ಘನತೆವೆತ್ತ ಸನ್ಮಾನ್ಯ ಅಧ್ಯಕ್ಷರೆ, ಉಭಯ ರಾಷ್ಟ್ರಗಳ ಗಣ್ಯ ಪ್ರತಿನಿಧಿಗಳೆ, ಮಾಧ್ಯಮ ಮಿತ್ರರೆ,

ನಮಸ್ಕಾರ!

ಕಲಿಮೇರಾ!

ಮೊದಲನೆಯದಾಗಿ, ಗೌರವಾನ್ವಿತ ಅಧ್ಯಕ್ಷರ ಆತ್ಮೀಯ ಸ್ವಾಗತ ಮತ್ತು ಔದಾರ್ಯಯುತ ಆತಿಥ್ಯಕ್ಕಾಗಿ ನಾನು ನನ್ನ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸುತ್ತೇನೆ. ನಿನ್ನೆ ನಾನು ಸೈಪ್ರಸ್ ನೆಲಕ್ಕೆ ಕಾಲಿಟ್ಟ ಕ್ಷಣದಿಂದ, ಅಧ್ಯಕ್ಷರು ಮತ್ತು ಈ ದೇಶದ ಜನರು ತೋರಿಸಿದ ಆತ್ಮೀಯತೆ ಮತ್ತು ವಾತ್ಸಲ್ಯವು ನಿಜವಾಗಿಯೂ ನನ್ನ ಹೃದಯವನ್ನು ಮುಟ್ಟಿದೆ.

ಸ್ವಲ್ಪ ಸಮಯದ ಹಿಂದೆ, ನನಗೆ ಸೈಪ್ರಸ್ ಪ್ರತಿಷ್ಠಿತ ಗೌರವ ಪುರಸ್ಕಾರ ನೀಡಿತು. ಈ ಪ್ರಶಸ್ತಿ ನನ್ನೊಬ್ಬನದ್ದಲ್ಲ - ಇದು 140 ಕೋಟಿ ಭಾರತೀಯರಿಗೆ ಸಂದ ಗೌರವವಾಗಿದೆ. ಇದು ಭಾರತ ಮತ್ತು ಸೈಪ್ರಸ್ ನಡುವಿನ ಶಾಶ್ವತ ಸ್ನೇಹವನ್ನು ಸಂಕೇತಿಸುತ್ತದೆ. ಈ ಗೌರವಕ್ಕಾಗಿ ನಾನು ಮತ್ತೊಮ್ಮೆ ನನ್ನ ಪ್ರಾಮಾಣಿಕ ಧನ್ಯವಾದಗಳನ್ನು ಅರ್ಪಿಸುತ್ತೇನೆ.

ಸ್ನೇಹಿತರೆ,

ಸೈಪ್ರಸ್ ಜೊತೆಗಿನ ನಮ್ಮ ಸಂಬಂಧಗಳಿಗೆ ನಾವು ಹೆಚ್ಚಿನ ಪ್ರಾಮುಖ್ಯತೆ ನೀಡುತ್ತೇವೆ. ಪ್ರಜಾಪ್ರಭುತ್ವ ಮತ್ತು ಕಾನೂನು ನಿಯಮದಂತಹ ಮೌಲ್ಯಗಳಿಗೆ ನಮ್ಮ ಹಂಚಿಕೆಯ ಬದ್ಧತೆಯು ನಮ್ಮ ಪಾಲುದಾರಿಕೆಗೆ ಭದ್ರ ಬುನಾದಿ ಹಾಕಿದೆ. ಭಾರತ ಮತ್ತು ಸೈಪ್ರಸ್ ನಡುವಿನ ಸ್ನೇಹವು ಕೆಲವು ಸಂದರ್ಭಗಳಿಂದ ಹೊರಹೊಮ್ಮಿದ ಸ್ನೇಹವಲ್ಲ, ಅಥವಾ ಅದು ಗಡಿಗಳಿಂದ ಸೀಮಿತವಾಗಿಲ್ಲ.

ಇದು ಕಾಲದ ಪರೀಕ್ಷೆಯನ್ನು ಮತ್ತೆ ಮತ್ತೆ ಎದುರಿಸಿದೆ. ಪ್ರತಿ ಯುಗದಲ್ಲೂ, ನಾವು ಸಹಕಾರ, ಗೌರವ ಮತ್ತು ಪರಸ್ಪರ ಬೆಂಬಲದ ಮನೋಭಾವವನ್ನು ಎತ್ತಿಹಿಡಿದಿದ್ದೇವೆ. ನಾವು ಪರಸ್ಪರರ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸುತ್ತೇವೆ.

ಸ್ನೇಹಿತರೆ,

ಭಾರತೀಯ ಪ್ರಧಾನ ಮಂತ್ರಿಯೊಬ್ಬರು 2 ದಶಕಗಳಲ್ಲಿ ಸೈಪ್ರಸ್‌ಗೆ ನೀಡುತ್ತಿರುವ ಮೊದಲ ಭೇಟಿ ಇದಾಗಿದೆ. ಇದು ನಮ್ಮ ದ್ವಿಪಕ್ಷೀಯ ಸಂಬಂಧಗಳಲ್ಲಿ ಹೊಸ ಅಧ್ಯಾಯ ಬರೆಯಲು ಒಂದು ಸುವರ್ಣಾವಕಾಶ ಒದಗಿಸುತ್ತದೆ. ಇಂದು ಗೌರವಾನ್ವಿತ ಅಧ್ಯಕ್ಷರು ಮತ್ತು ನಾನು ನಮ್ಮ ಪಾಲುದಾರಿಕೆಯ ಎಲ್ಲಾ ಅಂಶಗಳ ಕುರಿತು ವ್ಯಾಪಕ ಚರ್ಚೆಗಳನ್ನು ನಡೆಸಿದ್ದೇವೆ.

ಸೈಪ್ರಸ್‌ನ “ವಿಷನ್ 2035” ಮತ್ತು “ವಿಕಸಿತ ಭಾರತ 2047”ನ ನಮ್ಮ ದೃಷ್ಟಿಕೋನದ ನಡುವೆ ಅನೇಕ ಹೋಲಿಕೆಗಳಿವೆ. ಆದ್ದರಿಂದ, ನಮ್ಮ ಹಂಚಿಕೆಯ ಭವಿಷ್ಯವನ್ನು ರೂಪಿಸಲು ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ. ನಮ್ಮ ಪಾಲುದಾರಿಕೆಗೆ ಕಾರ್ಯತಂತ್ರ ನಿರ್ದೇಶನಗಳನ್ನು ಒದಗಿಸಲು, ಮುಂದಿನ 5 ವರ್ಷಗಳವರೆಗೆ ನಾವು ಸಂಕೀರ್ಣ ಮಾರ್ಗಸೂಚಿ ಅಭಿವೃದ್ಧಿಪಡಿಸುತ್ತೇವೆ.

ನಮ್ಮ ರಕ್ಷಣಾ ಮತ್ತು ಭದ್ರತಾ ಸಹಕಾರವನ್ನು ಮತ್ತಷ್ಟು ಬಲಪಡಿಸಲು, ದ್ವಿಪಕ್ಷೀಯ ರಕ್ಷಣಾ ಸಹಕಾರ ಕಾರ್ಯಕ್ರಮವು ರಕ್ಷಣಾ ಉದ್ಯಮ ಸಹಭಾಗಿತ್ವದ ಮೇಲೆ ಗಮನ ಕೇಂದ್ರೀಕರಿಸುತ್ತದೆ. ಸೈಬರ್ ಮತ್ತು ಕಡಲ ಭದ್ರತೆ ಕುರಿತು ಪ್ರತ್ಯೇಕ ಸಂವಾದಗಳನ್ನು ಪ್ರಾರಂಭಿಸಲಾಗುವುದು.

ಗಡಿಯಾಚೆಗಿನ ಭಯೋತ್ಪಾದನೆ ವಿರುದ್ಧದ ಭಾರತದ ಹೋರಾಟಕ್ಕೆ ಸೈಪ್ರಸ್‌ನ ಸ್ಥಿರ ಬೆಂಬಲಕ್ಕಾಗಿ ನಾವು ತುಂಬಾ ಕೃತಜ್ಞರಾಗಿರುತ್ತೇವೆ. ಭಯೋತ್ಪಾದನೆ, ಮಾದಕವಸ್ತು ಕಳ್ಳಸಾಗಣೆ ಮತ್ತು ಶಸ್ತ್ರಾಸ್ತ್ರ ಕಳ್ಳಸಾಗಣೆಯನ್ನು ಎದುರಿಸಲು, ನಮ್ಮ ಆಯಾ ಸಂಸ್ಥೆಗಳ ನಡುವೆ ನೈಜ-ಸಮಯದ ಮಾಹಿತಿ ವಿನಿಮಯಕ್ಕಾಗಿ ಒಂದು ಕಾರ್ಯವಿಧಾನವನ್ನು ಸ್ಥಾಪಿಸಲಾಗುವುದು. ದ್ವಿಪಕ್ಷೀಯ ವ್ಯಾಪಾರ ಮತ್ತು ಹೂಡಿಕೆ ಹೆಚ್ಚಿಸುವಲ್ಲಿ ಅಪಾರ ಸಾಮರ್ಥ್ಯವಿದೆ ಎಂದು ನಾವಿಬ್ಬರೂ ಒಪ್ಪಿದ್ದೇವೆ.

ನಿನ್ನೆ ಗೌರವಾನ್ವಿತ ಅಧ್ಯಕ್ಷರೊಂದಿಗಿನ ನನ್ನ ಸಂವಾದ ಸಮಯದಲ್ಲಿ, ನಮ್ಮ ಆರ್ಥಿಕ ಸಂಬಂಧಗಳ ಕುರಿತು ವ್ಯಾಪಾರ ಸಮುದಾಯದಲ್ಲಿ ಹೆಚ್ಚಿನ ಉತ್ಸಾಹ ಮತ್ತು ಶಕ್ತಿಯನ್ನು ನಾನು ಅನುಭವಿಸಿದೆ. ವರ್ಷದ ಅಂತ್ಯದ ವೇಳೆಗೆ ಪರಸ್ಪರ ಪ್ರಯೋಜನಕಾರಿ ಭಾರತ-ಯುರೋಪ್ ಒಕ್ಕೂಟ ಮುಕ್ತ ವ್ಯಾಪಾರ ಒಪ್ಪಂದವನ್ನು ಅಂತಿಮಗೊಳಿಸುವತ್ತ ನಾವು ಕೆಲಸ ಮಾಡುತ್ತಿದ್ದೇವೆ.

ಈ ವರ್ಷ, "ಭಾರತ-ಸೈಪ್ರಸ್-ಗ್ರೀಸ್ ವ್ಯಾಪಾರ ಮತ್ತು ಹೂಡಿಕೆ ಮಂಡಳಿ"ಯನ್ನು ಸಹ ಪ್ರಾರಂಭಿಸಲಾಗಿದೆ. ಇಂತಹ ಉಪಕ್ರಮಗಳು ನಮ್ಮ ದೇಶಗಳ ನಡುವಿನ ದ್ವಿಪಕ್ಷೀಯ ವ್ಯಾಪಾರ ಮತ್ತು ಹೂಡಿಕೆಯನ್ನು ಹೆಚ್ಚಿಸುತ್ತವೆ.

ತಂತ್ರಜ್ಞಾನ, ನಾವೀನ್ಯತೆ, ಆರೋಗ್ಯ, ಕೃಷಿ, ನವೀಕರಿಸಬಹುದಾದ ಇಂಧನ ಮತ್ತು ಹವಾಮಾನ ನ್ಯಾಯದಂತಹ ಕ್ಷೇತ್ರಗಳಲ್ಲಿ ಸಹಕಾರ ವಿಸ್ತರಿಸುವ ಕುರಿತು ನಾವು ವಿವರವಾದ ಚರ್ಚೆಗಳನ್ನು ನಡೆಸಿದ್ದೇವೆ. ಸೈಪ್ರಸ್‌ನಲ್ಲಿ ಯೋಗ ಮತ್ತು ಆಯುರ್ವೇದದ ಹೆಚ್ಚುತ್ತಿರುವ ಜನಪ್ರಿಯತೆಯಿಂದ ನಾವು ಪ್ರೋತ್ಸಾಹಿತರಾಗಿದ್ದೇವೆ.

ಭಾರತೀಯ ಪ್ರವಾಸಿಗರಿಗೆ ಸೈಪ್ರಸ್ ಕೂಡ ಆದ್ಯತೆಯ ತಾಣವಾಗಿದೆ. ಅವರ ಪ್ರಯಾಣವನ್ನು ಸುಗಮಗೊಳಿಸಲು ನೇರ ವಾಯು ಸಂಪರ್ಕ ಕಲ್ಪಿಸಲು ನಾವು ಕೆಲಸ ಮಾಡುತ್ತೇವೆ. ಮೊಬಿಲಿಟಿ ಒಪ್ಪಂದವನ್ನು ತ್ವರಿತವಾಗಿ ಅಂತಿಮಗೊಳಿಸಲು ನಾವು ನಿರ್ಧರಿಸಿದ್ದೇವೆ.

ಸ್ನೇಹಿತರೆ,

ಐರೋಪ್ಯ ಒಕ್ಕೂಟದೊಳಗೆ, ಸೈಪ್ರಸ್ ನಮ್ಮ ವಿಶ್ವಾಸಾರ್ಹ ಪಾಲುದಾರನಾಗಿದೆ. ಮುಂದಿನ ವರ್ಷ ಐರೋಪ್ಯ ಒಕ್ಕೂಟದ ಮುಂಬರುವ ಅಧ್ಯಕ್ಷತೆ ವಹಿಸಲಿರುವ ಸೈಪ್ರಸ್‌ಗೆ ನಮ್ಮ ಶುಭಾಶಯಗಳನ್ನು ತಿಳಿಸುತ್ತೇವೆ. ನಿಮ್ಮ ನಾಯಕತ್ವದಲ್ಲಿ, ಭಾರತ-ಐರೋಪ್ಯ ಒಕ್ಕೂಟ ಸಂಬಂಧಗಳು ಹೊಸ ಎತ್ತರವನ್ನು ತಲುಪುತ್ತವೆ ಎಂಬ ವಿಶ್ವಾಸ ನಮಗಿದೆ.

ವಿಶ್ವಸಂಸ್ಥೆಯನ್ನು ಹೆಚ್ಚು ಪ್ರತಿನಿಧಿಸುವಂತೆ ಮಾಡಲು ಅದನ್ನು ಸುಧಾರಿಸುವ ಅಗತ್ಯತೆಯ ಬಗ್ಗೆ ಎರಡೂ ರಾಷ್ಟ್ರಗಳು ಸಾಮಾನ್ಯ ಅಭಿಪ್ರಾಯಗಳನ್ನು ಹಂಚಿಕೊಂಡಿವೆ. ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಕಾಯಂ ಸದಸ್ಯತ್ವ ಪಡೆಯುವ ಭಾರತದ  ಇಚ್ಛೆಗೆ ಬೆಂಬಲ ನೀಡಿದ್ದಕ್ಕಾಗಿ ನಾವು ಸೈಪ್ರಸ್‌ಗೆ ಕೃತಜ್ಞರಾಗಿರುತ್ತೇವೆ.

ಪಶ್ಚಿಮ ಏಷ್ಯಾ ಮತ್ತು ಯುರೋಪಿನಲ್ಲಿ ನಡೆಯುತ್ತಿರುವ ಸಂಘರ್ಷಗಳ ಬಗ್ಗೆ ನಾವು ಕಳವಳ ವ್ಯಕ್ತಪಡಿಸಿದ್ದೇವೆ. ಈ ಸಂಘರ್ಷಗಳ ಪ್ರತಿಕೂಲ ಪರಿಣಾಮವು ಆಯಾ ಪ್ರದೇಶಗಳಿಗೆ ಮಾತ್ರ ಸೀಮಿತವಾಗಿಲ್ಲ, ಇದು ಯುದ್ಧದ ಯುಗವಲ್ಲ ಎಂದು ನಾವಿಬ್ಬರೂ ಒಪ್ಪಿದ್ದೇವೆ.

ಸಂವಾದ ಮತ್ತು ಸ್ಥಿರತೆಯ ಮರುಸ್ಥಾಪನೆ ಮಾನವತೆಯ ಕರೆಗಳಾಗಿವೆ. ಮೆಡಿಟರೇನಿಯನ್ ಪ್ರದೇಶದೊಂದಿಗೆ ಸಂಪರ್ಕ ಹೆಚ್ಚಿಸುವ ಬಗ್ಗೆಯೂ ನಾವು ಚರ್ಚಿಸಿದ್ದೇವೆ. ಭಾರತ-ಮಧ್ಯಪ್ರಾಚ್ಯ-ಯುರೋಪ್ ಆರ್ಥಿಕ ಕಾರಿಡಾರ್ ಈ ಪ್ರದೇಶದಲ್ಲಿ ಶಾಂತಿ ಮತ್ತು ಸಮೃದ್ಧಿಗೆ ದಾರಿ ಮಾಡಿಕೊಡುತ್ತದೆ ಎಂದು ನಾವು ಒಪ್ಪಿದ್ದೇವೆ.

ಗೌರವಾನ್ವಿತ ಅಧ್ಯಕ್ಷರೆ,

ಭಾರತಕ್ಕೆ ಭೇಟಿ ನೀಡುವಂತೆ ನಾನು ನಿಮಗೆ ಹೃತ್ಪೂರ್ವಕ ಆಹ್ವಾನ ನೀಡುತ್ತೇನೆ. ನಿಮ್ಮನ್ನು ಆದಷ್ಟು ಬೇಗ ಭಾರತಕ್ಕೆ ಸ್ವಾಗತಿಸಲು ನಾನು ಎದುರು ನೋಡುತ್ತಿದ್ದೇನೆ.

ಮತ್ತೊಮ್ಮೆ, ಅಸಾಧಾರಣ ಆತಿಥ್ಯ ಮತ್ತು ಗೌರವ ನೀಡಿದ್ದಕ್ಕಾಗಿ ನಾನು ನಿಮಗೆ ಹೃತ್ಪೂರ್ವಕವಾಗಿ ಧನ್ಯವಾದಗಳನ್ನು ಸಲ್ಲಿಸುತ್ತೇನೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India’s AI moment: Sarvam turns unicorn at $1.5 billion valuation

Media Coverage

India’s AI moment: Sarvam turns unicorn at $1.5 billion valuation
NM on the go

Nm on the go

Always be the first to hear from the PM. Get the App Now!
...
Today, the world does not suffer from a shortage of resources; it suffers from a shortage of trust: PM Modi at G7 Summit in Evian, France
June 16, 2026

राष्ट्रपति मैक्रों,
Your Excellencies,

नमस्कार!

G-7 समिट में हमारे गर्मजोशी भरे स्वागत के लिए मैं राष्ट्रपति मैक्रों का हार्दिक आभार व्यक्त करता हूँ।

Friends,

आज का विश्व पहले से कहीं अधिक inter-connected और inter-dependent है। किसी भी देश की ऊर्जा सुरक्षा, खाद्य सुरक्षा, स्वास्थ्य सुरक्षा, साइबर सुरक्षा और आर्थिक समृद्धि केवल उसकी सीमाओं के भीतर तय नहीं होती। Mobility, data, capital, technology, ये सभी हमें आपस में जोड़ते हैं।

ऐसे समय में Partnerships का महत्व स्वाभाविक रूप से बढ़ जाता है। लेकिन साझेदारियाँ तभी सफल होती हैं जब उनके केंद्र में विश्वास हो। आज सबसे महत्वपूर्ण Strategic Asset कोई mineral, technology या market नहीं, बल्कि आपसी विश्वास है।

विश्वास कि टेक्नॉलजी और supply chains को हथियार के रूप में नहीं, global good के लिए इस्तेमाल किया जाएगा। विश्वास कि विकास के अवसर कुछ देशों तक सीमित नहीं रहेंगे। विश्वास कि वैश्विक संस्थान सभी देशों की आकांक्षाओं को पूरा करने में सक्षम होंगे।

Friends,

पिछली सदी में मानवता को दो विश्व युद्धों से गुज़रना पड़ा। अनेक बलिदानों के बाद विश्व समुदाय ने शांति, स्थिरता और समृद्धि की ओर बढ़ने के लिए व्यवस्थाएं विकसित की। इन व्यवस्थाओं का आधार भी trust ही था।

किन्तु अनेक दशकों से, अनेक पीढ़ियों के योगदान से बनाए गए विश्वास को आज चोट पहुँच रही है। कोविड ने हमें आईना दिखाया कि trust और solidarity के दावे कितने खोखले थे।

Today the world does not suffer from a shortage of resources; it suffers from a shortage of trust. And the future of our partnerships depends on building this trust.

अमेरिका के राष्ट्रपति रोनल्ड रेगन ने कहा था: Trust but Verify. यह आज के समय में भी प्रासंगिक है। भावी पीढ़ियों के प्रति हमारा दायित्व है कि हम नए युग के अनुरूप trusted rules based order का निर्माण करें।

Friends,

भारत ने सदैव विश्व को एक परिवार के रूप में देखा है। हमारे सभी प्रयास “सर्वजन हिताय, सर्वजन सुखाय” यानि, welfare and happiness for all के मूल सिद्धांत पर आधारित रहे हैं।

भारत का अनुभव दिखाता है कि विकास सबसे अधिक प्रभावी तब होता है जब वह लोगों की आकांक्षाओं से जुड़ा हो। यही सिद्धांत हमारी अंतरराष्ट्रीय साझेदारियों का भी आधार है। इसी सोच के साथ भारत ने International Solar Alliance, Coalition for Disaster Resilient Infrastructure, ग्लोबल बायोफ्यूल्स एलायंस, Mission LiFE, और “एक पेड़ माँ के नाम” जैसी वैश्विक पहलों को आगे बढ़ाया है।

संकट के समय भारत ने First Responder के रूप में सभी देशों की सहायता करना अपना दायित्व समझा है। कोविड महामारी के दौरान भारत ने डेढ़ सौ से अधिक देशों को दवाइयाँ और vaccines उपलब्ध कराईं।

श्रीलंका में cyclone हो, अफगानिस्तान में भूकंप हो, मोज़ाम्बिक में floods हों, या क्यूबा और जमैका में hurricane, भारत ने सदैव "Humanity First" के सिद्धांत पर कार्य किया है। हमारी विकास साझेदारियाँ भी इसी भावना को प्रतिबिंबित करती हैं। हमारे प्रयास पार्टनर देशों में capacity building और कौशल विकास पर केन्द्रित रहे हैं।

भारत का मानना है: The true test of partnership is not what we build for others, but what we enable others to build for themselves.

Friends,

आज ग्लोबल साउथ की विश्व समुदाय से बहुत उम्मीदें हैं। किन्तु उनकी अपेक्षा सहारे की नहीं, साथ की है। वे वैश्विक विकास के लाभार्थी नहीं, उसके भागीदार बनना चाहते हैं।

हमें donor–recipient की सोच से आगे बढ़कर, equal पार्टनर्स के रूप में काम करना होगा। उनके पास-पास नहीं, साथ-साथ चलना होगा। साझेदारी को dependency के बजाय, dignity से जोड़ना होगा। इन प्रयासों से हम भावी पीढ़ियों के सतत विकास की मजबूत नींव रख सकेंगे।

Friends,

अंतरराष्ट्रीय साझेदारियाँ और वैश्विक एकजुटता तभी सार्थक बन सकती हैं, जब हम साझा चुनौतियों का मिलकर समाधान करें। भारत का दृढ विश्वास है कि विश्व के विभिन्न हिस्सों में चल रहे तनावों और युद्धों का स्थायी समाधान dialogue, diplomacy और अंतरराष्ट्रीय सहयोग के मार्ग से ही संभव है।

हम west asia में शांति प्रयासों में हुई प्रगति का स्वागत करते हैं। इस संघर्ष से west asia में हमारे मित्र देशों को जान-माल का नुकसान झेलना पड़ा है। होर्मुज़ स्ट्रेट में maritime ट्रेड में आई बाधा के कारण पूरे विश्व की अर्थव्यवस्था को नुकसान पहुंचा। भारत के कई civilians को जान गंवानी पड़ी। Global maritime ट्रेड के माध्यम से सभी देशों को आपस में जोड़ने वाले नाविकों की सुरक्षा हमारा दायित्व है। हमें यह सुनिश्चित करना होगा कि समुद्री मार्ग सुरक्षित रहें, और Seafarers बिना भय के अपना कार्य कर सकें।

Friends,

भारत इन विषयों पर सभी पार्टनर्स के साथ मिलकर काम करने के लिए पूरी तरह से तैयार है।

बहुत-बहुत धन्यवाद।