ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಪಾನ್ ಪ್ರಧಾನಮಂತ್ರಿಯಾಗಿ ಆಯ್ಕೆಯಾದ ಘನತೆವೆತ್ತ ಶ್ರೀಮತಿ ಸನೆ ತಕೈಚಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಸಂದೇಶದಲ್ಲಿ ಭಾರತ-ಜಪಾನ್ ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಬದ್ಧತೆಯನ್ನು ವ್ಯಕ್ತಪಡಿಸಿದ್ದಾರೆ.
ಶ್ರೀ ಮೋದಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಹೇಳಿದ್ದಾರೆ:
"ಜಪಾನ್ ಪ್ರಧಾನಮಂತ್ರಿಯಾಗಿ ಆಯ್ಕೆಯಾದ ಸನಾಯೆ ತಕೈಚಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಭಾರತ-ಜಪಾನ್ ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ನಿಮ್ಮೊಂದಿಗೆ ನಿಕಟವಾಗಿ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ. ಇಂಡೋ-ಪೆಸಿಫಿಕ್ ಮತ್ತು ಅದರಾಚೆಗಿನ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಗೆ ನಮ್ಮ ಗಾಢವಾದ ಸಂಬಂಧಗಳು ಅತ್ಯಗತ್ಯ.
@takaichi_sanae"
Heartiest congratulations, Sanae Takaichi, on your election as the Prime Minister of Japan. I look forward to working closely with you to further strengthen the India–Japan Special Strategic and Global Partnership. Our deepening ties are vital for peace, stability, and prosperity…
— Narendra Modi (@narendramodi) October 21, 2025


