ಜನಪ್ರಿಯ ಗಾಯಕಿ ಶ್ರೀಮತಿ ಸುಮನ್ ಕಲ್ಯಾಣ್‌ಪುರ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಪ್ರಸಿದ್ಧ ಗಾಯಕಿ ಸುಮನ್ ಕಲ್ಯಾಣ್‌ಪುರ್ ಅವರ ನಿಧನದಿಂದ ತಮಗೆ ತೀವ್ರ ನೋವಾಗಿದೆ ಎಂದು ಪ್ರಧಾನಮಂತ್ರಿಯವರು ಹೇಳಿದರು. ಅವರ ಸುಮಧುರ ಧ್ವನಿ ಮತ್ತು ಭಾವಪೂರ್ಣ ಗಾಯನವು ಭಾರತದ ಸಾಂಸ್ಕೃತಿಕ ಜಗತ್ತನ್ನು ಶ್ರೀಮಂತಗೊಳಿಸಿದೆ ಹಾಗೂ ತಮ್ಮ ಹಾಡುಗಳ ಮೂಲಕ ಅವರು ಭಾರತೀಯ ಚಿತ್ರರಂಗದ ಸಂಗೀತ ಪ್ರೇಮಿಗಳು ಮತ್ತು ಅಭಿಮಾನಿಗಳ ಹೃದಯದಲ್ಲಿ ವಿಶೇಷ ಸ್ಥಾನವನ್ನು ಸೃಷ್ಟಿಸಿದ್ದಾರೆ ಎಂದು ಅವರು ಸ್ಮರಿಸಿದರು.

ಎಕ್ಸ ಜಾಲತಾಣದಲ್ಲಿ ಶ್ರೀ ಮೋದಿ ಹೀಗೆ ಹೇಳಿದ್ದಾರೆ;

“ಜನಪ್ರಿಯ ಗಾಯಕಿ ಸುಮನ್ ಕಲ್ಯಾಣ್‌ಪುರ್ ಅವರ ನಿಧನದಿಂದ ತೀವ್ರ ನೋವಾಗಿದೆ. ಅವರ ಮಧುರ ಧ್ವನಿ ಮತ್ತು ಭಾವಪೂರ್ಣ ಗಾಯನವು ನಮ್ಮ ಸಾಂಸ್ಕೃತಿಕ ಜಗತ್ತನ್ನು ಶ್ರೀಮಂತಗೊಳಿಸಿತ್ತು. ತಮ್ಮ ಹಾಡುಗಳ ಮೂಲಕ ಅವರು ಭಾರತೀಯ ಚಿತ್ರರಂಗದ ಸಂಗೀತ ಪ್ರೇಮಿಗಳು ಮತ್ತು ಅಭಿಮಾನಿಗಳ ಹೃದಯದಲ್ಲಿ ವಿಶೇಷ ಸ್ಥಾನವನ್ನು ಸೃಷ್ಟಿಸಿದ್ದಾರೆ. ಅವರ ಕುಟುಂಬಸ್ಥರು ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ.”

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Nepal praises India's efforts in times of crisis; calls PM Modi 'exceptionally generous'

Media Coverage

Nepal praises India's efforts in times of crisis; calls PM Modi 'exceptionally generous'
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 30 ಆಗಸ್ಟ್ 2026
August 30, 2026

Tiranga in Tashkent, Relief in Nepal: Soft Power Meets First Responder

Vocal for Local, Nari Shakti, Real Heroes: Mann Ki Baat’s Atmanirbhar Hour