ಆಗಸ್ಟ್ 31, 2025 ರಂದು ಟಿಯಾಂಜಿನ್ ನಲ್ಲಿ ನಡೆದ ಶಾಂಘೈ ಸಹಕಾರ ಸಂಸ್ಥೆಯ (ಎಸ್.ಸಿ.ಒ.)  ನಾಯಕರ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾದ ಅಧ್ಯಕ್ಷರಾದ ಶ್ರೀ ಕ್ಸಿ ಜಿನ್ಪಿಂಗ್ ಅವರನ್ನು ಭೇಟಿಯಾದರು.

2024ರ ಅಕ್ಟೋಬರ್ ನಲ್ಲಿ ಕಜಾನ್ ನಲ್ಲಿ ಕಳೆದ ಬಾರಿ ನಡೆದ ಸಭೆಯ ನಂತರ ದ್ವಿಪಕ್ಷೀಯ ಸಂಬಂಧಗಳಲ್ಲಿನ ಸ್ಥಿರವಾದ ಪ್ರಗತಿಯನ್ನು ಇಬ್ಬರೂ ನಾಯಕರು ಸ್ವಾಗತಿಸಿದರು. ಎರಡೂ ದೇಶಗಳು ಅಭಿವೃದ್ಧಿ ಪಾಲುದಾರರೇ ಹೊರತು ಪ್ರತಿಸ್ಪರ್ಧಿಗಳಲ್ಲ ಮತ್ತು ಭಿನ್ನಾಭಿಪ್ರಾಯಗಳು ವಿವಾದಗಳಾಗಿ ಬದಲಾಗಬಾರದು ಎಂದು ಅವರು ಪುನರುಚ್ಚರಿಸಿದರು. ಭಾರತ ಮತ್ತು ಚೀನಾ ಪರಸ್ಪರ ಗೌರವ, ಪರಸ್ಪರ ಆಸಕ್ತಿ ಮತ್ತು ಪರಸ್ಪರ ಸೂಕ್ಷ್ಮತೆಯ ಆಧಾರದ ಮೇಲೆ ಸ್ಥಿರವಾದ ಸಂಬಂಧ ಮತ್ತು ಸಹಕಾರವನ್ನು ಹೊಂದಿವೆ ಎಂದು ಅವರು ಹೇಳಿದರು, ಇದು 21 ನೇ ಶತಮಾನದ ಪ್ರವೃತ್ತಿಗಳಿಗೆ ಅನುಗುಣವಾಗಿ ಎರಡೂ ದೇಶಗಳ ಮತ್ತು ಒಟ್ಟಾರೆಯಾಗಿ ಏಷ್ಯಾದ ಅಭಿವೃದ್ಧಿಗೆ ಅವಶ್ಯಕವಾಗಿದೆ.

 

 ದ್ವಿಪಕ್ಷೀಯ ಸಂಬಂಧಗಳ ನಿರಂತರ ಅಭಿವೃದ್ಧಿಗಾಗಿ ಗಡಿ ಪ್ರದೇಶಗಳಲ್ಲಿ ಶಾಂತಿ ಮತ್ತು ನೆಮ್ಮದಿಯ ಮಹತ್ವವನ್ನು ಪ್ರಧಾನಮಂತ್ರಿ ಅವರು ಒತ್ತಿ ಹೇಳಿದರು.  ಕಳೆದ ವರ್ಷ ಸೈನ್ಯವನ್ನು ಯಶಸ್ವಿಯಾಗಿ ಹಿಂತೆಗೆದಿರುವುದು  ಹಾಗು ಅಂದಿನಿಂದ ಗಡಿ ಪ್ರದೇಶಗಳಲ್ಲಿ ಶಾಂತಿ ಮತ್ತು ಸ್ಥಿರತೆಯ ಬಗ್ಗೆ ಇಬ್ಬರೂ ನಾಯಕರು ತೃಪ್ತಿಯನ್ನು ವ್ಯಕ್ತಪಡಿಸಿದರು. ದ್ವಿಪಕ್ಷೀಯ ಸಂಬಂಧಗಳು ಮತ್ತು ಎರಡೂ ದೇಶಗಳ ಜನರ ದೀರ್ಘಕಾಲೀನ ಹಿತಾಸಕ್ತಿಗಳು ಮುಖ್ಯವೆಂದು ಅವರು ಹೇಳಿದರು. ರಾಜಕೀಯ ದೃಷ್ಟಿಕೋನದಿಂದ ಗಡಿ ಸಮಸ್ಯೆಗೆ ನ್ಯಾಯಯುತ ಮತ್ತು ಪರಸ್ಪರ ಸ್ವೀಕಾರಾರ್ಹ ಪರಿಹಾರವನ್ನು ಕಂಡುಕೊಳ್ಳುವ ಬದ್ಧತೆಯನ್ನು ಅವರು ವ್ಯಕ್ತಪಡಿಸಿದರು. ಈ ತಿಂಗಳ ಆರಂಭದಲ್ಲಿ ಎರಡೂ ದೇಶಗಳ ವಿಶೇಷ ಪ್ರತಿನಿಧಿಗಳು ತಮ್ಮ ಮಾತುಕತೆಯಲ್ಲಿ ತೆಗೆದುಕೊಂಡ ಪ್ರಮುಖ ನಿರ್ಧಾರಗಳನ್ನು ಇಬ್ಬರೂ ನಾಯಕರು ಗುರುತಿಸಿದರು. ನಿರಂತರ ಪ್ರಯತ್ನಗಳನ್ನು ಬೆಂಬಲಿಸಲು ಅವರು ಒಪ್ಪಿಕೊಂಡರು.

ಕೈಲಾಸ ಮಾನಸ ಸರೋವರ ಯಾತ್ರೆ ಮತ್ತು ಪ್ರವಾಸಿ ವೀಸಾ ಪ್ರಕ್ರಿಯೆಯ ಪುನರಾರಂಭದೊಂದಿಗೆ, ನೇರ ವಿಮಾನಗಳು ಮತ್ತು ವೀಸಾ ಸೌಲಭ್ಯಗಳ ಮೂಲಕ ಜನರಿಂದ ಜನರಿಗೆ ಸಂಬಂಧಗಳನ್ನು ಬಲಪಡಿಸುವ ಅಗತ್ಯವನ್ನು ಇಬ್ಬರೂ ನಾಯಕರು ಗಮನಿಸಿದರು. ಆರ್ಥಿಕ ಮತ್ತು ವ್ಯಾಪಾರ ಸಂಬಂಧಗಳಲ್ಲಿ, ಜಾಗತಿಕ ವ್ಯಾಪಾರವನ್ನು ಬಲಪಡಿಸುವಲ್ಲಿ ಎರಡೂ ದೇಶಗಳ ಆರ್ಥಿಕತೆಗಳ ಪಾತ್ರವನ್ನು ಅವರು ಗುರುತಿಸಿದರು. ದ್ವಿಪಕ್ಷೀಯ ವ್ಯಾಪಾರ ಮತ್ತು ಹೂಡಿಕೆ ಸಂಬಂಧಗಳನ್ನು ವಿಸ್ತರಿಸಲು ಮತ್ತು ವ್ಯಾಪಾರ ಕೊರತೆಯನ್ನು ಕಡಿಮೆ ಮಾಡಲು ರಾಜಕೀಯವಾಗಿ ಮತ್ತು ಕಾರ್ಯತಂತ್ರವಾಗಿ ಪ್ರಯತ್ನಗಳನ್ನು ಮುಂದುವರಿಸುವ ಅಗತ್ಯವನ್ನು ಅವರು ಎತ್ತಿ ತೋರಿಸಿದರು.

 

ಭಾರತ ಮತ್ತು ಚೀನಾ ಕಾರ್ಯತಂತ್ರದ ಸ್ವಾಯತ್ತತೆಯನ್ನು ಅನುಸರಿಸುತ್ತವೆ ಮತ್ತು ಅವರ ಸಂಬಂಧಗಳನ್ನು ಮೂರನೇ ದೇಶದ ದೃಷ್ಟಿಕೋನದಿಂದ ನೋಡಬಾರದು ಎಂದು ಪ್ರಧಾನಮಂತ್ರಿ ಅವರು ಹೇಳಿದರು. ಭಯೋತ್ಪಾದನೆ ನಿಗ್ರಹ ಮತ್ತು ನ್ಯಾಯಯುತ ವ್ಯಾಪಾರದಂತಹ ಬಹುಪಕ್ಷೀಯ ವಿಷಯಗಳ ಬಗ್ಗೆ ಹಾಗೂ ದ್ವಿಪಕ್ಷೀಯ, ಪ್ರಾದೇಶಿಕ ಮತ್ತು ಜಾಗತಿಕ ಸವಾಲುಗಳ ಬಗ್ಗೆ ಸಾಮಾನ್ಯ ನೆಲೆಯನ್ನು ವಿಸ್ತರಿಸುವುದು ಅಗತ್ಯ ಎಂದು ಇಬ್ಬರೂ ನಾಯಕರು ಹೇಳಿದರು.

ಚೀನಾದ ಎಸ್.ಸಿ.ಒ. ಅಧ್ಯಕ್ಷತೆ ಮತ್ತು ಟಿಯಾಂಜಿನ್ ನಲ್ಲಿ ನಡೆಯುವ ಶೃಂಗಸಭೆಗೆ ಪ್ರಧಾನಮಂತ್ರಿ ಅವರು ಬೆಂಬಲ ವ್ಯಕ್ತಪಡಿಸಿದರು. 2026ರಲ್ಲಿ ಭಾರತ ಆಯೋಜಿಸಲಿರುವ ಬ್ರಿಕ್ಸ್ ಶೃಂಗಸಭೆಗೆ ಅವರು ಅಧ್ಯಕ್ಷ ಕ್ಸಿ ಅವರನ್ನು ಆಹ್ವಾನಿಸಿದರು. ಆಹ್ವಾನಕ್ಕಾಗಿ ಅಧ್ಯಕ್ಷ ಕ್ಸಿ ಅವರು ಪ್ರಧಾನಮಂತ್ರಿ ಅವರಿಗೆ ಧನ್ಯವಾದ ಅರ್ಪಿಸಿದರು ಮತ್ತು ಭಾರತದ ಬ್ರಿಕ್ಸ್ ಅಧ್ಯಕ್ಷತೆಗೆ ಚೀನಾದ ಬೆಂಬಲವನ್ನು ವ್ಯಕ್ತಪಡಿಸಿದರು.

 

ಪ್ರಧಾನಮಂತ್ರಿ ಅವರು ಚೀನಾ ಕಮ್ಯುನಿಸ್ಟ್ ಪಕ್ಷದ ಪಾಲಿಟ್ ಬ್ಯೂರೋದ ಸ್ಥಾಯಿ ಸಮಿತಿಯ ಸದಸ್ಯ ಶ್ರೀ ಕೈ ಕಿ ಅವರನ್ನು ಸಹ ಭೇಟಿಯಾದರು. ಪ್ರಧಾನಮಂತ್ರಿ ಅವರು ದ್ವಿಪಕ್ಷೀಯ ಸಂಬಂಧಗಳ ಬಗ್ಗೆ ತಮ್ಮ ದೃಷ್ಟಿಕೋನವನ್ನು ಶ್ರೀ ಕೈ ಕಿ ಅವರೊಂದಿಗೆ ಹಂಚಿಕೊಂಡರು ಮತ್ತು ದೃಷ್ಟಿಕೋನವನ್ನು ಸಫಲಗೊಳಿಸುವಲ್ಲಿ ಅವರ ಬೆಂಬಲವನ್ನು ಕೋರಿದರು. ಇಬ್ಬರು ನಾಯಕರ ನಡುವಿನ ಒಮ್ಮತಕ್ಕೆ ಅನುಗುಣವಾಗಿ ದ್ವಿಪಕ್ಷೀಯ ವಿನಿಮಯವನ್ನು ವಿಸ್ತರಿಸಲು ಮತ್ತು ಸಂಬಂಧಗಳನ್ನು ಮತ್ತಷ್ಟು ಅಭಿವೃದ್ಧಿಪಡಿಸಲು ಚೀನಾದ ಕಡೆಯವರು ಸಿದ್ಧರಿದ್ದಾರೆ ಎಂದು ಶ್ರೀ ಕೈ ಪುನರುಚ್ಚರಿಸಿದರು.

 

ಭಾಷಣದ ಪೂರ್ಣ ಪಠ್ಯವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India’s AI moment: Sarvam turns unicorn at $1.5 billion valuation

Media Coverage

India’s AI moment: Sarvam turns unicorn at $1.5 billion valuation
NM on the go

Nm on the go

Always be the first to hear from the PM. Get the App Now!
...
Today, the world does not suffer from a shortage of resources; it suffers from a shortage of trust: PM Modi at G7 Summit in Evian, France
June 16, 2026

राष्ट्रपति मैक्रों,
Your Excellencies,

नमस्कार!

G-7 समिट में हमारे गर्मजोशी भरे स्वागत के लिए मैं राष्ट्रपति मैक्रों का हार्दिक आभार व्यक्त करता हूँ।

Friends,

आज का विश्व पहले से कहीं अधिक inter-connected और inter-dependent है। किसी भी देश की ऊर्जा सुरक्षा, खाद्य सुरक्षा, स्वास्थ्य सुरक्षा, साइबर सुरक्षा और आर्थिक समृद्धि केवल उसकी सीमाओं के भीतर तय नहीं होती। Mobility, data, capital, technology, ये सभी हमें आपस में जोड़ते हैं।

ऐसे समय में Partnerships का महत्व स्वाभाविक रूप से बढ़ जाता है। लेकिन साझेदारियाँ तभी सफल होती हैं जब उनके केंद्र में विश्वास हो। आज सबसे महत्वपूर्ण Strategic Asset कोई mineral, technology या market नहीं, बल्कि आपसी विश्वास है।

विश्वास कि टेक्नॉलजी और supply chains को हथियार के रूप में नहीं, global good के लिए इस्तेमाल किया जाएगा। विश्वास कि विकास के अवसर कुछ देशों तक सीमित नहीं रहेंगे। विश्वास कि वैश्विक संस्थान सभी देशों की आकांक्षाओं को पूरा करने में सक्षम होंगे।

Friends,

पिछली सदी में मानवता को दो विश्व युद्धों से गुज़रना पड़ा। अनेक बलिदानों के बाद विश्व समुदाय ने शांति, स्थिरता और समृद्धि की ओर बढ़ने के लिए व्यवस्थाएं विकसित की। इन व्यवस्थाओं का आधार भी trust ही था।

किन्तु अनेक दशकों से, अनेक पीढ़ियों के योगदान से बनाए गए विश्वास को आज चोट पहुँच रही है। कोविड ने हमें आईना दिखाया कि trust और solidarity के दावे कितने खोखले थे।

Today the world does not suffer from a shortage of resources; it suffers from a shortage of trust. And the future of our partnerships depends on building this trust.

अमेरिका के राष्ट्रपति रोनल्ड रेगन ने कहा था: Trust but Verify. यह आज के समय में भी प्रासंगिक है। भावी पीढ़ियों के प्रति हमारा दायित्व है कि हम नए युग के अनुरूप trusted rules based order का निर्माण करें।

Friends,

भारत ने सदैव विश्व को एक परिवार के रूप में देखा है। हमारे सभी प्रयास “सर्वजन हिताय, सर्वजन सुखाय” यानि, welfare and happiness for all के मूल सिद्धांत पर आधारित रहे हैं।

भारत का अनुभव दिखाता है कि विकास सबसे अधिक प्रभावी तब होता है जब वह लोगों की आकांक्षाओं से जुड़ा हो। यही सिद्धांत हमारी अंतरराष्ट्रीय साझेदारियों का भी आधार है। इसी सोच के साथ भारत ने International Solar Alliance, Coalition for Disaster Resilient Infrastructure, ग्लोबल बायोफ्यूल्स एलायंस, Mission LiFE, और “एक पेड़ माँ के नाम” जैसी वैश्विक पहलों को आगे बढ़ाया है।

संकट के समय भारत ने First Responder के रूप में सभी देशों की सहायता करना अपना दायित्व समझा है। कोविड महामारी के दौरान भारत ने डेढ़ सौ से अधिक देशों को दवाइयाँ और vaccines उपलब्ध कराईं।

श्रीलंका में cyclone हो, अफगानिस्तान में भूकंप हो, मोज़ाम्बिक में floods हों, या क्यूबा और जमैका में hurricane, भारत ने सदैव "Humanity First" के सिद्धांत पर कार्य किया है। हमारी विकास साझेदारियाँ भी इसी भावना को प्रतिबिंबित करती हैं। हमारे प्रयास पार्टनर देशों में capacity building और कौशल विकास पर केन्द्रित रहे हैं।

भारत का मानना है: The true test of partnership is not what we build for others, but what we enable others to build for themselves.

Friends,

आज ग्लोबल साउथ की विश्व समुदाय से बहुत उम्मीदें हैं। किन्तु उनकी अपेक्षा सहारे की नहीं, साथ की है। वे वैश्विक विकास के लाभार्थी नहीं, उसके भागीदार बनना चाहते हैं।

हमें donor–recipient की सोच से आगे बढ़कर, equal पार्टनर्स के रूप में काम करना होगा। उनके पास-पास नहीं, साथ-साथ चलना होगा। साझेदारी को dependency के बजाय, dignity से जोड़ना होगा। इन प्रयासों से हम भावी पीढ़ियों के सतत विकास की मजबूत नींव रख सकेंगे।

Friends,

अंतरराष्ट्रीय साझेदारियाँ और वैश्विक एकजुटता तभी सार्थक बन सकती हैं, जब हम साझा चुनौतियों का मिलकर समाधान करें। भारत का दृढ विश्वास है कि विश्व के विभिन्न हिस्सों में चल रहे तनावों और युद्धों का स्थायी समाधान dialogue, diplomacy और अंतरराष्ट्रीय सहयोग के मार्ग से ही संभव है।

हम west asia में शांति प्रयासों में हुई प्रगति का स्वागत करते हैं। इस संघर्ष से west asia में हमारे मित्र देशों को जान-माल का नुकसान झेलना पड़ा है। होर्मुज़ स्ट्रेट में maritime ट्रेड में आई बाधा के कारण पूरे विश्व की अर्थव्यवस्था को नुकसान पहुंचा। भारत के कई civilians को जान गंवानी पड़ी। Global maritime ट्रेड के माध्यम से सभी देशों को आपस में जोड़ने वाले नाविकों की सुरक्षा हमारा दायित्व है। हमें यह सुनिश्चित करना होगा कि समुद्री मार्ग सुरक्षित रहें, और Seafarers बिना भय के अपना कार्य कर सकें।

Friends,

भारत इन विषयों पर सभी पार्टनर्स के साथ मिलकर काम करने के लिए पूरी तरह से तैयार है।

बहुत-बहुत धन्यवाद।