ಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಸಿಧಿಯಲ್ಲಿ ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸಂತಾಪ ಸೂಚಿಸಿದ್ದಾರೆ. ಅಲ್ಲದೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತಪಟ್ಟ ಪ್ರತಿ ಪ್ರಯಾಣಿಕರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಪ್ರಧಾನ ಮಂತ್ರಿ ಕಾರ್ಯಾಲಯ ಟ್ವೀಟ್ ಮಾಡಿ;
“ಮಧ್ಯ ಪ್ರದೇಶದ ಸಿಧಿಯಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಮೃತಪಟ್ಟವರ ಬಗ್ಗೆ ತೀವ್ರ ದುಃಖವುಂಟಾಗಿದೆ. ತಮ್ಮವರನ್ನು ಕಳೆದುಕೊಂಡವರ ಅವರ ಕುಟುಂಬಸ್ಥರಿಗೆ ದುಃಖವನ್ನು ಸಹಿಸಿಕೊಳ್ಳುವ ಶಕ್ತಿ ಭಗವಂತ ನೀಡಲಿ. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ಸಂತ್ರಸ್ತರಿಗೆ ಮಧ್ಯ ಪ್ರದೇಶ ಸರ್ಕಾರ ಎಲ್ಲ ರೀತಿಯ ನೆರವು ನೀಡುತ್ತಿದೆ''.
''ಅಪಘಾತದಲ್ಲಿ ಮೃತಪಟ್ಟ ಪ್ರತಿಯೊಬ್ಬರ ಕುಟುಂಬ ಸದಸ್ಯರಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಾಳುಗಳಿಗೆ ಚಿಕಿತ್ಸೆಗೆ ನೆರವಾಗಲು ತಲಾ 50 ಸಾವಿರ ರೂಪಾಯಿ ಪರಿಹಾರ ವಿತರಿಸಲಾಗುವುದು." ಎಂದು ಟ್ವೀಟ್ ಮಾಡಿದೆ.
The bus accident in Sidhi, MP is anguishing. In this sad hour, my thoughts are with those who have lost their loved ones. I wish the injured a quick recovery. The MP Government is providing all possible assistance to all those affected: PM @narendramodi
— PMO India (@PMOIndia) February 25, 2023


