ಬೋಡೋಲ್ಯಾಂಡ್ ಪ್ರಾದೇಶಿಕ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಹಗ್ರಾಮ ಮೊಹಿಲಾರಿ ಅವರನ್ನು ಪ್ರಧಾನಮಂತ್ರಿ ಅವರು ಅಭಿನಂದಿಸಿದರು

ಬೋಡೋಲ್ಯಾಂಡ್ ಪ್ರಾದೇಶಿಕ ಮಂಡಳಿಯ (ಬಿ.ಟಿ.ಸಿ.) ಮುಖ್ಯ ಕಾರ್ಯನಿರ್ವಾಹಕ ಸದಸ್ಯರಾಗಿ (ಸಿ.ಇ.ಎಂ.) ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಹಗ್ರಾಮ ಮೊಹಿಲಾರಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೃತ್ಪೂರ್ವಕವಾಗಿ ಅಭಿನಂದಿಸಿದರು. ಪೂಜ್ಯ ಬೋಡೋಫಾ ಉಪೇಂದ್ರನಾಥ ಬ್ರಹ್ಮ ಅವರ ದೃಷ್ಟಿಕೋನ ಈಡೇರುವಂತೆ ಹಂಚಿಕೆಯ ಬದ್ಧತೆಯನ್ನು ಉಲ್ಲೇಖಿಸುವ ಮೂಲಕ, ಬಿ.ಟಿ.ಸಿ ಆಡಳಿತಕ್ಕೆ ಕೇಂದ್ರ ಸರ್ಕಾರ ಮತ್ತು ಅಸ್ಸಾಂ ಸರ್ಕಾರಗಳ  ಅಚಲವಾದ ಬೆಂಬಲವನ್ನು ಶ್ರೀ ಮೋದಿ ಪುನರುಚ್ಚರಿಸಿದರು.

ಎಕ್ಸ್ ನ ಫೊಸ್ಟ್ ನಲ್ಲಿ ಶ್ರೀ ಮೋದಿ ಹೀಗೆ ಬರೆದಿದ್ದಾರೆ:

"ಬೋಡೋಲ್ಯಾಂಡ್ ಪ್ರಾದೇಶಿಕ ಮಂಡಳಿಯ ಸಿ.ಇ.ಎಂ. ಆಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಹಗ್ರಾಮ ಮೊಹಿಲಾರಿ ಅವರನ್ನು ನಾನು ಅಭಿನಂದಿಸುತ್ತೇನೆ. ಅವರಿಗೆ ಮತ್ತು ಅವರ ತಂಡಕ್ಕೆ ಅವರ ಅಧಿಕಾರಾವಧಿಗೆ ನನ್ನ ಶುಭಾಶಯಗಳು. ಮಹಾನ್ ಬೋಡೋಫಾ ಉಪೇಂದ್ರನಾಥ ಬ್ರಹ್ಮ ಅವರ ದೃಷ್ಟಿಕೋನವನ್ನು ಪೂರೈಸಲು ಮತ್ತು ಸರ್ವತೋಮುಖ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಲು ನಾವೆಲ್ಲರೂ ಸಾಮೂಹಿಕವಾಗಿ ಕೆಲಸ ಮಾಡುತ್ತಿರುವಾಗ ಕೇಂದ್ರ ಸರ್ಕಾರ ಮತ್ತು ಅಸ್ಸಾಂ ಸರ್ಕಾರವು ಬಿ.ಟಿ.ಸಿ ಸರ್ಕಾರವನ್ನು ಬೆಂಬಲಿಸುವುದನ್ನು ಮುಂದುವರಿಸುತ್ತದೆ.

@HagramaOnline”

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India's crude supply secure, LPG production increased: Hardeep Puri

Media Coverage

India's crude supply secure, LPG production increased: Hardeep Puri
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 13 ಮಾರ್ಚ್ 2026
March 13, 2026

Resilient India Under PM Modi: Diplomatic Mastery, Youth Power, and Unstoppable Progress