ಚೀನಾದ ಹ್ಯಾಂಗ್‌ಝೌನಲ್ಲಿ ನಡೆದ ಏಷ್ಯನ್ ಪ್ಯಾರಾ ಗೇಮ್ಸ್-2022ರ ಬ್ಯಾಡ್ಮಿಂಟನ್ ಮಹಿಳೆಯರ ಸಿಂಗಲ್ಸ್ ಎಸ್ ಯು5 ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ತುಳಸಿಮತಿ ಮುರುಗೇಶನ್ ಅವರನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದರು.
ಈ ಕುರಿತು Xನಲ್ಲಿ ಪೋಸ್ಟ್ ಮಾಡಿರುವ ಪ್ರಧಾನ ಮಂತ್ರಿ:
"ಬ್ಯಾಡ್ಮಿಂಟನ್ ಮಹಿಳೆಯರ ಸಿಂಗಲ್ಸ್ ಎಸ್ ಯು5 ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದಿರುವ ತುಳಸಿಮತಿ ಮುರುಗೇಶನ್ ಅವರಿಗೆ ಅಭಿನಂದನೆಗಳು. ಅವರ ಯಶಸ್ಸು ಪ್ರತಿಯೊಬ್ಬ ಭಾರತೀಯರನ್ನು ಹೆಮ್ಮೆ ಪಡುವಂತೆ ಮಾಡಿದೆ. ಇದು ಮುಂಬರುವ ಎಲ್ಲಾ ಕ್ರೀಡಾಪಟುಗಳಿಗೆ ಪ್ರೇರೇಪಣೆ ನೀಡುತ್ತದೆ" ಎಂದು ಪ್ರಶಂಶಿಸಿದ್ದಾರೆ.
Congratulations @Thulasimathi11 for the Gold Medal victory in the Badminton Women's Singles SU5 event. Her success makes every Indian proud and will motivate upcoming athletes. pic.twitter.com/zCKV5pTicy
— Narendra Modi (@narendramodi) October 27, 2023


