ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಮ್ಮು- ಕಾಶ್ಮೀರ ತಂಡವು ಮೊದಲ ಬಾರಿಗೆ ರಣಜಿ ಟ್ರೋಫಿ ಗೆದ್ದಿರುವುದಕ್ಕೆ ಅಭಿನಂದನೆಗಳನ್ನು ತಿಳಿಸಿದ್ದಾರೆ.
ಈ ಐತಿಹಾಸಿಕ ಜಯವು ತಂಡದ ಅಪಾರ ಹೋರಾಟ ಮನೋಭಾವ, ಶಿಸ್ತು ಮತ್ತು ಉತ್ಸಾಹವನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ. ಇದು ಜಮ್ಮು- ಕಾಶ್ಮೀರ ಜನತೆಗೆ ಹೆಮ್ಮೆಯ ಕ್ಷಣವಾಗಿದ್ದು, ಆ ಪ್ರದೇಶದಲ್ಲಿ ಕ್ರೀಡೆಗೆ ಹೆಚ್ಚುತ್ತಿರುವ ಆಸಕ್ತಿ ಮತ್ತು ಪ್ರತಿಭೆಯನ್ನು ಇದು ತೋರಿಸುತ್ತದೆ ಎಂದು ಅವರು ಉಲ್ಲೇಖಿಸಿದ್ದಾರೆ.
ಈ ಸಾಧನೆ ಅನೇಕ ಯುವ ಕ್ರೀಡಾಪಟುಗಳಿಗೆ ದೊಡ್ಡ ಕನಸು ಕಾಣಲು ಮತ್ತು ಹೆಚ್ಚಿನ ಉತ್ಸಾಹದಿಂದ ಆಡಲು ಪ್ರೇರಣೆ ನೀಡಲಿ ಎಂದು ಪ್ರಧಾನಮಂತ್ರಿಗಳು ಆಶಿಸಿದ್ದಾರೆ.
ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದುಕೊಂಡಿದ್ದಾರೆ;
"ಜಮ್ಮು ಮತ್ತು ಕಾಶ್ಮೀರ ತಂಡಕ್ಕೆ ರಣಜಿ ಟ್ರೋಫಿ ಗೆದ್ದಿರುವುದಕ್ಕೆ ಅಭಿನಂದನೆಗಳು! ಈ ಐತಿಹಾಸಿಕ ಸಾಧನೆ ತಂಡದ ಅಪಾರ ಹೋರಾಟ ಮನೋಭಾವ, ಶಿಸ್ತು ಮತ್ತು ಉತ್ಸಾಹವನ್ನು ಪ್ರತಿಬಿಂಬಿಸುತ್ತದೆ. ಇದು ಜಮ್ಮು ಮತ್ತು ಕಾಶ್ಮೀರ ಜನತೆಗೆ ಹೆಮ್ಮೆಯ ಕ್ಷಣವಾಗಿದ್ದು, ಅಲ್ಲಿ ಕ್ರೀಡೆಗೆ ಹೆಚ್ಚುತ್ತಿರುವ ಆಸಕ್ತಿ ಮತ್ತು ಪ್ರತಿಭೆಯನ್ನು ಎತ್ತಿಹಿಡಿಯುತ್ತದೆ. ಈ ಸಾಧನೆ ಅನೇಕ ಯುವ ಕ್ರೀಡಾಪಟುಗಳಿಗೆ ದೊಡ್ಡ ಕನಸು ಕಾಣಲು ಮತ್ತು ಇನ್ನಷ್ಟು ಆಡಲು ಪ್ರೇರಣೆ ನೀಡಲಿ."
Congratulations to the Jammu and Kashmir team for their first ever Ranji Trophy win! This historic triumph reflects remarkable grit, discipline and passion of the team. It is a proud moment for the people of Jammu and Kashmir and it highlights the growing sporting passion and… pic.twitter.com/3fJO89Z5F8
— Narendra Modi (@narendramodi) February 28, 2026


