ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಬಿಹಾರದ ಮೋತಿಹಾರಿಯಲ್ಲಿರುವ ಇಟ್ಟಿಗೆ ಕಾರ್ಖಾನೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಪ್ರಾಣಹಾನಿಯ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದರು.
ಪ್ರಧಾನಮಂತ್ರಿಯವರು ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) ಮೃತರ ಪ್ರತಿ ಕುಟುಂಬಕ್ಕೆ 2 ಲಕ್ಷ ರೂಪಾಯಿ ಮತ್ತು ಅಪಘಾತದಲ್ಲಿ ಗಾಯಗೊಂಡವರಿಗೆ 50,000 ರೂಪಾಯಿಗಳ ಪರಿಹಾರವನ್ನು ಘೋಷಿಸಿದರು.
ಪ್ರಧಾನಮಂತ್ರಿಯವರ ಕಾರ್ಯಾಲಯದ ಟ್ವೀಟ್;
“ಮೋತಿಹಾರಿಯ ಇಟ್ಟಿಗೆ ಭಟ್ಟಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಪ್ರಾಣಹಾನಿಯಾಗಿರುವುದು ದುಃಖ ತಂದಿದೆ.. ಗಾಯಗೊಂಡವರಿಗೆ ದೇವರಲ್ಲಿ ಪ್ರಾರ್ಥಿಸುತ್ತೇನೆ. ಪ್ರತಿ ಮೃತರ ಕುಟುಂಬದವರಿಗೆ ಪಿಎಂಎನ್‌ಆರ್‌ಎಫ್ ನಿಧಿಯಿಂದ ಎರಡು ಲಕ್ಷ ರೂಪಾಯಿಗಳ ಪರಿಹಾರ ಧನವನ್ನು ನೀಡಲಾಗುತ್ತದೆ. ಗಾಯಗೊಂಡವರಿಗೆ ರೂ 50,000 ನೀಡಲಾಗುವುದು: ಪ್ರಧಾನಮಂತ್ರಿ @narendramodi
Pained by the loss of lives due to a mishap at a brick kiln in Motihari. Condolences to the bereaved families. Prayers with the injured. An ex-gratia of Rs. 2 lakh from PMNRF would given to the next of kin of each deceased. The injured would be given Rs. 50,000: PM @narendramodi
— PMO India (@PMOIndia) December 24, 2022