ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ ಸರ್ಕಾರದ ಮಾಜಿ ಸಚಿವ ಶ್ರೀ ಭಾಗುಭಾಯಿ ಪಟೇಲ್ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕ ಸೇವಾ ಕ್ಷೇತ್ರದಲ್ಲಿಶ್ರೀ ಪಟೇಲರ ಕೊಡುಗೆಯನ್ನು ಸದಾ ಸ್ಮರಿಸಲಾಗುವುದು ಎಂದು ಪ್ರಧಾನಮಂತ್ರಿ ಅವರು ಹೇಳಿದರು.
ಪ್ರಧಾನಮಂತ್ರಿ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದಾರೆ:
‘‘ ಗುಜರಾತ್ ಸರ್ಕಾರದ ಮಾಜಿ ಸಚಿವ ಶ್ರೀ ಭಾಗುಭಾಯ್ ಪಟೇಲ್ ಅವರ ನಿಧನದಿಂದ ನಾವು ದುಃಖಿತರಾಗಿದ್ದೇವೆ. ಸಾರ್ವಜನಿಕ ಸೇವಾ ಕ್ಷೇತ್ರದಲ್ಲಿಅವರ ಕೊಡುಗೆ ಸದಾ ಸ್ಮರಣೀಯವಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿ ಕರುಣಿಸಲಿ ಮತ್ತು ದುಃಖತಪ್ತ ಕುಟುಂಬಕ್ಕೆ ಸಾಂತ್ವನಗಳು ...... . ಶಾಂತಿ:’’ ಎಂದಿದ್ದಾರೆ.
ગુજરાત સરકારના પૂર્વ મંત્રી શ્રી ભગુભાઈ પટેલના અવસાનથી દુ:ખ થયું. જનસેવા ક્ષેત્રે તેઓનું પ્રદાન હંમેશાં યાદ રહેશે. સદ્ગતના આત્માની શાંતિ માટે પ્રાર્થના તથા શોકગ્રસ્ત પરિવારને સાંત્વના....... ૐ શાંતિ: ||
— Narendra Modi (@narendramodi) June 26, 2022


