ಹ್ಯಾಂಗ್ ಝೌನಲ್ಲಿ ನಡೆಯುತ್ತಿರುವ 2022 ರ ಏಷ್ಯನ್ ಗೇಮ್ಸ್ ನಲ್ಲಿ 10 ಮೀಟರ್ ಏರ್ ಪಿಸ್ತೂಲ್ ಮಹಿಳೆಯರ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದಿದ್ದಕ್ಕಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಶಾ ಸಿಂಗ್ ಅವರನ್ನು ಅಭಿನಂದಿಸಿದ್ದಾರೆ.
ಪ್ರಧಾನ ಮಂತ್ರಿಯವರು ಸಾಮಾಜಿಕ ಜಾಲತಾಣ X ನಲ್ಲಿ ಹೀಗೆ ಬರೆದಿದ್ದಾರೆ:
“10 ಮೀಟರ್ ಏರ್ ಪಿಸ್ತೂಲ್ ಮಹಿಳಾ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದಿದ್ದಕ್ಕಾಗಿ ಇಶಾ ಸಿಂಗ್ ಬಗ್ಗೆ ಹೆಮ್ಮೆಯಿದೆ! ಏಷ್ಯನ್ ಗೇಮ್ಸ್‌ನಲ್ಲಿ ಆಕೆಯ ಯಶಸ್ಸಿಗೆ ಆಕೆಯ ಬದ್ಧತೆ, ಅವಿರತ ತರಬೇತಿ ಮತ್ತು ಅಚಲ ನಿರ್ಧಾರವೇ ಕಾರಣ.”
Proud of @singhesha10 for winning a Silver Medal in the 10m Air Pistol Women’s event! Her success at the Asian Games is due to her commitment, focused training and unwavering determination. pic.twitter.com/txNd7SHhPe
— Narendra Modi (@narendramodi) September 29, 2023


