ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಿಡ್ನಿಯಲ್ಲಿ ಆಸ್ಟ್ರೇಲಿಯಾದ ಉನ್ನತ ಕಂಪನಿಗಳ ಸಿಇಒಗಳೊಂದಿಗೆ ವ್ಯಾಪಾರ ದುಂಡುಮೇಜಿನ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಉಕ್ಕು, ಬ್ಯಾಂಕಿಂಗ್, ಇಂಧನ, ಗಣಿಗಾರಿಕೆ ಮತ್ತು ಐಟಿ ಸೇರಿದಂತೆ ವಿವಿಧ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಮುಖ ಕಂಪನಿಗಳ ಸಿಇಒಗಳು ಇದರಲ್ಲಿ ಭಾಗವಹಿಸಿದರು. ಆಸ್ಟ್ರೇಲಿಯಾದ ಕೆಲವು ಪ್ರಮುಖ ವಿಶ್ವವಿದ್ಯಾನಿಲಯಗಳ ಉಪಕುಲಪತಿಗಳೂ ದುಂಡುಮೇಜಿನ ಸಭೆಯಲ್ಲಿ ಭಾಗವಹಿಸಿದ್ದರು.

ವ್ಯವಹಾರವನ್ನು ಸುಲಭಗೊಳಿಸಲು ಮತ್ತು ಆರ್ಥಿಕ ಬೆಳವಣಿಗೆಯನ್ನು ವೃದ್ಧಿಸಲು ಸರ್ಕಾರವು ಪ್ರಾರಂಭಿಸಿದ ಹಲವಾರು ಆರ್ಥಿಕ ಸುಧಾರಣೆಗಳು ಮತ್ತು ಉಪಕ್ರಮಗಳನ್ನು ಪ್ರಧಾನಮಂತ್ರಿ ವಿವರಿಸಿದರು. ಇವುಗಳಲ್ಲಿ, ಮೂಲಸೌಕರ್ಯ ಸಂಪರ್ಕ ಯೋಜನೆಗಳ ಸಮಗ್ರ ವಿಧಾನಕ್ಕಾಗಿ ಮಿಷನ್ ಗತಿ ಶಕ್ತಿ; ಜನ್ ಧನ್-ಆಧಾರ್-ಮೊಬೈಲ್ ಟ್ರಿನಿಟಿ; ರಾಷ್ಟ್ರೀಯ ಶಿಕ್ಷಣ ನೀತಿ; ಹೈಡ್ರೋಜನ್ ಮಿಷನ್ 2050; ಪಿಎಲ್‌ಐ ಯೋಜನೆ; ಬಾಹ್ಯಾಕಾಶ ಮತ್ತು ಜಿಯೋಸ್ಪೇಷಿಯಲ್ ವಲಯದಲ್ಲಿ  ಖಾಸಗಿ ಹೂಡಿಕೆಯನ್ನು ಮುಕ್ತಗೊಳಿಸುವುದು; ವೈದ್ಯಕೀಯ ಸಾಧನಗಳ ತಯಾರಿಕೆಯ ಹೊಸ ನೀತಿ; ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆ, ಇತ್ಯಾದಿಗಳು ಸೇರಿದವು.

ಡಿಜಿಟಲ್ ಮೂಲಸೌಕರ್ಯ, ಐಟಿ, ಫಿನ್‌ಟೆಕ್, ಟೆಲಿಕಾಂ, ಸೆಮಿಕಂಡಕ್ಟರ್‌ಗಳು, ಬಾಹ್ಯಾಕಾಶ, ಹಸಿರು ಹೈಡ್ರೋಜನ್ ಸೇರಿದಂತೆ ನವೀಕರಿಸಬಹುದಾದ ಇಂಧನ, ಶಿಕ್ಷಣ, ಫಾರ್ಮಾ, ಆರೋಗ್ಯ ಸೇರಿದಂತೆ ವೈದ್ಯಕೀಯ ಸಾಧನಗಳ ತಯಾರಿಕೆ, ಗಣಿಗಾರಿಕೆ ಸೇರಿದಂತೆ ಪ್ರಮುಖ  ಖನಿಜಗಳು, ಜವಳಿ, ಕೃಷಿ ಮತ್ತು ಆಹಾರ ಸಂಸ್ಕರಣೆ ವಲಯಗಳಲ್ಲಿ ಭಾರತ ಒದಗಿಸುವ ಹೂಡಿಕೆ ಅವಕಾಶಗಳ ಲಾಭ ಪಡೆಯುವಂತೆ ಪ್ರಧಾನಮಂತ್ರಿ ಸಿಇಒಗಳನ್ನು ಆಹ್ವಾನಿಸಿದರು.

ತಮ್ಮ ಭಾರತೀಯ ಸಹವರ್ತಿಗಳೊಂದಿಗೆ ಪರಸ್ಪರ ಲಾಭದಾಯಕ ಪಾಲುದಾರಿಕೆಯನ್ನು ರೂಪಿಸುವಂತೆ ಸಿಇಒಗಳನ್ನು ಪ್ರಧಾನಮಂತ್ರಿ ಉತ್ತೇಜಿಸಿದರು.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Jumbo Indian contingent comprising 768 athletes, support staff and officials for Asian Games

Media Coverage

Jumbo Indian contingent comprising 768 athletes, support staff and officials for Asian Games
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 4 ಸೆಪ್ಟೆಂಬರ್ 2026
September 04, 2026

Make in India, Power India, Play for India: Multi-Sector Momentum Under PM Modi’s Leadership