ಪಿ.ಎಂ.ಎನ್.ಆರ್.ಎಫ್ ನಿಂದ ಪರಿಹಾರವನ್ನು ಘೋಷಿಸಿದ ಪ್ರಧಾನಮಂತ್ರಿ

ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಇಂದು ಕಟ್ಟಡ ಕುಸಿತದಿಂದ ಉಂಟಾದ ಅಪಘಾತದ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಈ ಕಷ್ಟದ ಸಮಯದಲ್ಲಿ ಸಂತ್ರಸ್ತ ಕುಟುಂಬಗಳೊಂದಿಗೆ ತಮ್ಮ ಆಲೋಚನೆಗಳು ಇವೆ ಎಂದು ಸಂತಾಪ ವ್ಯಕ್ತಪಡಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದರು ಮತ್ತು ಪ್ರತಿ ಮೃತರ ಸನಿಹದ ಸಂಬಂಧಿಕರಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿ.ಎಂ.ಎನ್.ಆರ್.ಎಫ್.) 2 ಲಕ್ಷ ರೂ. ಪರಿಹಾರವನ್ನು ಘೋಷಿಸಿದರು. ಘಟನೆಯಲ್ಲಿ ಗಾಯಗೊಂಡವರಿಗೆ 50,000 ರೂ. ಪರಿಹಾರವನ್ನು ನೀಡಲಾಗುವುದು ಎಂದು ಪ್ರಧಾನಮಂತ್ರಿಯವರು ಹೇಳಿದರು.

ಪ್ರಧಾನಮಂತ್ರಿಯವರು ಎಕ್ಸ್ ತಾಣದಲ್ಲಿ ಈ ರೀತಿ ಸಂದೇಶ ಬರೆದಿದ್ದಾರೆ:

"ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಕಟ್ಟಡ ಕುಸಿದು ಸಂಭವಿಸಿದ ಅಪಘಾತದಿಂದ ತೀವ್ರ ದುಃಖವಾಗಿದೆ. ಈ ಕಷ್ಟದ ಸಮಯದಲ್ಲಿ ಸಂತ್ರಸ್ತ ಜನರು ಮತ್ತು ಅವರ ಕುಟುಂಬಗಳೊಂದಿಗೆ ನನ್ನ ಆಲೋಚನೆಗಳು ಇವೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ.

ಪ್ರತಿಯೊಬ್ಬ ಮೃತರ ಹತ್ತಿರದ ಸಂಬಂಧಿಕರಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿ.ಎಂ.ಎನ್.ಆರ್.ಎಫ್.)  2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು: ಪ್ರಧಾನಮಂತ್ರಿ"

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Why Abrogation Of Article 370 Was A Strategic Necessity For India

Media Coverage

Why Abrogation Of Article 370 Was A Strategic Necessity For India
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 05 ಆಗಸ್ಟ್ 2026
August 05, 2026

Viksit Bharat in Action: Inclusive, Green, and Globally Competitive Under PM Modi