ಭಾರತದ ವೈಜ್ಞಾನಿಕ ಮತ್ತು ಶೈಕ್ಷಣಿಕ ವಲಯದ ಅಗ್ರಮಾನ್ಯರಾದ ಡಾ. ಕೆ.ಕಸ್ತೂರಿರಂಗನ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ಸೂಚಿಸಿದ್ದಾರೆ. ಡಾ. ಕೆ. ಕಸ್ತೂರಿರಂಗನ್ ಅವರು ಇಸ್ರೋಗೆ ಅತ್ಯಂತ ಶ್ರದ್ಧೆಯಿಂದ ಸೇವೆ ಸಲ್ಲಿಸಿದ್ದರು, ಭಾರತದ ಬಾಹ್ಯಾಕಾಶ ಕಾರ್ಯಕ್ರಮವನ್ನು ಹೊಸ ಎತ್ತರಕ್ಕೆ ಮುನ್ನಡೆಸಿದ್ದರು ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ. "ರಾಷ್ಟ್ರೀಯ ಶಿಕ್ಷಣ ನೀತಿಯ (NEP) ಕರಡು ರಚನೆಯ ಪ್ರಕ್ರಿಯೆಯಲ್ಲಿ ಹಾಗೂ ಭಾರತದಲ್ಲಿ ಕಲಿಕೆಯನ್ನು ಹೆಚ್ಚು ಸಮಗ್ರವಾಗಿಸಲು ಮತ್ತು ಮುನ್ನಡೆಸಲು ಡಾ. ಕಸ್ತೂರಿರಂಗನ್ ಅವರ ಪ್ರಯತ್ನಗಳಿಗಾಗಿ ಭಾರತ ಅವರಿಗೆ ಸದಾ ಚಿರ ಋಣಿಯಾಗಿರಲಿದೆ. ಅವರು ಅನೇಕ ಯುವ ವಿಜ್ಞಾನಿಗಳು ಮತ್ತು ಸಂಶೋಧಕರಿಗೆ ಅತ್ಯುತ್ತಮ ಮಾರ್ಗದರ್ಶಕರಾಗಿದ್ದರು" ಎಂದು ಶ್ರೀ ಮೋದಿ ಅವರು ಬಣ್ಣಿಸಿದ್ದಾರೆ.

ಪ್ರಧಾನಮಂತ್ರಿಗಳ ಎಕ್ಸ್ ಪೋಸ್ಟ್ ಹೀಗಿದೆ:

“ಭಾರತದ ವೈಜ್ಞಾನಿಕ ಮತ್ತು ಶೈಕ್ಷಣಿಕ ಪಯಣದ ಮೇರು ವ್ಯಕ್ತಿ ಡಾ. ಕೆ. ಕಸ್ತೂರಿರಂಗನ್ ಅವರ ನಿಧನದಿಂದ ನನಗೆ ತೀವ್ರ ದುಃಖವಾಗಿದೆ. ಅವರ ದೂರದೃಷ್ಟಿಯ ನಾಯಕತ್ವ ಮತ್ತು ದೇಶಕ್ಕೆ ನಿಸ್ವಾರ್ಥ ಕೊಡುಗೆಯು ಸದಾ ಸ್ಮರಣೀಯ.

ಇಸ್ರೋದಲ್ಲಿ ಅವರು ಅತ್ಯಂತ ಶ್ರದ್ಧೆಯಿಂದ ಸೇವೆ ಸಲ್ಲಿಸಿ, ಭಾರತದ ಬಾಹ್ಯಾಕಾಶ ಕಾರ್ಯಕ್ರಮವನ್ನು ಹೊಸ ಎತ್ತರಕ್ಕೆ ಕೊಂಡೊಯ್ದ ಪರಿಣಾಮವಾಗಿ ಜಾಗತಿಕ ಮನ್ನಣೆ ಲಭಿಸಿತು. ಅವರ ನಾಯಕತ್ವವು ಮಹತ್ವಾಕಾಂಕ್ಷೆಯ ಉಪಗ್ರಹ ಉಡಾವಣೆಗಳಿಗೆ ಸಾಕ್ಷಿಯಾಗಿತ್ತು ಮತ್ತು ಅವರು ನಾವಿನ್ಯತೆಗೆ ಆದ್ಯತೆ ನೀಡಿದ್ದರು".

 

ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ)ಯ ಕರಡು ರಚನಾ ಪ್ರಕ್ರಿಯೆಯಲ್ಲಿ ಹಾಗೂ ಭಾರತದಲ್ಲಿ ಕಲಿಕೆಯನ್ನು ಹೆಚ್ಚು ಸಮಗ್ರಗೊಳಿಸಲು ಮತ್ತು ಮುನ್ನಡೆಸುವಂತಿರುವುದನ್ನು ಖಚಿತಪಡಿಸಿಕೊಳ್ಳಲು ಡಾ. ಕಸ್ತೂರಿರಂಗನ್ ಅವರ ಪ್ರಯತ್ನಗಳಿಗಾಗಿ ಭಾರತವು ಅವರಿಗೆ ಸದಾ ಕೃತಜ್ಞರಾಗಿರಲಿದೆ.

ಅವರು ಅನೇಕ ಯುವ ವಿಜ್ಞಾನಿಗಳು ಮತ್ತು ಸಂಶೋಧಕರಿಗೆ ಅತ್ಯುತ್ತಮ ಮಾರ್ಗದರ್ಶಕರಾಗಿದ್ದರು. ಅವರ ಕುಟುಂಬಸ್ಥರು, ವಿದ್ಯಾರ್ಥಿಗಳು, ವಿಜ್ಞಾನಿಗಳು ಮತ್ತು ಅಸಂಖ್ಯಾತ ಅಭಿಮಾನಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ.”

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
PM Modi urges people to take 9 pledges on health, saving water, others

Media Coverage

PM Modi urges people to take 9 pledges on health, saving water, others
NM on the go

Nm on the go

Always be the first to hear from the PM. Get the App Now!
...
Prime Minister receives phone call from President Emmanuel Macron, discusses situation in West Asia and maritime security
April 16, 2026

The Prime Minister, Shri Narendra Modi, received a phone call from the President of France, Emmanuel Macron.

During the conversation, the two leaders discussed the prevailing situation in West Asia. They agreed on the urgent need to restore safety and ensure freedom of navigation in the Strait of Hormuz.

Both leaders reiterated their commitment to continue close cooperation in advancing peace and stability in the region and beyond.

The Prime Minister wrote on X;

“Received a phone call from my dear friend President Emmanuel Macron. We discussed the situation in West Asia and agreed on the need to urgently restore safety and freedom of navigation in the Strait of Hormuz.

We will continue our close cooperation to advance peace and stability in the region and beyond.

@EmmanuelMacron”