ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೌದಿ ಅರೇಬಿಯಾದ ಮದೀನಾದಲ್ಲಿ ಭಾರತೀಯ ಪ್ರಜೆಗಳನ್ನು ಒಳಗೊಂಡ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಅವರು ಹೃದಯಾಂತರಾಳದ ಸಂತಾಪ ಸೂಚಿಸಿದರು ಮತ್ತು ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದರು.
ರಿಯಾದ್ ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಮತ್ತು ಜೆಡ್ಡಾದಲ್ಲಿನ ರಾಯಭಾರ ಕಚೇರಿ ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡುತ್ತಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಅಗತ್ಯ ಬೆಂಬಲ ಮತ್ತು ಸಮನ್ವಯವನ್ನು ಖಚಿತಪಡಿಸಿಕೊಳ್ಳಲು ಭಾರತೀಯ ಅಧಿಕಾರಿಗಳು ಸೌದಿ ಅರೇಬಿಯಾದ ಅಧಿಕಾರಿಗಳೊಂದಿಗೆ ನಿಕಟ ಸಂಪರ್ಕದಲ್ಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.
ಈ ಸಂಬಂಧ ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ;
"ಮದೀನಾದಲ್ಲಿ ಭಾರತೀಯ ಪ್ರಜೆಗಳನ್ನು ಒಳಗೊಂಡ ಅಪಘಾತದಿಂದ ತೀವ್ರ ದುಃಖಿತನಾಗಿದ್ದೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರೆಲ್ಲರೂ ಶೀಘ್ರ ಗುಣಮುಖರಾಗಲಿ ಎಂದು ನಾನು ಪ್ರಾರ್ಥಿಸುತ್ತೇನೆ. ರಿಯಾದ್ ನಲ್ಲಿರುವ ನಮ್ಮ ರಾಯಭಾರ ಕಚೇರಿ ಮತ್ತು ಜೆಡ್ಡಾದಲ್ಲಿನ ರಾಯಭಾರ ಕಚೇರಿ ಸಾಧ್ಯವಿರುವ ಎಲ್ಲ ನೆರವು ನೀಡುತ್ತಿವೆ. ನಮ್ಮ ಅಧಿಕಾರಿಗಳು ಸೌದಿ ಅರೇಬಿಯಾ ಅಧಿಕಾರಿಗಳೊಂದಿಗೆ ನಿಕಟ ಸಂಪರ್ಕದಲ್ಲಿದ್ದಾರೆ,’’ ಎಂದು ತಿಳಿಸಿದರು.
Deeply saddened by the accident in Medinah involving Indian nationals. My thoughts are with the families who have lost their loved ones. I pray for the swift recovery of all those injured. Our Embassy in Riyadh and Consulate in Jeddah are providing all possible assistance. Our…
— Narendra Modi (@narendramodi) November 17, 2025
أشعر بحزن عميق إزاء الحادث الذي وقع في المدينة المنورة، والذي راح ضحيته مواطنون هنود. أتقدم بخالص التعازي لأسر الضحايا، وأدعو بالشفاء العاجل لجميع المصابين. وتقدم سفارتنا في الرياض وقنصليتنا في جدة كل الدعم الممكن، كما أن مسؤولينا على تواصل دائم مع السلطات السعودية.
— Narendra Modi (@narendramodi) November 17, 2025


