ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇತ್ತೀಚೆಗೆ ಅಹಮದಾಬಾದ್ ವಿಮಾನ ದುರಂತದಲ್ಲಿ ನಿರ್ದಯವಾಗಿ ಪ್ರಾಣ ಕಳೆದುಕೊಂಡ ಗುಜರಾತ್ ನ ಮಾಜಿ ಮುಖ್ಯಮಂತ್ರಿ ಶ್ರೀ ವಿಜಯ್ ರೂಪಾನಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಶ್ರೀ ರೂಪಾನಿ ಅವರ ವಿಶಿಷ್ಟ ವೃತ್ತಿಜೀವನವನ್ನು ಬಿಂಬಿಸಿದ  ಶ್ರೀ ನರೇಂದ್ರ ಮೋದಿ ಅವರು, ರಾಜ್ ಕೋಟ್ ಮುನ್ಸಿಪಲ್ ಕಾರ್ಪೊರೇಷನ್ ನಲ್ಲಿ ಅವರ ಅಧಿಕಾರಾವಧಿ, ರಾಜ್ಯಸಭಾ ಸಂಸದರಾಗಿ, ಗುಜರಾತ್ ಬಿಜೆಪಿ ಅಧ್ಯಕ್ಷರಾಗಿ ಮತ್ತು ರಾಜ್ಯ ಸರ್ಕಾರದಲ್ಲಿ ಕ್ಯಾಬಿನೆಟ್ ಸಚಿವರಾಗಿ ಸೇರಿದಂತೆ ವಿವಿಧ ಪಾತ್ರಗಳಲ್ಲಿ ಅವರು ನೀಡಿದ ಕೊಡುಗೆಗಳನ್ನು ಸ್ಮರಿಸಿದರು.

ಈ ಸಂಬಂಧ ಎಕ್ಸ್ ನಲ್ಲಿ ಸರಣಿ ಪೋಸ್ಟ್ ನಲ್ಲಿ ಶ್ರೀ ನರೇಂದ್ರ ಮೋದಿ ಅವರು ಹೀಗೆ ಬರೆದಿದ್ದಾರೆ:

"ಶ್ರೀ ವಿಜಯ್ ಭಾಯ್ ರೂಪಾನಿ ಜೀ ಅವರ ಕುಟುಂಬವನ್ನು ಭೇಟಿಯಾದೆ.
ವಿಜಯ್ ಭಾಯ್ ನಮ್ಮ ನಡುವೆ ಇಲ್ಲ ಎಂದು ಊಹಿಸಲು ಸಾಧ್ಯವಿಲ್ಲ. ನಾನು ಅವರನ್ನು ದಶಕಗಳಿಂದ ಬಲ್ಲೆ. ಅತ್ಯಂತ ಸವಾಲಿನ ಸಮಯಗಳು ಸೇರಿದಂತೆ ನಾವು ಹೆಗಲಿಗೆ ಹೆಗಲು ಕೊಟ್ಟು ಒಟ್ಟಿಗೆ ಕೆಲಸ ಮಾಡಿದ್ದೇವೆ. ವಿಜಯ್ ಭಾಯ್ ವಿನಮ್ರ ಮತ್ತು ಕಠಿಣ ಪರಿಶ್ರಮಿಯಾಗಿದ್ದರು, ಪಕ್ಷದ ಸಿದ್ಧಾಂತಕ್ಕೆ ದೃಢವಾಗಿ ಬದ್ಧರಾಗಿದ್ದರು. ಸಂಘಟನೆಯಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ ಅವರು ಗುಜರಾತ್ ಮುಖ್ಯಮಂತ್ರಿಯಾಗಿ ಶ್ರದ್ಧೆಯಿಂದ ಸೇವೆ ಸಲ್ಲಿಸಿದರು.

ರಾಜ್ ಕೋಟ್ ಮುನ್ಸಿಪಲ್ ಕಾರ್ಪೊರೇಷನ್ನಲ್ಲಿ, ರಾಜ್ಯಸಭಾ ಸಂಸದರಾಗಿ, ಗುಜರಾತ್ ಬಿಜೆಪಿ ಅಧ್ಯಕ್ಷರಾಗಿ ಮತ್ತು ರಾಜ್ಯ ಸರ್ಕಾರದಲ್ಲಿ ಕ್ಯಾಬಿನೆಟ್ ಸಚಿವರಾಗಿ ನಿಯೋಜಿಸಲಾದ ಪ್ರತಿಯೊಂದು ಪಾತ್ರದಲ್ಲೂ ಅವರು ತಮ್ಮನ್ನು ತಾವು ಗುರುತಿಸಿಕೊಂಡಿದ್ದಾರೆ.

"ವಿಜಯ್ ಭಾಯ್ ಮತ್ತು ನಾನು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ವ್ಯಾಪಕವಾಗಿ ಕೆಲಸ ಮಾಡಿದ್ದೇವೆ. ಗುಜರಾತ್ ನ ಬೆಳವಣಿಗೆಯ ಪಥವನ್ನು ಹೆಚ್ಚಿಸುವ, ವಿಶೇಷವಾಗಿ 'ಸುಗಮ ಜೀವನ'ವನ್ನು ಉತ್ತೇಜಿಸುವ ಅನೇಕ ಕ್ರಮಗಳನ್ನು ಅವರು ಜಾರಿಗೆ ತಂದರು. ನಾವು ನಡೆಸಿದ ಸಂವಹನಗಳನ್ನು ಯಾವಾಗಲೂ ನೆನಪಿಸಿಕೊಳ್ಳುತ್ತೇವೆ. ಈ ದುಃಖದ ಸಮಯದಲ್ಲಿ ನನ್ನ ಆಲೋಚನೆಗಳು ಅವರ ಕುಟುಂಬ ಮತ್ತು ಸ್ನೇಹಿತರೊಂದಿಗೆ ಇವೆ. ಓಂ ಶಾಂತಿ," ಎಂದಿದ್ದಾರೆ.

 

 

“વિજયભાઈ રૂપાણીના પરિવારજનોને મળી સાંત્વના પાઠવી. વિજયભાઈ આપણી વચ્ચે નથી એ વાત મન માનવા તૈયાર નથી. વર્ષોથી મારે તેમની સાથે નાતો રહ્યો છે. કંઈ કેટલાય પડકારજનક સમયમાં અમે ખભે ખભા મિલાવીને કામ કર્યું છે. સરળ અને સાલસ સ્વભાવના વિજયભાઈ ખૂબ મહેનતુ હતા તથા પક્ષની વિચારધારા પ્રત્યે પ્રતિબદ્ધ હતા. એક પાયાના કાર્યકર તરીકે જાહેર જીવનમાં કારકિર્દીની શરૂઆત કરી તેઓ સંગઠનમાં વિવિધ જવાબદારીઓ નિભાવતા નિભાવતા ગુજરાતના મુખ્યમંત્રી બન્યા હતા.”

“તેઓને સોંપાયેલ દરેક ભૂમિકામાં, તે પછી રાજકોટ મ્યુનિસિપલ કોર્પોરેશનમાં હોય કે રાજ્યસભાના સાંસદ તરીકેની હોય, પ્રદેશ ભાજપના પ્રમુખની હોય કે પછી રાજ્ય સરકારમાં કેબિનેટ મંત્રી અને મુખ્યમંત્રી તરીકેની હોય, તેઓએ દરેક વખતે એક અનોખો ચીલો ચાતર્યો હતો.”

“વિજયભાઈ ગુજરાતના મુખ્યમંત્રી હતા ત્યારે મારે તેમની સાથે ઘનિષ્ઠતાથી કામ કરવાનું થયું હતું. તેઓએ ગુજરાતની વિકાસયાત્રાને આગળ ધપાવવા ઘણા પગલાં હાથ ધર્યાં હતા જેમાં 'ઈઝ ઑફ લિવિંગ' એ નોંધપાત્ર છે. તેઓની સાથે થયેલ મુલાકાતો અને ચર્ચા હંમેશાં યાદ રહેશે.

સદ્ગતના આત્માની શાંતિ માટે પ્રાર્થના…

ૐ શાંતિ...!!”

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Zojila Tunnel achieves final breakthrough at 11,578 feet, bringing Kashmir-Ladakh link closer

Media Coverage

Zojila Tunnel achieves final breakthrough at 11,578 feet, bringing Kashmir-Ladakh link closer
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 10 ಜೂನ್ 2026
June 10, 2026

Citizens Celebrate the Longest Chapter in India’s Democratic Story: PM Modi’s Historic 4,399-Day Milestone