ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ದಿಂಡೋರಿ ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಶ್ರೀ ಮೋದಿ ಅವರು ಅಪಘಾತದಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.
ಪ್ರಧಾನಮಂತ್ರಿ ಕಾರ್ಯಾಲಯವು X ನಲ್ಲಿ ಈ ಕುರಿತು ಪೋಸ್ಟ್ ಮಾಡಿದೆ;
“ಮಧ್ಯಪ್ರದೇಶದ ದಿಂಡೋರಿಯಲ್ಲಿ ನಡೆದ ರಸ್ತೆ ಅಪಘಾತ ಅತ್ಯಂತ ದುಃಖ ತಂದಿದೆ. ತಮ್ಮವರನ್ನು ಕಳೆದುಕೊಂಡು ದುಃಖದಲ್ಲಿರುವ ಕುಟುಂಬಗಳಿಗೆ ನನ್ನ ಸಂತಾಪಗಳು. ಈ ಕಷ್ಟದ ಸಮಯದಲ್ಲಿ ದೇವರು ಅವರಿಗೆ ಶಕ್ತಿಯನ್ನು ನೀಡಲಿ. ಜೊತೆಗೆ ಎಲ್ಲಾ ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ರಾಜ್ಯ ಸರ್ಕಾರದ ಮೇಲ್ವಿಚಾರಣೆಯಲ್ಲಿ, ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡುವಲ್ಲಿ ಕಾರ್ಯನಿರತವಾಗಿದೆ: PM @narendramodi
मध्य प्रदेश के डिंडोरी में हुई सड़क दुर्घटना अत्यंत दुखद है। मेरी संवेदनाएं शोकाकुल परिजनों के साथ हैं। ईश्वर उन्हें इस कठिन समय में संबल प्रदान करे। इसके साथ ही मैं सभी घायल लोगों के जल्द स्वस्थ होने की कामना करता हूं। राज्य सरकार की देखरेख में स्थानीय प्रशासन पीड़ितों की हरसंभव…
— PMO India (@PMOIndia) February 29, 2024


