ಮಧ್ಯಪ್ರದೇಶದ ಮಂದಸೌರ್‌ನಲ್ಲಿ ಇಂದು ಸಂಭವಿಸಿದ ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಪ್ರಧಾನಮಂತ್ರಿ ರಾಷ್ಡ್ರೀಯ ವಿಪತ್ತು ಪರಿಹಾರ ನಿಧಿ (PMNRF) ನಿಂದ ಅವರು ಪರಿಹಾರ ಘೋಷಿಸಿದ್ದಾರೆ. ಮೃತರ ವಾರಸುದಾರರಿಗೆ ತಲಾ ರೂ. 2 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ರೂ. 50,000 ಪರಿಹಾರ ಪ್ರಕಟಿಸಿದ್ದಾರೆ.
ಪ್ರಧಾನಮಂತ್ರಿಗಳ ಕಾರ್ಯಾಲಯದ ಎಕ್ಸ್ ಪೋಸ್ಟ್ ಹೀಗಿದೆ:
"ಮಧ್ಯಪ್ರದೇಶದ ಮಂದಸೌರ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಪ್ರಾಣಹಾನಿಯಿಂದ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿ ಗುಣಮುಖರಾಗಲಿ.
ಪ್ರಧಾನಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (PMNRF) ನಿಂದ ಮೃತರ ವಾರಸುದಾರರಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ ತಲಾ ರೂ. 50,000 ಪರಿಹಾರ ನೀಡಲಾಗುವುದು : ಪ್ರಧಾನಮಂತ್ರಿ @narendramodi"
Saddened by the loss of lives in an accident in Mandsaur, Madhya Pradesh. Condolences to those who have lost their loved ones. May the injured recover soon.
— PMO India (@PMOIndia) April 27, 2025
An ex-gratia of Rs. 2 lakh from PMNRF would be given to the next of kin of each deceased. The injured would be given Rs.…


