ಶೇರ್
 
Comments
"ಹಳೆಯ ಸವಾಲುಗಳನ್ನು ಬಿಟ್ಟು, ಹೊಸ ಸಾಧ್ಯತೆಗಳ ಸಂಪೂರ್ಣ ಪ್ರಯೋಜನ ಪಡೆಯಲು ಇದು ಸಕಾಲ"
ಅಭಿವೃದ್ಧಿಯ ತ್ವರಿತಗತಿಗಾಗಿ, ನಾವು ಹೊಸ ವಿಧಾನದೊಂದಿಗೆ, ಹೊಸ ಆಲೋಚನೆಯೊಂದಿಗೆ ಶ್ರಮಿಸಬೇಕು".
"ಜಮ್ಮು ಮತ್ತು ಕಾಶ್ಮೀರದ ಪ್ರವಾಸೋದ್ಯಮ ಕ್ಷೇತ್ರ ಮೂಲಸೌಕರ್ಯ ಅಭಿವೃದ್ಧಿ ಮತ್ತು ವರ್ಧಿತ ಸಂಪರ್ಕದಿಂದಾಗಿ ಉತ್ತೇಜನ ಪಡೆದಿದೆ"
"ಅಭಿವೃದ್ಧಿಯ ಪ್ರಯೋಜನಗಳನ್ನು ಎಲ್ಲ ವರ್ಗಗಳು ಮತ್ತು ನಾಗರಿಕರಿಗೆ ಸಮಾನವಾಗಿ ಒದಗಿಸಲು ನಾವು ಬದ್ಧರಾಗಿದ್ದೇವೆ"
"ಜಮ್ಮು ಮತ್ತು ಕಾಶ್ಮೀರದ ಜನರು ಭ್ರಷ್ಟಾಚಾರವನ್ನು ದ್ವೇಷಿಸುತ್ತಾರೆ, ನಾನು ಸದಾ ಅವರ ನೋವನ್ನು ಅರಿತಿದ್ದೇನೆ"
"ಜಮ್ಮು ಮತ್ತು ಕಾಶ್ಮೀರವು ಪ್ರತಿಯೊಬ್ಬ ಭಾರತೀಯನ ಹೆಮ್ಮೆಯಾಗಿದೆ. ನಾವು ಒಟ್ಟಾಗಿ ಜಮ್ಮು ಮತ್ತು ಕಾಶ್ಮೀರವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಬೇಕಾಗಿದೆ"

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಮ್ಮು ಮತ್ತು ಕಾಶ್ಮೀರ ರೋಜ್ಗಾರ್ ಮೇಳವನ್ನುದ್ದೇಶಿಸಿ ವಿಡಿಯೋ ಸಂದೇಶದ ಮೂಲಕ ಭಾಷಣ ಮಾಡಿದರು.

ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಇಂದು ಜಮ್ಮು ಮತ್ತು ಕಾಶ್ಮೀರದ ಪ್ರತಿಭಾನ್ವಿತ ಯುವಕರಿಗೆ ಮಹತ್ವದ ದಿನ ಎಂದು ಬಣ್ಣಿಸಿದರು. ಜಮ್ಮು ಮತ್ತು ಕಾಶ್ಮೀರದ 20 ವಿವಿಧ ಸ್ಥಳಗಳಲ್ಲಿ ಸರ್ಕಾರಿ ನೌಕರಿ ಮಾಡಲು ನೇಮಕಾತಿ ಪತ್ರಗಳನ್ನು ಪಡೆದ ಎಲ್ಲಾ ಮೂರು ಸಾವಿರ ಯುವಜನರನ್ನು ಅವರು ಅಭಿನಂದಿಸಿದರು. ಈ ಯುವಜನರು ಪಿಡಬ್ಲ್ಯೂಡಿ, ಆರೋಗ್ಯ ಇಲಾಖೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಪಶುಸಂಗೋಪನೆ, ಜಲಶಕ್ತಿ ಮತ್ತು ಶಿಕ್ಷಣ-ಸಂಸ್ಕೃತಿಯಂತಹ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸಲು ಅವಕಾಶಗಳನ್ನು ಪಡೆಯುತ್ತಾರೆ ಎಂದು ಅವರು ಮಾಹಿತಿ ನೀಡಿದರು. ಮುಂಬರುವ ದಿನಗಳಲ್ಲಿ ಇತರ ಇಲಾಖೆಗಳಲ್ಲಿ 700 ಕ್ಕೂ  ಹೆಚ್ಚು ನೇಮಕಾತಿ ಪತ್ರಗಳನ್ನು ನೀಡಲು ಸಿದ್ಧತೆಗಳು ಭರದಿಂದ ಸಾಗಿವೆ ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು.

ಜಮ್ಮು ಮತ್ತು ಕಾಶ್ಮೀರದ ಇತಿಹಾಸದಲ್ಲಿ 21 ನೇ ಶತಮಾನದ ಈ ದಶಕದ ಪ್ರಾಮುಖ್ಯದ ಬಗ್ಗೆ ಬೆಳಕು ಚೆಲ್ಲಿದ ಪ್ರಧಾನಮಂತ್ರಿಯವರು, "ಹಳೆಯ ಸವಾಲುಗಳನ್ನು ಬಿಟ್ಟು, ಹೊಸ ಸಾಧ್ಯತೆಗಳ ಸಂಪೂರ್ಣ ಪ್ರಯೋಜನವನ್ನು ಪಡೆದುಕೊಳ್ಳಲು ಇದು ಸುಸಮಯ ಎಂದರು. ಜಮ್ಮು ಮತ್ತು ಕಾಶ್ಮೀರದ ಯುವಕರು ತಮ್ಮ ಪ್ರದೇಶದ ಮತ್ತು ಜನರ ಅಭಿವೃದ್ಧಿಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಮುಂದೆ ಬರುತ್ತಿರುವುದು ನನಗೆ ಸಂತೋಷ ತಂದಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಅಭಿವೃದ್ಧಿಯ ಹೊಸ ಗಾಥೆಯನ್ನು ಬರೆಯುವವರು ನಮ್ಮ ಯುವಕರೇ ಎಂದು ಒತ್ತಿ ಹೇಳಿದ ಶ್ರೀ ಮೋದಿ, ಆ ಮೂಲಕ ಕೇಂದ್ರಾಡಳಿತ ಪ್ರದೇಶದಲ್ಲಿ ರೋಜ್ಗಾರ್ ಮೇಳದ ಸಂಯೋಜನೆ ಅತ್ಯಂತ ವಿಶೇಷವಾಗಿಸುತ್ತದೆ ಎಂದು ಒತ್ತಿ ಹೇಳಿದರು.

ಹೊಸ, ಪಾರದರ್ಶಕ ಮತ್ತು ಸೂಕ್ಷ್ಮ ಆಡಳಿತದ ಮೂಲಕ ಜಮ್ಮು ಮತ್ತು ಕಾಶ್ಮೀರದ ನಿರಂತರ ಅಭಿವೃದ್ಧಿಯ ಬಗ್ಗೆ ಪ್ರಸ್ತಾಪಿಸಿದ ಪ್ರಧಾನಮಂತ್ರಿಯವರು, "ಅಭಿವೃದ್ಧಿಯ ತ್ವರಿತ ಗತಿಯಿಗಾಗಿ, ನಾವು ಹೊಸ ವಿಧಾನದೊಂದಿಗೆ, ಹೊಸ ಆಲೋಚನೆಯೊಂದಿಗೆ ಶ್ರಮಿಸಬೇಕಾಗಿದೆ" ಎಂದು ಹೇಳಿದರು. 2019 ರಿಂದ ಸುಮಾರು ಮೂವತ್ತು ಸಾವಿರ ಸರ್ಕಾರಿ ಹುದ್ದೆಗಳ ನೇಮಕಾತಿಗಳನ್ನು ಮಾಡಲಾಗಿದೆ, ಅದರಲ್ಲಿ ಕಳೆದ ಒಂದೂವರೆ ವರ್ಷದಲ್ಲಿ ಇಪ್ಪತ್ತು ಸಾವಿರ ನೇಮಕಾತಿ ಪತ್ರಗಳನ್ನು ಹಸ್ತಾಂತರಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು. ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಶ್ರೀ ಮನೋಜ್ ಸಿನ್ಹಾ ಮತ್ತು ಅಲ್ಲಿನ ಆಡಳಿತದ ಕಾರ್ಯವನ್ನು ಪ್ರಧಾನಮಂತ್ರಿಯವರು  ಶ್ಲಾಘಿಸಿದರು. 'ಸಾಮರ್ಥ್ಯದ ಮೂಲಕ ಉದ್ಯೋಗ' ಎಂಬ ಮಂತ್ರವು ಜಮ್ಮು ಮತ್ತು ಕಾಶ್ಮೀರದ ಯುವಕರಲ್ಲಿ ಹೊಸ ವಿಶ್ವಾಸವನ್ನು ತುಂಬುತ್ತಿದೆ" ಎಂದು ಶ್ರೀ ಮೋದಿ ಹೇಳಿದರು.

ಉದ್ಯೋಗ ಮತ್ತು ಸ್ವಉದ್ಯೋಗವನ್ನು ಉತ್ತೇಜಿಸಲು ಕಳೆದ 8 ವರ್ಷಗಳಲ್ಲಿ ಕೇಂದ್ರ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಬೆಳಕು ಚೆಲ್ಲಿದ ಪ್ರಧಾನಮಂತ್ರಿಯವರು, ಅಕ್ಟೋಬರ್ 22 ರಿಂದ ದೇಶದ ವಿವಿಧ ಭಾಗಗಳಲ್ಲಿ ಆಯೋಜಿಸಲಾಗುತ್ತಿರುವ 'ರೋಜ್ಗಾರ್ ಮೇಳ' ಅದರ ಒಂದು ಭಾಗವಾಗಿದೆ ಎಂದರು. "ಈ ಅಭಿಯಾನದ ಅಡಿಯಲ್ಲಿ, "ಮೊದಲ ಹಂತದಲ್ಲಿ ಮುಂದಿನ ಕೆಲವು ತಿಂಗಳುಗಳಲ್ಲಿ ಕೇಂದ್ರ ಸರ್ಕಾರವು 10 ಲಕ್ಷಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ನೀಡಲಿದೆ" ಎಂದು ಪ್ರಧಾನಮಂತ್ರಿ ಹೇಳಿದರು. ಉದ್ಯೋಗವನ್ನು ಹೆಚ್ಚಿಸಲು ಸರ್ಕಾರವು ಜಮ್ಮು ಮತ್ತು ಕಾಶ್ಮೀರದಲ್ಲಿನ ವ್ಯಾಪಾರ ವಾತಾವರಣದ ವ್ಯಾಪ್ತಿಯನ್ನು ವಿಸ್ತರಿಸಿದೆ ಎಂದು ಅವರು ಮಾಹಿತಿ ನೀಡಿದರು. ಹೊಸ ಕೈಗಾರಿಕಾ ನೀತಿ ಮತ್ತು ವ್ಯಾಪಾರ ಸುಧಾರಣಾ ಕ್ರಿಯಾ ಯೋಜನೆ ಸುಗಮ ವ್ಯಾಪಾರಕ್ಕೆ ದಾರಿ ಮಾಡಿಕೊಟ್ಟಿದೆ ಮತ್ತು ಇದು ಇಲ್ಲಿ ಹೂಡಿಕೆಗೆ ಪ್ರಚಂಡ ಉತ್ತೇಜನ ನೀಡಿದೆ ಎಂದು ಪ್ರಧಾನಮಂತ್ರಿ ಅವರು ಹೇಳಿದರು. "ಅಭಿವೃದ್ಧಿ-ಸಂಬಂಧಿತ ಯೋಜನೆಗಳಲ್ಲಿ ಕೆಲಸ ಮಾಡುತ್ತಿರುವ ವೇಗವು ಇಲ್ಲಿನ ಇಡೀ ಆರ್ಥಿಕತೆಯನ್ನು ಪರಿವರ್ತಿಸುತ್ತದೆ" ಎಂದು ಪ್ರಧಾನಮಂತ್ರಿ ಹೇಳಿದರು. ಅವರು ರೈಲುಗಳಿಂದ ಹಿಡಿದು ಅಂತಾರಾಷ್ಟ್ರೀಯ ವಿಮಾನಗಳವರೆಗೆ ಕಾಶ್ಮೀರಕ್ಕೆ ಸಂಪರ್ಕವನ್ನು ಹೆಚ್ಚಿಸುವ ಯೋಜನೆಗಳ ಉದಾಹರಣೆಗಳನ್ನು ನೀಡಿದರು. ಶ್ರೀನಗರದಿಂದ ಶಾರ್ಜಾಗೆ ಈಗಾಗಲೇ ಅಂತಾರಾಷ್ಟ್ರೀಯ ವಿಮಾನಗಳು ಪ್ರಾರಂಭವಾಗಿವೆ ಎಂದು ಪ್ರಧಾನಮಂತ್ರಿ ಅವರು ಗಮನ ಸೆಳೆದರು. ಜಮ್ಮು ಮತ್ತು ಕಾಶ್ಮೀರದ ಸೇಬು ಬೆಳೆಗಾರರು ತಮ್ಮ ಉತ್ಪನ್ನಗಳನ್ನು ಈ ಪ್ರದೇಶದ ಹೊರಗೆ ಕಳುಹಿಸುವುದು ಈಗ ಸುಲಭವಾಗಿರುವುದರಿಂದ ಇಲ್ಲಿನ ರೈತರು ಹೆಚ್ಚಿನ ಸಂಪರ್ಕದಿಂದ ಹೆಚ್ಚಿನ ಪ್ರಯೋಜನವನ್ನು ಪಡೆದಿದ್ದಾರೆ ಎಂದು ಅವರು ಹೇಳಿದರು. ಡ್ರೋನ್ ಗಳ ಮೂಲಕ ಸಾರಿಗೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸರ್ಕಾರ ಕಾರ್ಯೋನ್ಮುಖವಾಗಿದೆ ಎಂದು ಪ್ರಧಾನಮಂತ್ರಿ ಗಮನಸೆಳೆದರು. 

ಜಮ್ಮು ಮತ್ತು ಕಾಶ್ಮೀರವು ಪ್ರವಾಸಿಗರ ಸಂಖ್ಯೆಯಲ್ಲಿ ದಾಖಲೆಯ ಹೆಚ್ಚಳಕ್ಕೆ ಸಾಕ್ಷಿಯಾಗಿರುವ ಬಗ್ಗೆ ಬೆಳಕು ಚೆಲ್ಲಿದ ಪ್ರಧಾನಮಂತ್ರಿಯವರು, ಕೇಂದ್ರಾಡಳಿತ ಪ್ರದೇಶದ ಪ್ರವಾಸೋದ್ಯಮ ಕ್ಷೇತ್ರವು ಮೂಲಸೌಲಭ್ಯಗಳ ಅಭಿವೃದ್ಧಿ ಮತ್ತು ಹೆಚ್ಚಿದ ಸಂಪರ್ಕದಿಂದಾಗಿ ಉತ್ತೇಜನವನ್ನು ಪಡೆದಿದೆ ಎಂದು ಉಲ್ಲೇಖಿಸಿದರು. "ಸರ್ಕಾರದ ಯೋಜನೆಗಳ ಪ್ರಯೋಜನಗಳು ಯಾವುದೇ ತಾರತಮ್ಯವಿಲ್ಲದೆ ಸಮಾಜದ ಪ್ರತಿಯೊಂದು ವರ್ಗಕ್ಕೂ ತಲುಪಿಸುವುದು ತಮ್ಮ ಪ್ರಯತ್ನವಾಗಿದೆ" ಎಂದು ಪ್ರಧಾನಮಂತ್ರಿ ಹೇಳಿದರು. ಅಭಿವೃದ್ಧಿಯ ಸಮಾನ ಪ್ರಯೋಜನಗಳನ್ನು ಎಲ್ಲಾ ವರ್ಗಗಳು ಮತ್ತು ನಾಗರಿಕರಿಗೆ ನೀಡಲು ಸರ್ಕಾರ ಬದ್ಧವಾಗಿದೆ ಎಂದು ಅವರು ಹೇಳಿದರು. 2 ಹೊಸ ಏಮ್ಸ್, 7 ಹೊಸ ವೈದ್ಯಕೀಯ ಕಾಲೇಜುಗಳು, 2 ರಾಜ್ಯ ಕ್ಯಾನ್ಸರ್ ಸಂಸ್ಥೆಗಳು ಮತ್ತು 15 ನರ್ಸಿಂಗ್ ಕಾಲೇಜುಗಳನ್ನು ತೆರೆಯುವ ಮೂಲಕ ಜಮ್ಮು ಮತ್ತು ಕಾಶ್ಮೀರದಲ್ಲಿ ಆರೋಗ್ಯ ಮತ್ತು ಶಿಕ್ಷಣ ಮೂಲಸೌಕರ್ಯವನ್ನು ಬಲಪಡಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಪ್ರಧಾನಮಂತ್ರಿ ಮಾಹಿತಿ ನೀಡಿದರು.

ಜಮ್ಮು ಮತ್ತು ಕಾಶ್ಮೀರದ ಜನರು ಸದಾ ಪಾರದರ್ಶಕತೆಗೆ ಹೇಗೆ ಒತ್ತು ನೀಡಿದ್ದಾರೆ ಮತ್ತು ಶ್ಲಾಘಿಸಿದ್ದಾರೆ ಎಂಬುದರ ಬಗ್ಗೆ ಮಾತನಾಡಿದ ಪ್ರಧಾನಮಂತ್ರಿಯವರು, ಸರ್ಕಾರಿ ಸೇವೆಗಳಿಗೆ ಬರುವ ಯುವಕರು ಇದಕ್ಕೆ ಆದ್ಯತೆ ನೀಡುವಂತೆ ಮನವಿ ಮಾಡಿದರು. "ಈ ಹಿಂದೆ ನಾನು ಜಮ್ಮು ಮತ್ತು ಕಾಶ್ಮೀರದ ಜನರನ್ನು ಭೇಟಿ ಮಾಡಿದಾಗಲೆಲ್ಲಾ, ಅವರ ನೋವನ್ನು ಅನುಭವಿಸುತ್ತಿದ್ದೆ" ಎಂದು ಪ್ರಧಾನಮಂತ್ರಿ ಸ್ಮರಿಸಿದರು. ಇದು ವ್ಯವಸ್ಥೆಯಲ್ಲಿರುವ ಭ್ರಷ್ಟಾಚಾರದ ನೋವು. ಜಮ್ಮು ಮತ್ತು ಕಾಶ್ಮೀರದ ಜನರು ಭ್ರಷ್ಟಾಚಾರವನ್ನು ದ್ವೇಷಿಸುತ್ತಾರೆ ಎಂದರು. ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಶ್ರೀ ಮನೋಜ್ ಸಿನ್ಹಾ ಮತ್ತು ಅವರ ತಂಡವು ಭ್ರಷ್ಟಾಚಾರದ ಕೆಡುಕುಗಳ ಮೂಲೋತ್ಪಾಟನೆಗೆ ಮಾಡುತ್ತಿರುವ ಗಮನಾರ್ಹ ಕಾರ್ಯಕ್ಕಾಗಿ ಪ್ರಧಾನಮಂತ್ರಿಯವರು ಶ್ಲಾಘನೆ ವ್ಯಕ್ತಪಡಿಸಿದರು.

ಭಾಷಣವನ್ನು ಮುಕ್ತಾಯಗೊಳಿಸುವಾಗ ಪ್ರಧಾನಮಂತ್ರಿಯವರು, ಇಂದು ನೇಮಕಾತಿ ಪತ್ರವನ್ನು ಪಡೆಯುತ್ತಿರುವ ಯುವಜನರು ತಮ್ಮ ಜವಾಬ್ದಾರಿಗಳನ್ನು ಸಂಪೂರ್ಣ ಶ್ರದ್ಧೆ ಮತ್ತು ಸಮರ್ಪಣಾ ಭಾವದಿಂದ ಪೂರೈಸುತ್ತಾರೆ ಎಂಬ ಭರವಸೆ ವ್ಯಕ್ತಪಡಿಸಿದರು. "ಜಮ್ಮು ಮತ್ತು ಕಾಶ್ಮೀರವು ಪ್ರತಿಯೊಬ್ಬ ಭಾರತೀಯನ ಹೆಮ್ಮೆಯಾಗಿದೆ. ನಾವೆಲ್ಲರೂ ಒಟ್ಟಾಗಿ ಜಮ್ಮು ಮತ್ತು ಕಾಶ್ಮೀರವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಬೇಕಾಗಿದೆ. ನಾವು 2047 ರ ಹೊತ್ತಿಗೆ ಅಭಿವೃದ್ಧಿ ಹೊಂದಿದ ಭಾರತದ ಬೃಹತ್ ಗುರಿಯನ್ನು ಹೊಂದಿದ್ದೇವೆ ಮತ್ತು ಅದನ್ನು ಪೂರೈಸಲು ನಾವು ಬಲವಾದ ಸಂಕಲ್ಪದೊಂದಿಗೆ ರಾಷ್ಟ್ರ ನಿರ್ಮಾಣದಲ್ಲಿ ತೊಡಗಿಸಿಕೊಳ್ಳಬೇಕು", ಎಂದು ಪ್ರಧಾನಮಂತ್ರಿ ಮಾತು ಮುಗಿಸಿದರು.

ಭಾಷಣದ ಪೂರ್ಣ ಪಠ್ಯವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Explore More
76ನೇ ಸ್ವಾತಂತ್ರ್ಯೋತ್ಸವ ದಿನದಂದು ಕೆಂಪು ಕೋಟೆಯ ಮೇಲಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಭಾಷಾಂತರ

ಜನಪ್ರಿಯ ಭಾಷಣಗಳು

76ನೇ ಸ್ವಾತಂತ್ರ್ಯೋತ್ಸವ ದಿನದಂದು ಕೆಂಪು ಕೋಟೆಯ ಮೇಲಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಭಾಷಾಂತರ
World TB Day: How India plans to achieve its target of eliminating TB by 2025

Media Coverage

World TB Day: How India plans to achieve its target of eliminating TB by 2025
...

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 24 ಮಾರ್ಚ್ 2023
March 24, 2023
ಶೇರ್
 
Comments

Citizens Shower Their Love and Blessings on PM Modi During his Visit to Varanasi

Modi Government's Result-oriented Approach Fuelling India’s Growth Across Diverse Sectors