಮತ್ತು ಹೂಡಿಕೆ, ರಕ್ಷಣೆ ಮತ್ತು ಭದ್ರತೆ, ನವೀಕರಿಸಬಹುದಾದ ಇಂಧನ, ಶಿಕ್ಷಣ, ಡೈರಿ, ಕೃಷಿ-ತಂತ್ರಜ್ಞಾನ, ಕ್ರೀಡೆ, ಪ್ರವಾಸೋದ್ಯಮ, ಬಾಹ್ಯಾಕಾಶ ಮತ್ತು ಜನರ ನಡುವಿನ ಬಾಂಧವ್ಯ ಸೇರಿದಂತೆ ವಿವಿಧ ವಲಯಗಳಲ್ಲಿ ದ್ವಿಪಕ್ಷೀಯ ಸಹಕಾರವನ್ನು ಬಲಪಡಿಸುವ ಮಾರ್ಗಗಳ ಕುರಿತು ಉಭಯ ದೇಶಗಳ ಪ್ರಧಾನಮಂತ್ರಿಗಳು ಚರ್ಚಿಸಿದರು.  ಆಗಾಗ್ಗೆ ನಡೆಸಿದ ಉನ್ನತ ಮಟ್ಟದ ಸಭೆಗಳು ದ್ವಿಪಕ್ಷೀಯ ಬಾಂಧವ್ಯಕ್ಕೆ ಬಲ ನೀಡಿವೆ ಎಂದು ಅವರು ತಿಳಿಸಿದರು. ಭಾರಿ ಯಶಸ್ಸು ಕಂಡಿದ್ದ ಇತ್ತೀಚಿನ ಭಾರತದ ರಾಷ್ಟ್ರಪತಿಗಳ ನ್ಯೂಜಿಲೆಂಡ್ ಭೇಟಿಯನ್ನು ಇದೇ  ವೇಳೆ ನಾಯಕರು ನೆನಪು ಮಾಡಿಕೊಂಡರು. 

ಅಂತಾರಾಷ್ಟ್ರೀಯ ಸೌರ ಮೈತ್ರಿಗೆ ಸೇರುವ ನ್ಯೂಜಿಲೆಂಡ್ ನಿರ್ಧಾರವನ್ನು ಪ್ರಧಾನಮಂತ್ರಿ ಸ್ವಾಗತಿಸಿದರು.

ಬಹುಪಕ್ಷೀಯ ವೇದಿಕೆಗಳಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸುವ ತಮ್ಮ ಬದ್ಧತೆಯನ್ನು ಹಾಗೂ ಭಾರತ-ನ್ಯೂಜಿಲೆಂಡ್ ಸಂಬಂಧವನ್ನು ಇನ್ನಷ್ಟು ಹೊಸ ಎತ್ತರಕ್ಕೆ ಕೊಂಡೊಯ್ಯುವ ತಮ್ಮ ಬದ್ಧತೆಯನ್ನು ಎರಡೂ ದೇಶಗಳ ಪ್ರಧಾನಮಂತ್ರಿಗಳು ಪುನರುಚ್ಚರಿಸಿದರು.

ಪರಸ್ಪರ ಅನುಕೂಲಕರ ದಿನಾಂಕಗಳಲ್ಲಿ ಭಾರತಕ್ಕೆ ಭೇಟಿ ನೀಡುವಂತೆ ಪ್ರಧಾನಿ ಲುಕ್ಸನ್ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನೀಡಿದ ಆಹ್ವಾನಕ್ಕೆ ಅವರು ಸಮ್ಮತಿ ನೀಡಿದ್ದಾರೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
PLI 2.0: India bets big on making more of the smartphone at home

Media Coverage

PLI 2.0: India bets big on making more of the smartphone at home
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 29 ಮೇ 2026
May 29, 2026

Every Sector, Every Citizen: How PM Modi’s Vision is Transforming India Across All Fronts