ಮಾಜಿ ರಾಷ್ಟ್ರಪತಿ ಭಾರತರತ್ನ ಶ್ರೀ ಪ್ರಣಬ್ ಮುಖರ್ಜಿ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಂಬನಿ ಮಿಡಿದಿದ್ದಾರೆ.

“ಭಾರತರತ್ನ ಶ್ರೀ ಪ್ರಣಬ್ ಮುಖರ್ಜಿ ಅವರ ನಿಧನಕ್ಕೆ ಭಾರತ ದುಃಖ ವ್ಯಕ್ತಪಡಿಸುತ್ತದೆ. ನಮ್ಮ ರಾಷ್ಟ್ರದ ಅಭಿವೃದ್ಧಿ ಪಥದಲ್ಲಿ ಅಳಿಸಲಾಗದ ಹೆಜ್ಜೆಗುರುತನ್ನು ಅವರು ಮೂಡಿಸಿದ್ದಾರೆ. ಶ್ರೇಷ್ಠ ಮುತ್ಸದ್ಧಿ, ಅತ್ಯುನ್ನತ ರಾಜಕಾರಣಿಯಾಗಿದ್ದ ಅವರು ರಾಜಕೀಯ ರಂಗದಾದ್ಯಂತ ಮತ್ತು ಸಮಾಜದ ಎಲ್ಲಾ ವರ್ಗದ ಮೆಚ್ಚುಗೆಗೆ ಪಾತ್ರರಾಗಿದ್ದರು.

ಹಲವು ದಶಕಗಳ ತಮ್ಮ ರಾಜಕೀಯ ಜೀವನದಲ್ಲಿ, ಶ್ರೀ ಪ್ರಣಬ್ ಮುಖರ್ಜಿ ಅವರು ಪ್ರಮುಖ ಆರ್ಥಿಕ ಮತ್ತು ವ್ಯೂಹಾತ್ಮಕ ಸಚಿವಾಲಯಗಳಲ್ಲಿ ದೀರ್ಘಕಾಲೀನ ಕೊಡುಗೆ ನೀಡಿದ್ದರು., ಯಾವಾಗಲೂ ಚೆನ್ನಾಗಿ ಸಿದ್ಧರಾಗಿ, ಅತ್ಯಂತ ಸ್ಪಷ್ಟವಾಗಿ ಮತ್ತು ಹಾಸ್ಯಮಯವಾಗಿ ಮಾತನಾಡುತ್ತಿದ್ದ ಅದ್ಭುತ ಸಂಸದೀಯ ಪಟುವಾಗಿದ್ದರು.

ಭಾರತದ ರಾಷ್ಟ್ರಪತಿಗಳಾಗಿ, ಶ್ರೀ ಪ್ರಣಬ್ ಮುಖರ್ಜಿ ಅವರು ರಾಷ್ಟ್ರಪತಿ ಭವನವನ್ನು ಶ್ರೀಸಾಮಾನ್ಯರಿಗೆ ಹೆಚ್ಚು ಸಮೀಪಗೊಳಿಸಿದ್ದರು. ರಾಷ್ಟ್ರಪತಿಗಳ ಭವನವನ್ನು ಕಲಿಕೆ, ನಾವಿನ್ಯತೆ, ಸಂಸ್ಕೃತಿ, ವಿಜ್ಞಾನ ಮತ್ತು ಸಾಹಿತ್ಯ ಕೇಂದ್ರವಾಗಿ ಮಾಡಿದ್ದರು. ಪ್ರಮುಖ ನೀತಿ ನಿರೂಪಣೆಗಳಲ್ಲಿ ಅವರ ಬುದ್ಧಿವಂತಿಕೆಯ ಸಲಹೆಯನ್ನು ನಾನು ಎಂದಿಗೂ ಮರೆಯುವುದಿಲ್ಲ.

2014ರಲ್ಲಿ ನಾನು ದೆಹಲಿಗೆ ಹೊಸಬನಾಗಿದ್ದೆ. ಮೊದಲ ದಿನದಿಂದ, ಶ್ರೀ ಪ್ರಣಬ್ ಮುಖರ್ಜಿ ಅವರ ಮಾರ್ಗದರ್ಶನ, ಬೆಂಬಲ ಮತ್ತು ಆಶೀರ್ವಾದಗಳು ನನಗೆ ಲಭಿಸಿತ್ತು. ಅವರೊಂದಿಗಿನ ನನ್ನ ಸಂವಹನಗಳನ್ನು ನಾನು ಯಾವಾಗಲೂ ಆನಂದಿಸುತ್ತೇನೆ. ಅವರ ಕುಟುಂಬದವರಿಗೆ, ಸ್ನೇಹಿತರು, ಅಭಿಮಾನಿಗಳು ಮತ್ತು ಭಾರತದಾದ್ಯಂತ ಬೆಂಬಲಿಗರಿಗೆ ಸಂತಾಪ ಸೂಚಿಸುತ್ತೇನೆ. ಓಂ ಶಾಂತಿ.

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
'Make in India' radar programme to help Tejas track targets gets Rs 2,205 crore boost

Media Coverage

'Make in India' radar programme to help Tejas track targets gets Rs 2,205 crore boost
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 01 ಆಗಸ್ಟ್ 2026
August 01, 2026

Aatmanirbhar Bharat Delivers: Indigenous Power, Farmer Prosperity & Blue Economy