ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಐಸಿಸಿ ಕ್ರಿಕೆಟ್ ವಿಶ್ವಕಪ್ 2023ರ ಸೆಮಿಫೈನಲ್ ನಲ್ಲಿ ನ್ಯೂಜಿಲೆಂಡ್ ವಿರುದ್ಧ ಗಮನಾರ್ಹ ಗೆಲುವು ಸಾಧಿಸಿದ ಭಾರತೀಯ ಕ್ರಿಕೆಟ್ ತಂಡವನ್ನು ಅಭಿನಂದಿಸಿದ್ದಾರೆ. ಹಾಗೆಯೇ ಶ್ರೀ ನರೇಂದ್ರ ಮೋದಿ ಅವರು ಫೈನಲ್ ಪಂದ್ಯಕ್ಕೆ ಶುಭ ಕೋರಿದರು.

ಈ ಸಂಬಂಧ ಪ್ರಧಾನಮಂತ್ರಿ ಅವರು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ:

"ಟೀಮ್ ಇಂಡಿಯಾಗೆ ಅಭಿನಂದನೆಗಳು.

ಭಾರತವು ಅತ್ಯುನ್ನತ ಪ್ರದರ್ಶನವನ್ನು ನೀಡಿದೆ ಮತ್ತು ಗಮನಾರ್ಹ ಶೈಲಿಯಲ್ಲಿ ಫೈನಲ್ ಗೆ ಪ್ರವೇಶಿಸಿದೆ. ಅದ್ಭುತ ಬ್ಯಾಟಿಂಗ್ ಮತ್ತು ಉತ್ತಮ ಬೌಲಿಂಗ್ ನಮ್ಮ ತಂಡಕ್ಕೆ ಪಂದ್ಯವನ್ನು ಭದ್ರಪಡಿಸಿತು.

ಫೈನಲ್ಸ್ ಗೆ ಶುಭ ಹಾರೈಕೆಗಳು!"

 

 

ಮೊಹಮ್ಮದ್ ಶಮಿ ಅವರ ಅತ್ಯುನ್ನತ ಪ್ರದರ್ಶನವನ್ನು ಕೂಡ ಪ್ರಧಾನಮಂತ್ರಿ ಶ್ಲಾಘಿಸಿದರು.

ಈ ಕುರಿತು ಅವರು ಹಂಚಿಕೊಂಡಿದ್ದಾರೆ.

"ಇಂದಿನ ಸೆಮಿಫೈನಲ್ ಪಂದ್ಯವು ವೈಯಕ್ತಿಕ ಪ್ರದರ್ಶನದಿಂದಾಗಿ ಇನ್ನಷ್ಟು ವಿಶೇಷವಾಗಿದೆ.

ಈ ಪಂದ್ಯದಲ್ಲಿ ಮತ್ತು ವಿಶ್ವಕಪ್ ಮೂಲಕ @MdShami11 ಅವರ ಬೌಲಿಂಗ್ ಅನ್ನು ಮುಂದಿನ ಪೀಳಿಗೆಯ ಕ್ರಿಕೆಟ್ ಪ್ರೇಮಿಗಳೂ ಸಹ ಗೌರವಿಸುತ್ತಾರೆ.

ಶಮಿ ಅತ್ಯುತ್ತಮವಾಗಿ ಆಡಿದರು!

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
In Photos: PM Narendra Modi Prays At Kashi Vishwanath, Holds Trishul-Damru

Media Coverage

In Photos: PM Narendra Modi Prays At Kashi Vishwanath, Holds Trishul-Damru
NM on the go

Nm on the go

Always be the first to hear from the PM. Get the App Now!
...
ಉತ್ಸಾಹ ಮತ್ತು ಸಕಾರಾತ್ಮಕ ಶಕ್ತಿಯು ಯಶಸ್ಸಿಗೆ ಹೇಗೆ ಕಾರಣವಾಗುತ್ತದೆ ಎಂಬುದನ್ನು ಬಿಂಬಿಸುವ ಸಂಸ್ಕೃತ ಸುಭಾಷಿತಂವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ
April 30, 2026

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂಸ್ಕೃತ ಸುಭಾಷಿತಂ ಪುಸ್ತಕವನ್ನು ಹಂಚಿಕೊಂಡಿದ್ದು, ಉತ್ಸಾಹ ಮತ್ತು ಸಕಾರಾತ್ಮಕ ಶಕ್ತಿಯು ವ್ಯಕ್ತಿಯು ತಮ್ಮ ಕಾರ್ಯಗಳಲ್ಲಿ ನಿರಂತರವಾಗಿ ಸಕ್ರಿಯವಾಗಿರಲು ಪ್ರೇರೇಪಿಸುತ್ತದೆ ಎಂದು ಹೇಳಿದ್ದಾರೆ.

ಈ ಅಚಲ ಉತ್ಸಾಹವು ಒಬ್ಬ ವ್ಯಕ್ತಿಯು ಸಾಧಿಸಲು ನಿರ್ಧರಿಸುವ ಎಲ್ಲಾ ಪ್ರಯತ್ನಗಳನ್ನು ಯಶಸ್ಸಿನತ್ತ ಕೊಂಡೊಯ್ಯುತ್ತದೆ ಎಂದು ಪ್ರಧಾನಿ ಹೇಳಿದರು.

ಪ್ರಧಾನಮಂತ್ರಿ ಅವರು ಈ ಬಗ್ಗೆ ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ;

"कर्मशील और ऊर्जावान देशवासी ही राष्ट्र की सबसे बड़ी शक्ति हैं, जिनके परिश्रम से विकास की नई राहें तय होती हैं। इनके प्रयासों से देश समृद्धि, आत्मनिर्भरता और उन्नति के शिखर को छूता है।

अनिर्वेदो हि सततं सर्वार्थेषु प्रवर्तकः।

करोति सफलं जन्तोः कर्म यच्च करोति सः॥"

ಉತ್ಸಾಹ ಮತ್ತು ಸಕಾರಾತ್ಮಕ ಶಕ್ತಿಯು ವ್ಯಕ್ತಿಯನ್ನು ತಮ್ಮ ಕ್ರಿಯೆಗಳಲ್ಲಿ ನಿರಂತರವಾಗಿ ಸಕ್ರಿಯವಾಗಿರಲು ಪ್ರೇರೇಪಿಸುತ್ತದೆ. ಈ ಅಚಲ ಉತ್ಸಾಹವು ಒಬ್ಬ ವ್ಯಕ್ತಿಯು ಸಾಧಿಸಲು ನಿರ್ಧರಿಸುವ ಎಲ್ಲಾ ಪ್ರಯತ್ನಗಳನ್ನು ಯಶಸ್ಸಿನತ್ತ ಕರೆದೊಯ್ಯುತ್ತದೆ.