ಹುತಾತ್ಮ ಭಗತ್ ಸಿಂಗ್ ಅವರ ಜನ್ಮ ದಿನದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ. ಹುತಾತ್ಮ ಭಗತ್ ಸಿಂಗ್ ಅವರ ಚಿಂತನೆಗಳನ್ನೊಳಗೊಂಡ ವಿಡಿಯೋವನ್ನು ಶ್ರೀ ನರೇಂದ್ರ ಮೋದಿ ಅವರು ಹಂಚಿಕೊಂಡಿದ್ದಾರೆ.
ತಮ್ಮ ಟ್ವೀಟ್ ಸಂದೇಶದಲ್ಲಿ ಪ್ರಧಾನಮಂತ್ರಿ ಅವರು,
“ಹುತಾತ್ಮ ಭಗತ್ ಸಿಂಗ್ ಜಯಂತಿ ಹಿನ್ನೆಲೆಯಲ್ಲಿ ಗೌರವನಮನಗಳು. ಅವರ ಧೈರ್ಯ ನಮ್ಮನ್ನು ಬಹುವಾಗಿ ಪ್ರೇರೇಪಿಸುತ್ತದೆ. ನಮ್ಮ ರಾಷ್ಟ್ರಕ್ಕಾಗಿ ಅವರ ದೃಷ್ಟಿಕೋನವನ್ನು ಸಾಕಾರಗೊಳಿಸುವ ನಮ್ಮ ಬದ್ಧತೆಯನ್ನು ಪುನುರುಚ್ಚರಿಸುತ್ತೇವೆ” ಎಂದು ಹೇಳಿದ್ದಾರೆ.
I bow to Shaheed Bhagat Singh Ji on his Jayanti. His courage motivates us greatly. We reiterate our commitment to realise his vision for our nation. pic.twitter.com/0mxyWEcqEo
— Narendra Modi (@narendramodi) September 28, 2022


