ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಾಶಿ ಅನ್ನಪೂರ್ಣ ದೇವಾಲಯದ ಮಹಂತ ಶ್ರೀ ರಾಮೇಶ್ವರ್ ಪುರಿ ಜಿ ಅವರ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ.
ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿ “ಕಾಶಿ ಅನ್ನಪೂರ್ಣ ದೇವಾಲಯದ ಮಹಂತ ಶ್ರೀ ರಾಮೇಶ್ವರ್ ಪುರಿ ಜಿ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಅವರ ನಿಧನದಿಂದ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ. ಧರ್ಮ ಮತ್ತು ಆಧ್ಯಾತ್ಮಿಕತೆಯನ್ನು ಸಾಮಾಜಿಕ ಸೇವೆಯೊಂದಿಗೆ ಬೆಸೆಯುವ ಮೂಲಕ ಸಾಮಾಜಿಕ ಕಾರ್ಯಗಳಿಗಾಗಿ ನಿರಂತರವಾಗಿ ಜನರನ್ನು ಪ್ರೇರೇಪಿಸುತ್ತಿದ್ದರು. ಓಂ ಶಾಂತಿ’’ ಎಂದು ಹೇಳಿದ್ದಾರೆ.
काशी अन्नपूर्णा मंदिर के महंत रामेश्वर पुरी जी के देहावसान से अत्यंत दुख हुआ है। उनका जाना समाज के लिए एक अपूरणीय क्षति है। उन्होंने धर्म और अध्यात्म को समाज सेवा से जोड़कर लोगों को सामाजिक कार्यों के लिये निरंतर प्रेरित किया। ॐ शांति !
— Narendra Modi (@narendramodi) July 10, 2021


