ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಯೆಟ್ನಾಂ ಸಮಾಜವಾದಿ ಗಣರಾಜ್ಯದ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀ ಟು ಲಾಮ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಹೊಸ ಅಧ್ಯಕ್ಷರ ನಾಯಕತ್ವದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ ಪ್ರಧಾನಮಂತ್ರಿ ಅವರು, ಭಾರತ ಮತ್ತು ವಿಯೆಟ್ನಾಂ ನಡುವಿನ ಸಮಯ ಪರೀಕ್ಷಿತ ಸ್ನೇಹವು ಬಲದಿಂದ ಬಲಗೊಳ್ಳುತ್ತದೆ ಎಂದು ಹೇಳಿದರು. ಎರಡೂ ರಾಷ್ಟ್ರಗಳು ಮತ್ತು ಪ್ರದೇಶದ ಜನರ ಪ್ರಗತಿ ಮತ್ತು ಸಮೃದ್ಧಿಗಾಗಿ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಗಾಢವಾಗಿಸಲು ಒಟ್ಟಾಗಿ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದರು.

ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ;

"ವಿಯೆಟ್ನಾಂ ಸಮಾಜವಾದಿ ಗಣರಾಜ್ಯದ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀ ಟು ಲಾಮ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಅವರ ನಾಯಕತ್ವದಲ್ಲಿ, ನಮ್ಮ ಎರಡು ದೇಶಗಳ ನಡುವಿನ ಸಮಯ ಪರೀಕ್ಷಿತ ಸ್ನೇಹವು ಬಲದಿಂದ ಬಲಗೊಳ್ಳುವುದನ್ನು ಮುಂದುವರಿಸುತ್ತದೆ ಎಂಬ ವಿಶ್ವಾಸ ನನಗಿದೆ. ನಮ್ಮ ಜನರು ಮತ್ತು ಪ್ರದೇಶದ ಪ್ರಗತಿ ಮತ್ತು ಸಮೃದ್ಧಿಗಾಗಿ ನಮ್ಮ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಗಾಢವಾಗಿಸಲು ಒಟ್ಟಾಗಿ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ." 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Centre launches Bhavya scheme to set up 100 industrial parks across country

Media Coverage

Centre launches Bhavya scheme to set up 100 industrial parks across country
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 24 ಮೇ 2026
May 24, 2026

Strength, Growth & Global Trust: How PM Modi is Transforming India Across Frontiers