ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಉತ್ತರ ಪ್ರದೇಶದ ಸಂಭಾಲ್ ನ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ. ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರವನ್ನು ಪ್ರಧಾನಿಯವರು ಘೋಷಿಸಿದ್ದಾರೆ.
ಪ್ರಧಾನ ಮಂತ್ರಿಯವರ ಕಛೇರಿಯ ಹ್ಯಾಂಡಲ್ Xನಲ್ಲಿ ಪೋಸ್ಟ್ ಮಾಡಿ:
"ಉತ್ತರ ಪ್ರದೇಶದ ಸಂಭಾಲ್ ನ ಅಪಘಾತದಲ್ಲಿ ಆದ ಜೀವಹಾನಿಯ ಬಗ್ಗೆ ತೀವ್ರ ದುಃಖವಾಗಿದೆ. ಈ ದುರ್ಘಟನೆಯಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿ ಗುಣಮುಖರಾಗಲಿ ಎಂದು ಭಗವಂತನಲ್ಲಿ ಬೇಡಿಕೊಳ್ಳುತ್ತೆನೆ.
ಮೃತರ ಕುಟುಂಬಗಳಿಗೆ ಪ್ರಧಾನಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 50,000 ರೂ. ಪರಿಹಾರವನ್ನು ಘೋಷಿಸಲಾಗಿದೆ: ಪ್ರಧಾನಮಂತ್ರಿ @narendramodi" ಎಂದು ಹೇಳಿದೆ.
Deeply saddened by the loss of lives in an accident in Sambhal, Uttar Pradesh. Condolences to those who have lost their loved ones in the mishap. May the injured recover soon.
— PMO India (@PMOIndia) July 5, 2025
An ex-gratia of Rs. 2 lakh from PMNRF would be given to the next of kin of each deceased. The injured…


