ಮೇಘಾಲಯದ ಪೂರ್ವ ಜೈಂಟಿಯಾ ಗುಡ್ಡದಲ್ಲಿ ಸಂಭವಿಸಿದ ದುರಂತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ಸೂಚಿಸಿದ್ದಾರೆ. ಅವರು ಮೃತರ ವಾರಸುದಾರರಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ ( ಪಿ ಎಂ ಎನ್ ಆರ್ ಎಫ್) ನಿಂದ ತಲಾ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ ತಲಾ 50,000 ರೂ. ಪರಿಹಾರ ಪ್ರಕಟಿಸಿದ್ದಾರೆ.
ಪಿಎಂಒ ಇಂಡಿಯಾ ಹ್ಯಾಂಡಲ್ ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಹೇಳಿದೆ:
“ಮೇಘಾಲಯದ ಪೂರ್ವ ಜೈಂಟಿಯಾ ಗುಡ್ಡದಲ್ಲಿ ಸಂಭವಿಸಿದ ಅಪಘಾತದಿಂದ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ.
ಮೃತರ ವಾರಸುದಾರರಿಗೆ PMNRF ನಿಂದ ತಲಾ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ ತಲಾ ರೂ.50,000 ಪರಿಹಾರ ನೀಡಲಾಗುವುದು: ಪ್ರಧಾನಮಂತ್ರಿ @narendramodi”
Pained by the mishap in East Jaintia Hills, Meghalaya. Condolences to those who lost their loved ones. May the injured recover at the earliest.
— PMO India (@PMOIndia) February 5, 2026
An ex-gratia of Rs. 2 lakh from PMNRF would be given to the next of kin of each deceased. The injured would be given Rs. 50,000: PM…


