ಇಂದು ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಯವರು ಪಿಎಂ ಸ್ಕೂಲ್ಸ್ ಫಾರ್ ರೈಸಿಂಗ್ ಇಂಡಿಯಾ (ಪಿಎಂ- ಶ್ರೀ) ಯೋಜನೆ ಅಡಿಯಲ್ಲಿ ಯೋಜನೆಯಡಿಯಲ್ಲಿ 14,500 ಶಾಲೆಗಳ ಅಭಿವೃದ್ಧಿ ಮತ್ತು ಮೇಲ್ದರ್ಜೆಗೇರಿಸುವಿಕೆಯನ್ನು ಘೋಷಿಸಿದ್ದಾರೆ.


ಪಿಎಂ- ಶ್ರೀ ಶಾಲೆಗಳು ಶಿಕ್ಷಣವನ್ನು ನೀಡುವ ಆಧುನಿಕ, ಪರಿವರ್ತನೆಯ ಮತ್ತು ಸಮಗ್ರ ವಿಧಾನವನ್ನು ಹೊಂದಿರುತ್ತದೆ. ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿರುವಂತೆ  ಪಿಎಂ-ಶ್ರೀ ಶಾಲೆಗಳು ಭಾರತದಾದ್ಯಂತ ಲಕ್ಷಗಟ್ಟಲೆ ವಿದ್ಯಾರ್ಥಿಗಳಿಗೆ ಮತ್ತಷ್ಟು ಪ್ರಯೋಜನವನ್ನು ನೀಡುತ್ತವೆ ಎಂಬುದು ನನಗೆ ಖಚಿತವಾಗಿದೆ ಎಂದು ಶ್ರೀ ಮೋದಿ ಹೇಳಿದರು.

ಪ್ರಧಾನಮಂತ್ರಿಯವರು ಹೀಗೆ ಟ್ವೀಟ್ ಮಾಡಿದ್ದಾರೆ;

"ಇಂದು, #ಶಿಕ್ಷಕರ ದಿನದಂದು #TeachersDay  ನಾನು ಹೊಸ ಉಪಕ್ರಮವನ್ನು ಘೋಷಿಸಲು ಸಂತೋಷಪಡುತ್ತೇನೆ - ಪಿಎಂ ಸ್ಕೂಲ್ಸ್ ಫಾರ್ ರೈಸಿಂಗ್ ಇಂಡಿಯಾ (ಪಿಎಂ - ಶ್ರೀ) (PM-SHRI) ಯೋಜನೆಯಡಿಯಲ್ಲಿ ಭಾರತದಾದ್ಯಂತ 14,500 ಶಾಲೆಗಳ ಅಭಿವೃದ್ಧಿ ಮತ್ತು ಮೇಲ್ದರ್ಜೆಗೇರಿಸುವಿಕೆ. ರಾಷ್ಟ್ರೀಯ ಶಿಕ್ಷಣ ನೀತಿ 2020 ರ ದೃಷ್ಟಿಗೆ ಅನುಗುಣವಾಗಿ  ಸಂಪೂರ್ಣವಾಗಿರುವ ಮಾದರಿ ಶಾಲೆಗಳಾಗುತ್ತವೆ."

" ಪಿಎಂ - ಶ್ರೀ ಶಾಲೆಗಳು ಶಿಕ್ಷಣವನ್ನು ನೀಡುವ ಆಧುನಿಕ, ಪರಿವರ್ತನೆಯ ಮತ್ತು ಸಮಗ್ರ ವಿಧಾನವನ್ನು ಹೊಂದಿರುತ್ತವೆ. ಅನ್ವೇಷಣೆ-ಆಧಾರಿತ, ವಿದ್ಯಾರ್ಥಿ-ಕೇಂದ್ರಿತ ಬೋಧನೆಯ ಮಾರ್ಗಕ್ಕೆ ಒತ್ತು ನೀಡಲಾಗುವುದು. ಇತ್ತೀಚಿನ ತಂತ್ರಜ್ಞಾನ, ಸ್ಮಾರ್ಟ್ ತರಗತಿಗಳು, ಕ್ರೀಡೆಗಳು ಮತ್ತು ಹೆಚ್ಚಿನವುಗಳನ್ನು ಒಳಗೊಂಡಂತೆ ಆಧುನಿಕ ಮೂಲಸೌಕರ್ಯಗಳ ಮೇಲೆ ಕೇಂದ್ರೀಕರಿಸಲಾಗುತ್ತದೆ. "

"ಇತ್ತೀಚಿನ ವರ್ಷಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯು ಶಿಕ್ಷಣ ಕ್ಷೇತ್ರವನ್ನು ಮಾರ್ಪಡಿಸಿದೆ. ಪಿಎಂ- ಶ್ರೀ ಶಾಲೆಗಳು ಶಾಲೆಗಳು ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿರುವಂತೆ  ಭಾರತದಾದ್ಯಂತ ಲಕ್ಷಗಟ್ಟಲೆ ವಿದ್ಯಾರ್ಥಿಗಳಿಗೆ ಮತ್ತಷ್ಟು ಪ್ರಯೋಜನವನ್ನು ನೀಡುತ್ತವೆ ಎಂಬುದು ನನಗೆ ಖಚಿತವಾಗಿದೆ "

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
The entrepreneurs building a self-reliant India

Media Coverage

The entrepreneurs building a self-reliant India
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 21 ಜುಲೈ 2026
July 21, 2026

Self-Reliance Is No Longer a Slogan — It’s Happening Across Engines, UPI, Vaccines & FDI Under the Leadership of PM Modi