ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎಲ್‍ವಿಎಂ3-ಎಂ6 ಉಡಾವಣಾ ವಾಹನದ ಮೂಲಕ 'ಬ್ಲೂಬರ್ಡ್ ಬ್ಲಾಕ್-2' (BlueBird Block-2) ಉಪಗ್ರಹವನ್ನು ಯಶಸ್ವಿಯಾಗಿ ಉಡಾವಣೆ ಮಾಡಿದ ಬಾಹ್ಯಾಕಾಶ ವಿಜ್ಞಾನಿಗಳು ಮತ್ತು ಇಂಜಿನಿಯರ್‌ಗಳನ್ನು ಅಭಿನಂದಿಸಿದ್ದಾರೆ. ಬ್ಲೂಬರ್ಡ್ ಬ್ಲಾಕ್-2 ಅಮೆರಿಕದ ಒಂದು ಬಾಹ್ಯಾಕಾಶ ನೌಕೆಯಾಗಿದ್ದು, ಇದು ಭಾರತದಿಂದ ಉದ್ದೇಶಿತ ಕಕ್ಷೆಗೆ ಉಡಾವಣೆಗೊಂಡ ಅತ್ಯಂತ ಭಾರವಾದ ಉಪಗ್ರಹವಾಗಿದೆ. ಇದು ಭಾರತದ ಬಾಹ್ಯಾಕಾಶ ಪಯಣದಲ್ಲಿ ಹೆಮ್ಮೆಯ ಮೈಲಿಗಲ್ಲಾಗಿದೆ ಮತ್ತು ಆತ್ಮನಿರ್ಭರ ಭಾರತದ ಕಡೆಗಿನ ನಮ್ಮ ಪ್ರಯತ್ನಗಳ ಪ್ರತಿಬಿಂಬವಾಗಿದೆ ಎಂದು ಶ್ರೀ ಮೋದಿ ಅವರು ತಿಳಿಸಿದ್ದಾರೆ.

"ಎಲ್‍ವಿಎಂ3 ರಾಕೆಟ್ ತನ್ನ ವಿಶ್ವಾಸಾರ್ಹವಾದ ಭಾರೀ ತೂಕ ಹೊರುವ ಕಾರ್ಯಕ್ಷಮತೆಯನ್ನು ಪ್ರದರ್ಶಿಸುವುದರೊಂದಿಗೆ, ನಾವು ಗಗನಯಾನದಂತಹ ಭವಿಷ್ಯದ ಯೋಜನೆಗಳಿಗೆ ಬಲವಾದ ಅಡಿಪಾಯ ಹಾಕುತ್ತಿದ್ದೇವೆ. ಅಲ್ಲದೆ, ವಾಣಿಜ್ಯ ಉಡಾವಣಾ ಸೇವೆಗಳನ್ನು ವಿಸ್ತರಿಸುತ್ತಿದ್ದೇವೆ ಮತ್ತು ಜಾಗತಿಕ ಪಾಲುದಾರಿಕೆಗಳನ್ನು ಗಟ್ಟಿಗೊಳಿಸುತ್ತಿದ್ದೇವೆ" ಎಂದು ಪ್ರಧಾನಮಂತ್ರಿ ಶ್ರೀ ಮೋದಿ ಅವರು ಹೇಳಿದ್ದಾರೆ.

ಪ್ರಧಾನಮಂತ್ರಿಯವರು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:

"ಭಾರತದ ಬಾಹ್ಯಾಕಾಶ ಕ್ಷೇತ್ರದಲ್ಲಿ ಮಹತ್ವದ ಹೆಜ್ಜೆ...

ಭಾರತದಿಂದ ಉಡಾವಣೆಗೊಂಡ ಅತ್ಯಂತ ಭಾರದ ಅಮೆರಿಕದ ಬ್ಲೂಬರ್ಡ್ ಬ್ಲಾಕ್-2 ಉಪಗ್ರಹವನ್ನು ಉದ್ದೇಶಿತ ಕಕ್ಷೆಗೆ ಸೇರಿಸುವ ಮೂಲಕ ಎಲ್‍ವಿಎಂ3-ಎಂ6 ಯಶಸ್ವಿ ಉಡಾವಣೆಯಾಗಿದೆ. ಇದು ಭಾರತದ ಬಾಹ್ಯಾಕಾಶ ಪಯಣದಲ್ಲಿ ಹೆಮ್ಮೆಯ ಮೈಲಿಗಲ್ಲಾಗಿದೆ. 

ಇದು ಭಾರತದ ಅತಿ ಭಾರದ ಉಡಾವಣಾ ಸಾಮರ್ಥ್ಯವನ್ನು ಬಲಪಡಿಸುತ್ತದೆ ಮತ್ತು ಜಾಗತಿಕ ವಾಣಿಜ್ಯ ಉಡಾವಣಾ ಮಾರುಕಟ್ಟೆಯಲ್ಲಿ ನಮ್ಮ ಪ್ರಗತಿಯನ್ನು ಪುಷ್ಟೀಕರಿಸುತ್ತದೆ.

ಇದು ಆತ್ಮನಿರ್ಭರ ಭಾರತದತ್ತ ನಮ್ಮ ಪ್ರಯತ್ನಗಳ ಪ್ರತಿಬಿಂಬವೂ ಆಗಿದೆ. ನಮ್ಮ ಪರಿಶ್ರಮಿ ಬಾಹ್ಯಾಕಾಶ ವಿಜ್ಞಾನಿಗಳು ಮತ್ತು ಇಂಜಿನಿಯರ್‌ಗಳಿಗೆ ಅಭಿನಂದನೆಗಳು.

ಬಾಹ್ಯಾಕಾಶ ಜಗತ್ತಿನಲ್ಲಿ ಭಾರತ ಮತ್ತಷ್ಟು ಉಚ್ಛ್ರಾಯಕ್ಕೆ ಏರುತ್ತಿದೆ!"

@isro

 

ಭಾರತದ ಯುವಶಕ್ತಿಯಿಂದ ಬಲಗೊಂಡ ನಮ್ಮ ಬಾಹ್ಯಾಕಾಶ ಕಾರ್ಯಕ್ರಮವು ಹೆಚ್ಚು ಸುಧಾರಿತ ಮತ್ತು ಪ್ರಭಾವಶಾಲಿಯಾಗುತ್ತಿದೆ

ಎಲ್‍ವಿಎಂ3 ರಾಕೆಟ್ ತನ್ನ ಅತ್ಯಂತ ವಿಶ್ವಾಸಾರ್ಹ ಭಾರೀ ತೂಕದ ಉಪಗ್ರಹಗಳನ್ನು ಹೊತ್ತೊಯ್ಯುವ ಸಾಮರ್ಥ್ಯವನ್ನು ಸಾಬೀತುಪಡಿಸುವುದರೊಂದಿಗೆ, ನಾವು ಗಗನಯಾನದಂತಹ ಭವಿಷ್ಯದ ಮಹತ್ವಾಕಾಂಕ್ಷೆಯ ಯೋಜನೆಗಳಿಗೆ ಬಲವಾದ ಅಡಿಪಾಯ ಹಾಕುತ್ತಿದ್ದೇವೆ. ಇದರ ಜೊತೆಗೆ ವಾಣಿಜ್ಯ ಉಡಾವಣಾ ಸೇವೆಗಳನ್ನು ವಿಸ್ತರಿಸುತ್ತಿದ್ದೇವೆ ಮತ್ತು ಜಾಗತಿಕ ಪಾಲುದಾರಿಕೆಗಳನ್ನು ಗಟ್ಟಿಗೊಳಿಸುತ್ತಿದ್ದೇವೆ.

ಹೆಚ್ಚುತ್ತಿರುವ ಉಡಾವಣಾ ಸಾಮರ್ಥ್ಯ ಮತ್ತು ಸ್ವಾವಲಂಬನೆಗೆ ಸಿಗುತ್ತಿರುವ ಉತ್ತೇಜನವು ಮುಂದಿನ ಪೀಳಿಗೆಗೆ ಅದ್ಭುತ ಅವಕಾಶಗಳನ್ನು ಕಲ್ಪಿಸಿಕೊಡಲಿದೆ.

@isro

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Vikas Bhi, Virasat Bhi: How JATAN, AI and Digital Archives are revolutionising India’s cultural heritage preservation

Media Coverage

Vikas Bhi, Virasat Bhi: How JATAN, AI and Digital Archives are revolutionising India’s cultural heritage preservation
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 09 ಆಗಸ್ಟ್ 2026
August 09, 2026

Vikas Bhi, Virasat Bhi: PM Modi’s Blueprint for a Rooted Yet Future-Ready Bharat