ಹಿಮಾಚಲ ಪ್ರದೇಶದ ಸಿರ್ಮೌರ್ನಲ್ಲಿ ಅಪಘಾತದಿಂದಾಗಿ ಪ್ರಾಣ ಕಳೆದುಕೊಂಡವರಿಗಾಗಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳ ಶೀಘ್ರ ಚೇತರಿಕೆಗಾಗಿ ಅವರು ಪ್ರಾರ್ಥಿಸಿದ್ದಾರೆ.
ಅಪಘಾತದಲ್ಲಿ ಮೃತಪಟ್ಟವರ ಹತ್ತಿರದ ರಕ್ತಸಂಬಂಧಿಗಳಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ. ಗಾಯಾಳುಗಳಿಗೆ 50,000 ರೂ. ಪರಿಹಾರ ನೀಡಲಾಗುವುದು ಎಂದು ಪ್ರಧಾನ ಮಂತ್ರಿಗಳ ಕಾರ್ಯಾಲಯದ ಟ್ವೀಟ್ನಲ್ಲಿ ಪ್ರಧಾನಿ ತಿಳಿಸಿದ್ದಾರೆ.
ಟ್ವೀಟ್ ಹೀಗಿದೆ:
"ಹಿಮಾಚಲ ಪ್ರದೇಶದ ಸಿರ್ಮೌರ್ನಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಪ್ರಾಣಹಾನಿಯಿಂದ ಅತೀವ ದುಃಖವಾಗಿದೆ. ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು ಮತ್ತು ಗಾಯಾಳುಗಳಿಗಾಗಿ ನನ್ನ ಪ್ರಾರ್ಥನೆಗಳನ್ನು ಅರ್ಪಿಸುವೆ. ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಹತ್ತಿರದ ರಕ್ತಸಂಬಂಧಿಗಳಿಗೆ ತಲಾ 2 ಲಕ್ಷ ರೂ. ಪರಿಹಾರವನ್ನು ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು: ಪ್ರಧಾನಿ ಮೋದಿ
Pained by the loss of lives due to an accident in Sirmaur, HP. Condolences to the bereaved families and prayers with the injured. An ex-gratia of Rs. 2 lakh each from PMNRF would be provided to the next of kin of the deceased. Rs. 50,000 would be given to the injured: PM Modi
— PMO India (@PMOIndia) June 28, 2021


