ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಖ್ಯಾತ ಸಾಹಿತಿ ಮತ್ತು ಶಿಕ್ಷಣತಜ್ಞರಾದ ರಾಮದರಾಶ್ ಮಿಶ್ರಾ ಅವರ ನಿಧನಕ್ಕೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
ರಾಮದರಾಶ್ ಮಿಶ್ರಾ ಅವರ ನಿಧನವು ಹಿಂದಿ ಮತ್ತು ಭೋಜ್‌ಪುರಿ ಸಾಹಿತ್ಯಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ. ಮಿಶ್ರಾ ಅವರು ತಮ್ಮ ಜನಪ್ರಿಯ ಬರಹಗಳಿಂದ ಸದಾ ಜನಮಾನಸದಲ್ಲಿ ಉಳಿಯಲಿದ್ದಾರೆ ಎಂದು ಪ್ರಧಾನಮಂತ್ರಿ ತಿಳಿಸಿದ್ದಾರೆ.
ಪ್ರಧಾನಮಂತ್ರಿಯವರ ಎಕ್ಸ್ ಪೋಸ್ಟ್ ಹೀಗಿದೆ:
"ಖ್ಯಾತ ಸಾಹಿತಿ ಮತ್ತು ಶಿಕ್ಷಣತಜ್ಞರಾದ ರಾಮದರಾಶ್ ಮಿಶ್ರಾ ಅವರ ನಿಧನದಿಂದ ಅತೀವ ದುಃಖವಾಗಿದೆ. ಅವರ ನಿಧನವು ಹಿಂದಿ ಮತ್ತು ಭೋಜ್‌ಪುರಿ ಸಾಹಿತ್ಯಕ್ಕೆ ತುಂಬಲಾರದ ನಷ್ಟವಾಗಿದೆ. ಅವರು ತಮ್ಮ ಜನಪ್ರಿಯ ಕೃತಿಗಳಿಂದ ಅವರು ಸದಾ ನೆನಪಿನಲ್ಲಿ ಉಳಿಯುತ್ತಾರೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬ ವರ್ಗ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು . ಓಂ ಶಾಂತಿ!"
जाने-माने साहित्यकार और शिक्षाविद रामदरश मिश्र जी के निधन से अत्यंत दुख हुआ है। उनका जाना हिंदी और भोजपुरी साहित्य के लिए अपूरणीय क्षति है। अपनी लोकप्रिय रचनाओं के लिए वे सदैव याद किए जाएंगे। शोक की इस घड़ी में उनके परिजनों और प्रशंसकों के प्रति मेरी गहरी संवेदनाएं। ओम शांति!
— Narendra Modi (@narendramodi) November 1, 2025


