ವಿಕಸಿತ ಭಾರತದ ಕಡೆಗಿನ ಪಯಣವನ್ನು ವೇಗಗೊಳಿಸುವಲ್ಲಿ ಭಾರತದ ಯುವಕರು ಪ್ರಮುಖ ಪಾತ್ರ ವಹಿಸುತ್ತಿದ್ದಾರೆ: ಪ್ರಧಾನಮಂತ್ರಿ
ಉದ್ಯೋಗ ಮೇಳವು ಯುವ ಶಕ್ತಿಗೆ ಹೊಸ ಅವಕಾಶಗಳ ಮೂಲಕ ಸಬಲೀಕರಣಗೊಳಿಸುವ ನಮ್ಮ ಸರ್ಕಾರದ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ: ಪ್ರಧಾನಮಂತ್ರಿ
ಭಾರತದ ಯುವ ಜನಸಂಖ್ಯೆ ಮತ್ತು ತಾಂತ್ರಿಕ ಪ್ರಗತಿಯಿಂದ ಜಗತ್ತು ಅಪಾರವಾಗಿ ಉತ್ಸುಕವಾಗಿದೆ; ಇಂದು ಜಾಗತಿಕ ಸಮುದಾಯವು ಭಾರತದ ಅಭಿವೃದ್ಧಿಯ ಪಯಣದಲ್ಲಿ ಪಾಲುದಾರರಾಗಲು ಬಯಸುತ್ತಿದೆ: ಪ್ರಧಾನಮಂತ್ರಿ
ಇಂದು, ಸ್ವಚ್ಛ ಇಂಧನ, ನಿರ್ಣಾಯಕ ಖನಿಜಗಳು, ಹಸಿರು ಹೈಡ್ರೋಜನ್ ಮತ್ತು ಸುಸ್ಥಿರ ಉತ್ಪಾದನೆಗೆ ಸಂಬಂಧಿಸಿದ ಕ್ಷೇತ್ರಗಳು ಸಹ ಕ್ಷಿಪ್ರ ವೇಗದಲ್ಲಿ ಮುನ್ನಡೆಯುತ್ತಿವೆ; ಈ ಕ್ಷೇತ್ರಗಳಲ್ಲಿನ ಪಾಲುದಾರಿಕೆಗಳು ಹೊಸ ಆರ್ಥಿಕತೆ ಮತ್ತು ಹೊಸ ಅವಕಾಶಗಳ ಬಾಗಿಲುಗಳನ್ನು ತೆರೆಯುತ್ತಿವೆ: ಪ್ರಧಾನಮಂತ್ರಿ
ಪ್ರತಿಯೊಬ್ಬ ಭಾರತೀಯನೂ ಇಂದು ದೃಢವಾದ ಸಂಕಲ್ಪದೊಂದಿಗೆ ಮುನ್ನಡೆಯುತ್ತಿದ್ದಾನೆ; ಈ ಸಂಕಲ್ಪವು 2047ರ ವೇಳೆಗೆ 'ವಿಕಸಿತ ಭಾರತ'ವನ್ನು ನಿರ್ಮಿಸುವುದಾಗಿದೆ. ಈ ಉದ್ದೇಶವನ್ನು ಸಾಕಾರಗೊಳಿಸಲು, ದೇಶವು ಪ್ರಸ್ತುತ ಹಲವಾರು ಕ್ಷೇತ್ರಗಳಲ್ಲಿ ಹೂಡಿಕೆ ಮಾಡುತ್ತಿದೆ ಮತ್ತು ಈ ಹೂಡಿಕೆಗಳು ದೇಶದ ಯುವಕರಿಗೆ ಲಕ್ಷಾಂತರ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತಿವೆ: ಪ್ರಧಾನಮಂತ್ರಿ
ಇಂದು, ಗ್ರಾಮೀಣ ಪ್ರದೇಶಗಳಲ್ಲೂ ಕ್ಷಿಪ್ರ ಪರಿವರ್ತನೆ ಸ್ಪಷ್ಟವಾಗಿ ಗೋಚರಿಸುತ್ತಿದೆ; ಸುಧಾರಿತ ಸಂಪರ್ಕ ವ್ಯವಸ್ಥೆಯು ರೈತರು, ಸಣ್ಣ ವ್ಯಾಪಾರಿಗಳು ಮತ್ತು ವಿದ್ಯಾರ್ಥಿಗಳಿಗೆ ಹೊಸ ಮಾರ್ಗಗಳನ್ನು ಕಲ್ಪಿಸಿದೆ: ಪ್ರಧಾನಮಂತ್ರಿ
ಇಂದು ಭಾರತೀಯ ಯುವಕರು, ಪ್ರತಿ ಜಾಗತಿಕ ರಂಗದಲ್ಲೂ ತಮ್ಮ ಛಾಪು ಮೂಡಿಸುತ್ತಿದ್ದಾರೆ; ಇದೇ ಉತ್ಸಾಹ ಮತ್ತು ಶಕ್ತಿಯು ಸಾರ್ವಜನಿಕ ಸೇವೆಯಲ್ಲೂ ಪ್ರತಿಫಲಿಸಬೇಕು. ತಮ್ಮ ಕೆಲಸವನ್ನು ರಾಷ್ಟ್ರ ಸೇವೆಯ ಮಾಧ್ಯಮವೆಂದು ಭಾವಿಸುವ ಇಂತಹ ಯುವಕರ ಪರಿಶ್ರಮದಿಂದ ವಿಕಸಿತ ಭಾರತ ನಿರ್ಮಾಣವಾಗಲಿದೆ: ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ, ಬೆಳಿಗ್ಗೆ 11 ಗಂಟೆಗೆ ನಡೆದ 19ನೇ ಉದ್ಯೋಗ ಮೇಳದಲ್ಲಿ ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಿಗೆ ಹೊಸದಾಗಿ ಆಯ್ಕೆಯಾದ ಯುವಕರಿಗೆ, 51,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಸಂದರ್ಭವನ್ನು ದೇಶಾದ್ಯಂತದ ಸಾವಿರಾರು ಯುವಕರಿಗೆ ಅತ್ಯಂತ ಮಹತ್ವದ ದಿನ ಎಂದು ಬಣ್ಣಿಸಿದರು. ಸರ್ಕಾರಿ ಸೇವೆಗೆ ಹೊಸದಾಗಿ ಸೇರಿದವರನ್ನು ಸ್ವಾಗತಿಸಿದ ಅವರು, ರೈಲ್ವೆ, ಬ್ಯಾಂಕಿಂಗ್, ರಕ್ಷಣೆ, ಆರೋಗ್ಯ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಭಾರತದ ಅಭಿವೃದ್ಧಿಗೆ ಅವರು ನೀಡಲಿರುವ ಮುಂಬರುವ ಕೊಡುಗೆಯ ಬಗ್ಗೆ  ಒತ್ತಿಹೇಳಿದರು. "ಮುಂಬರುವ ವರ್ಷಗಳಲ್ಲಿ, ವಿಕಸಿತ ಭಾರತದ ದೃಷ್ಟಿಕೋನವನ್ನು ಸಾಕಾರಗೊಳಿಸುವಲ್ಲಿ ನೀವೆಲ್ಲರೂ ನಿರ್ಣಾಯಕ ಪಾತ್ರ ವಹಿಸಲಿದ್ದೀರಿ" ಎಂದು ಶ್ರೀ ಮೋದಿ ಪ್ರತಿಪಾದಿಸಿದರು.

ನೇಮಕಗೊಂಡವರನ್ನು ಈ ಮೈಲಿಗಲ್ಲಿಗೆ ತಲುಪಿಸಿದ ಅವರ ಸಮರ್ಪಣೆ ಮತ್ತು ಕಠಿಣ ಸಿದ್ಧತೆಯನ್ನು ಗೌರವಿಸಿದ ಪ್ರಧಾನಮಂತ್ರಿಯವರು, ಪ್ರತಿಯೊಬ್ಬರಿಗೂ ತಮ್ಮ ಹೃತ್ಪೂರ್ವಕ ಅಭಿನಂದನೆಗಳನ್ನು ತಿಳಿಸಿದರು. ಯಾವುದೇ ವೈಯಕ್ತಿಕ ಸಾಧನೆಯು ಕೇವಲ ಒಬ್ಬರಿಂದಲೇ ಸಾಧ್ಯವಾಗುವುದಿಲ್ಲ ಎಂಬುದನ್ನು ಗುರುತಿಸಿದ ಅವರು, ಈ ಪಯಣದಲ್ಲಿ ಬೆಂಬಲವಾಗಿ ನಿಂತ ಅವರ ಕುಟುಂಬಗಳು ಮತ್ತು ಪೋಷಕರಿಗೂ ತಮ್ಮ ಶುಭ ಹಾರೈಕೆಗಳನ್ನು ತಿಳಿಸಿದರು.

ಇತ್ತೀಚೆಗಷ್ಟೇ ಮುಕ್ತಾಯಗೊಂಡ ಐದು ದೇಶಗಳ ರಾಜತಾಂತ್ರಿಕ ಪ್ರವಾಸದ ಅನುಭವಗಳನ್ನು ಹಂಚಿಕೊಂಡ ಪ್ರಧಾನಮಂತ್ರಿಯವರು, ಹತ್ತಾರು ದೇಶಗಳನ್ನು ಪ್ರತಿನಿಧಿಸುವ ಜಾಗತಿಕ ಸಂಸ್ಥೆಗಳ ಮುಖ್ಯಸ್ಥರು ಭಾರತದ ಯುವಕರು ಮತ್ತು ಅದರ ತಾಂತ್ರಿಕ ಪ್ರಗತಿಯ ಬಗ್ಗೆ ವ್ಯಕ್ತಪಡಿಸಿದ ಅಪಾರ ಉತ್ಸಾಹವನ್ನು ವಿವರಿಸಿದರು. ಭಾರತದ ಉದಯದಲ್ಲಿ ಭಾಗವಹಿಸಲು ಜಗತ್ತು ಉತ್ಸುಕವಾಗಿದೆ ಎಂದು ಅವರು ಬಣ್ಣಿಸಿದರು. "ಜಗತ್ತು ಭಾರತದ ಅಭಿವೃದ್ಧಿಯ ಪಯಣದ ಭಾಗವಾಗಲು ಬಯಸುತ್ತದೆ" ಎಂದು ಶ್ರೀ ಮೋದಿ ನೆನಪಿಸಿಕೊಂಡರು.

ಪ್ರವಾಸದ ರಾಜತಾಂತ್ರಿಕ ಮತ್ತು ಆರ್ಥಿಕ ಫಲಿತಾಂಶಗಳನ್ನು ವಿವರಿಸಿದ ಪ್ರಧಾನಮಂತ್ರಿಯವರು, ಭೇಟಿ ನೀಡಿದ ಪ್ರತಿ ದೇಶದೊಂದಿಗೆ ಮಾಡಿಕೊಳ್ಳಲಾದ ವಲಯ-ನಿರ್ದಿಷ್ಟ ಒಪ್ಪಂದಗಳು ಮತ್ತು ನಡೆದ ಚರ್ಚೆಗಳ ನೀಲನಕಾಶೆಯನ್ನು ಪ್ರಸ್ತುತಪಡಿಸಿದರು. ನೆದರ್ಲ್ಯಾಂಡ್ಸ್‌ನೊಂದಿಗೆ ಸೆಮಿಕಂಡಕ್ಟರ್‌ಗಳು, ನೀರು, ಕೃಷಿ ಮತ್ತು ಸುಧಾರಿತ ಉತ್ಪಾದನೆ ಕುರಿತು ಚರ್ಚೆಗಳು; ಸ್ವೀಡನ್‌ನೊಂದಿಗೆ ಎಐ (AI) ಮತ್ತು ಡಿಜಿಟಲ್ ನಾವೀನ್ಯತೆ ಕ್ಷೇತ್ರಗಳಲ್ಲಿನ ಸಹಕಾರದ ಕುರಿತು ಮಾತುಕತೆಗಳು; ನಾರ್ವೆಯೊಂದಿಗೆ ಹಸಿರು ತಂತ್ರಜ್ಞಾನ ಮತ್ತು ಕಡಲ ಸಹಕಾರದ ಕುರಿತು ಚರ್ಚೆಗಳು; ಯುಎಇ ಯೊಂದಿಗೆ ಕಾರ್ಯತಂತ್ರದ ಇಂಧನ ಮತ್ತು ತಂತ್ರಜ್ಞಾನ ಪಾಲುದಾರಿಕೆಗಳ ಕುರಿತು ತಿಳುವಳಿಕೆ ಪತ್ರಗಳು; ಮತ್ತು ಇಟಲಿಯೊಂದಿಗೆ ರಕ್ಷಣೆ, ನಿರ್ಣಾಯಕ ಖನಿಜಗಳು ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನದ ಒಪ್ಪಂದಗಳು ಇದರಲ್ಲಿ ಸೇರಿವೆ. ಭಾರತದ ಅಂತಾರಾಷ್ಟ್ರೀಯ ಪಾಲುದಾರಿಕೆಗಳನ್ನು ಉದ್ದೇಶಪೂರ್ವಕವಾಗಿ ಅದರ ಯುವಕರ ಸೇವೆಗಾಗಿಯೇ ರೂಪಿಸಲಾಗಿದೆ ಎಂದು ಪ್ರಧಾನಿ ಶ್ರೀ ಮೋದಿ ಸ್ಪಷ್ಟಪಡಿಸಿದರು. "ಭಾರತದ ಯುವಕರಿಗೆ ಉದ್ಯೋಗ ಮತ್ತು ಜಾಗತಿಕ ಮನ್ನಣೆ ಸಿಗಬೇಕೆಂಬುದೇ ಇದರ ಉದ್ದೇಶವಾಗಿದೆ" ಎಂದು ಶ್ರೀ ಮೋದಿ ಪ್ರತಿಪಾದಿಸಿದರು.

ಪ್ರತಿಯೊಂದು ಒಪ್ಪಂದವು ಉದ್ಯೋಗ ಸೃಷ್ಟಿಗೆ ನೇರವಾಗಿ ಸಂಬಂಧಿಸಿದೆ ಎಂದು ತಿಳಿಸಿದ ಪ್ರಧಾನಮಂತ್ರಿಯವರು, ಪ್ರತಿಯೊಂದು ಹೊಸ ಹೂಡಿಕೆ, ಪ್ರತಿಯೊಂದು ತಂತ್ರಜ್ಞಾನ ಪಾಲುದಾರಿಕೆ ಮತ್ತು ಪ್ರತಿಯೊಂದು ಕೈಗಾರಿಕಾ ಸಹಯೋಗವು ಅಂತಿಮವಾಗಿ ಭಾರತದ ಯುವ ಜನತೆಗೆ ಹೊಸ ಅವಕಾಶಗಳನ್ನು ಸೃಷ್ಟಿಸುತ್ತದೆ ಎಂದು ಒತ್ತಿಹೇಳಿದರು. ಈ ಸಹಯೋಗಗಳ ದೀರ್ಘಕಾಲೀನ ಮಹತ್ವವನ್ನು ಅವರು ಮತ್ತೊಮ್ಮೆ ಒತ್ತಿಹೇಳಿದರು. "ಇವು ಮುಂದಿನ 25 ವರ್ಷಗಳವರೆಗೆ ಜಾಗತಿಕ ಬೆಳವಣಿಗೆಯನ್ನು ನಿರ್ಧರಿಸುವ ಕೈಗಾರಿಕೆಗಳನ್ನು ರೂಪಿಸುವ ಕ್ಷೇತ್ರಗಳಾಗಿವೆ" ಎಂದು ಶ್ರೀ ಮೋದಿ ಹೇಳಿದರು.

ಜಾಗತಿಕ ಪೂರೈಕೆ ಸರಪಳಿಯಲ್ಲಿ ಭಾರತವು ವಿಶ್ವಾಸಾರ್ಹ ಪಾಲುದಾರನಾಗಿ ಬೆಳೆಯುತ್ತಿರುವುದಕ್ಕೆ 'ಎಎಸ್‌ಎಂಎಲ್-ಟಾಟಾ ಎಲೆಕ್ಟ್ರಾನಿಕ್ಸ್' (ASML–Tata Electronics) ಒಪ್ಪಂದವನ್ನು ಜ್ವಲಂತ ಉದಾಹರಣೆಯಾಗಿ ಉಲ್ಲೇಖಿಸಿದ ಪ್ರಧಾನಮಂತ್ರಿಯವರು, ಡಚ್ ಸೆಮಿಕಂಡಕ್ಟರ್ ದೈತ್ಯ ಸಂಸ್ಥೆಯು ಒಪ್ಪಂದಕ್ಕೆ ಸಹಿ ಹಾಕಿದ ಕೆಲವೇ ಕೆಲವು ದೇಶಗಳಲ್ಲಿ ಭಾರತವೂ ಒಂದು ಎಂದು ಹೇಳುವ ಮೂಲಕ ಎಲ್ಲರ ಗಮನಸೆಳೆದರು. ಎಐ (AI) ಕುರಿತು ಸ್ವೀಡನ್‌ನೊಂದಿಗಿನ ಪಾಲುದಾರಿಕೆ ಮತ್ತು ಸೂಪರ್‌ಕಂಪ್ಯೂಟಿಂಗ್‌ನಲ್ಲಿ ಯುಎಇ ಯೊಂದಿಗಿನ ಸಹಕಾರವು ಭಾರತದ ತಾಂತ್ರಿಕ ಸಾಮರ್ಥ್ಯಗಳನ್ನು ಅದೇ ರೀತಿ ಬಲಪಡಿಸುತ್ತದೆ ಎಂದು ಅವರು ಹೇಳಿದರು. "ಈ ಒಂದು ಎಎಸ್‌ಎಂಎಲ್-ಟಾಟಾ ಎಲೆಕ್ಟ್ರಾನಿಕ್ಸ್ ಒಪ್ಪಂದವೊಂದೇ ಭಾರತದಲ್ಲಿ ಸಾವಿರಾರು ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸಲಿದೆ" ಎಂದು ಶ್ರೀ ಮೋದಿ ಅವರು ತಿಳಿಸಿದರು.

ಸ್ವಚ್ಛ ಇಂಧನ, ನಿರ್ಣಾಯಕ ಖನಿಜಗಳು, ಹಸಿರು ಹೈಡ್ರೋಜನ್ ಮತ್ತು ಸುಸ್ಥಿರ ಉತ್ಪಾದನೆಯು ಅಪಾರ ಅವಕಾಶಗಳ ಕ್ಷೇತ್ರಗಳಾಗಿ ವೇಗವಾಗಿ ಬೆಳೆಯುತ್ತಿರುವುದನ್ನು ಎತ್ತಿ ತೋರಿಸಿದ ಪ್ರಧಾನಮಂತ್ರಿಯವರು, ಹಸಿರು ಪರಿವರ್ತನೆ ಮತ್ತು ಸುಸ್ಥಿರ ತಂತ್ರಜ್ಞಾನದಲ್ಲಿ ಸ್ವೀಡನ್, ನಾರ್ವೆ ಮತ್ತು ಇಟಲಿಯೊಂದಿಗೆ ಬೆಳೆಯುತ್ತಿರುವ ಸಹಯೋಗವು ಭವಿಷ್ಯದ ಸ್ವಚ್ಛ ಉತ್ಪಾದನಾ ಕೈಗಾರಿಕೆಗಳಲ್ಲಿ ಭಾರತವನ್ನು ಬಲವಾಗಿ ಮುನ್ನಡೆಸಲಿದೆ ಎಂದರು. "ಈ ಪಾಲುದಾರಿಕೆಗಳು ಹೊಸ ಆರ್ಥಿಕತೆ ಮತ್ತು ಹೊಸ ಅವಕಾಶಗಳ ಬಾಗಿಲುಗಳನ್ನು ತೆರೆಯುತ್ತಿವೆ" ಎಂದು ಶ್ರೀ ಮೋದಿ ಪ್ರತಿಪಾದಿಸಿದರು.

ಬಂದರುಗಳು, ಹಡಗು ನಿರ್ಮಾಣ ಮತ್ತು ಕಡಲ ಮೂಲಸೌಕರ್ಯ ಒಪ್ಪಂದಗಳ ಕುರಿತು ವೇಗವಾಗಿ ನಡೆಯುತ್ತಿರುವ ಕೆಲಸಗಳನ್ನು ಉಲ್ಲೇಖಿಸಿದ ಪ್ರಧಾನಮಂತ್ರಿಯವರು, ಯುಎಇ ಮತ್ತು ನಾರ್ವೆಯೊಂದಿಗಿನ ಪಾಲುದಾರಿಕೆಯು ಭಾರತದ ಹಡಗು ನಿರ್ಮಾಣ ಪರಿಸರ ವ್ಯವಸ್ಥೆಯನ್ನು ಬಲಪಡಿಸುತ್ತದೆ, ಇದು ದೇಶದ ಇಂಜಿನಿಯರ್‌ಗಳು, ತಂತ್ರಜ್ಞರು ಮತ್ತು ನುರಿತ ಕಾರ್ಮಿಕರ ಅವಕಾಶಗಳ ಹಾರಿಜಾನ್ ಅನ್ನು ನೇರವಾಗಿ ವಿಸ್ತರಿಸುತ್ತದೆ ಎಂದರು. "ಭಾರತದ ಇಂಜಿನಿಯರ್‌ಗಳು, ತಂತ್ರಜ್ಞರು ಮತ್ತು ನುರಿತ ಕಾರ್ಮಿಕರಿಗೆ ಹೊಸ ಅವಕಾಶಗಳು ಸೃಷ್ಟಿಯಾಗಲಿವೆ" ಎಂದು ಶ್ರೀ ಮೋದಿ ಅವರು ಒತ್ತಿ ಹೇಳಿದರು.

ಪ್ರತಿಯೊಂದು ಹೊಸ ಪಾಲುದಾರಿಕೆಯು ಭಾರತೀಯ ಸ್ಟಾರ್ಟ್-ಅಪ್‌ಗಳು, ಸಂಶೋಧಕರು ಮತ್ತು ಯುವ ವೃತ್ತಿಪರರಿಗೆ ಜಾಗತಿಕ ಸಂಪರ್ಕವನ್ನು ವಿಸ್ತರಿಸುತ್ತದೆ ಎಂಬುದರ ಬಗ್ಗೆ ಒತ್ತಿ ಹೇಳಿದ ಪ್ರಧಾನಮಂತ್ರಿಯವರು, ಇಂದು ಜಗತ್ತು ದೊಡ್ಡ ಪ್ರಮಾಣದಲ್ಲಿ ನಾವೀನ್ಯತೆ ಮಾಡುವ, ನಿರ್ಮಿಸುವ ಮತ್ತು ಫಲಿತಾಂಶ ನೀಡುವ ರಾಷ್ಟ್ರಗಳನ್ನು ಗೌರವಿಸುತ್ತದೆ ಎಂದರು. ಭಾರತವು ಈ ಮೂರೂ ರಂಗಗಳಲ್ಲಿ ಮುನ್ನಡೆಯುತ್ತಿರುವುದಕ್ಕೆ ಅವರು ಹೆಮ್ಮೆ ವ್ಯಕ್ತಪಡಿಸಿದರು. "ಪ್ರಗತಿಯ ಹಿಂದಿನ ಅತ್ಯಂತ ದೊಡ್ಡ ಶಕ್ತಿ ಎಂದರೆ ಭಾರತದ ಯುವಶಕ್ತಿ, ಅಂದರೆ ನೀವೆಲ್ಲರೂ" ಎಂದು ಶ್ರೀ ಮೋದಿ ಪುನರುಚ್ಚರಿಸಿದರು.

ಈ ಸಂದರ್ಭವನ್ನು ದೊಡ್ಡ ರಾಷ್ಟ್ರೀಯ ಮಿಷನ್‌ನೊಂದಿಗೆ ಜೋಡಿಸಿದ ಪ್ರಧಾನಮಂತ್ರಿಯವರು, 2047ರ ವೇಳೆಗೆ ವಿಕಸಿತ ಭಾರತವನ್ನು ನಿರ್ಮಿಸುವ ಸಾಮೂಹಿಕ ಸಂಕಲ್ಪದ ಬಗ್ಗೆ ಮಾತನಾಡಿದರು. ಸರ್ಕಾರದ ವಿವಿಧ ವಲಯಗಳ ಹೂಡಿಕೆಯು ಈ ಮಹತ್ವಾಕಾಂಕ್ಷೆಯ ನೇರ ಪರಿಣಾಮವಾಗಿ ಲಕ್ಷಾಂತರ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತಿದೆ ಎಂದು ತಿಳಿಸಿದರು. "ಈ ಹೂಡಿಕೆಯು ದೇಶದ ಯುವಕರಿಗೆ ಲಕ್ಷಾಂತರ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತಿದೆ" ಎಂದು ಶ್ರೀ ಮೋದಿ ಹೇಳಿದರು.

ಭಾರತದ ಉದಯೋನ್ಮುಖ ಸೆಮಿಕಂಡಕ್ಟರ್ ಪರಿಸರ ವ್ಯವಸ್ಥೆಯ ವ್ಯಾಪ್ತಿಯನ್ನು ಪಟ್ಟಿ ಮಾಡಿದ ಪ್ರಧಾನಮಂತ್ರಿಯವರು, ಸೆಮಿಕಂಡಕ್ಟರ್ ಉತ್ಪಾದನೆಗಾಗಿ ಸಂಪೂರ್ಣ ದೇಶೀಯ ಪೂರೈಕೆ ಸರಪಳಿಯನ್ನು ಸ್ಥಾಪಿಸಲಾಗುತ್ತಿದೆ ಮತ್ತು ಹತ್ತು ಪ್ರಮುಖ ಸೆಮಿಕಂಡಕ್ಟರ್ ಘಟಕಗಳು ಶೀಘ್ರದಲ್ಲೇ ಜಾಗತಿಕ ಮಟ್ಟದಲ್ಲಿ ತಮ್ಮ ಮುದ್ರೆಯನ್ನು ಒತ್ತಲಿವೆ, ಈಗಾಗಲೇ ಹೆಚ್ಚಿನ ಸಂಖ್ಯೆಯ ಯುವ ಭಾರತೀಯರು ಅವುಗಳಲ್ಲಿ ಉದ್ಯೋಗವನ್ನು ಕಂಡುಕೊಂಡಿದ್ದಾರೆ ಎಂದು ಘೋಷಿಸಿದರು. "ಭಾರತದ ಸೆಮಿಕಂಡಕ್ಟರ್ ಘಟಕಗಳು ಜಗತ್ತಿನಲ್ಲಿ ತಮ್ಮ ಮುದ್ರೆಯನ್ನು ಒತ್ತಲಿವೆ" ಎಂದು ಪ್ರಧಾನ ಮಂತ್ರಿ ಶ್ರೀ ಮೋದಿ ಅವರು ವಿಶ್ವಾಸ ವ್ಯಕ್ತಪಡಿಸಿದರು.

ಸುಮಾರು ₹75,000 ಕೋಟಿ ಹೂಡಿಕೆಯ ಬೆಂಬಲದೊಂದಿಗೆ ಭಾರತದಲ್ಲಿ ಅಭಿವೃದ್ಧಿಯಾಗುತ್ತಿರುವ ಹಡಗು ನಿರ್ಮಾಣ, ಹಡಗು ದುರಸ್ತಿ ಮತ್ತು ಓವರ್‌ಹಾಲಿಂಗ್ (overhauling) ಹಾಗೂ ಪರಿಸರ ವ್ಯವಸ್ಥೆಯ ಕಡೆಗೆ ಗಮನ ಸೆಳೆದ ಪ್ರಧಾನಮಂತ್ರಿಯವರು, ವಿಮಾನಯಾನ ವಲಯವನ್ನು ಪರಿವರ್ತಿಸುವ ಭರವಸೆ ನೀಡುವ ನಿರ್ವಹಣೆ, ಓವರ್‌ಹಾಲ್ ಮತ್ತು ದುರಸ್ತಿ ಸೌಲಭ್ಯಗಳನ್ನು ಒಳಗೊಂಡ ಸಂಪೂರ್ಣ 'ಎಂಆರ್‌ಒ' (MRO) ಪರಿಸರ ವ್ಯವಸ್ಥೆಯ ಅಭಿವೃದ್ಧಿಯನ್ನು ಎತ್ತಿ ತೋರಿಸಿದರು. "ಭಾರತದ ಯುವಕರಿಗೆ ಹೊಸ ಉದ್ಯೋಗ ವಲಯವೊಂದು ಮುಕ್ತವಾಗಲಿದೆ" ಎಂದು ಶ್ರೀ ಮೋದಿ ಅವರು ಪ್ರತಿಪಾದಿಸಿದರು.

ಭಾರತವು ಒಂದು ಪ್ರಮುಖ ಎಲೆಕ್ಟ್ರಾನಿಕ್ಸ್ ತಯಾರಕ ದೇಶವಾಗಿ ಹೊರಹೊಮ್ಮುತ್ತಿರುವುದನ್ನು ಬಣ್ಣಿಸಿದ ಪ್ರಧಾನಮಂತ್ರಿಯವರು, ಪ್ರೊಡಕ್ಷನ್ ಲಿಂಕ್ಡ್ ಇನ್ಸೆಂಟಿವ್ (PLI) ಯೋಜನೆಯು ದಾಖಲೆಯ ಎಲೆಕ್ಟ್ರಾನಿಕ್ಸ್ ಉತ್ಪಾದನೆಯನ್ನು ಮುನ್ನಡೆಸುವ ಮತ್ತು ಯುವಕರಿಗೆ ಲಕ್ಷಾಂತರ ಉದ್ಯೋಗಗಳನ್ನು ಸೃಷ್ಟಿಸುವ ಎಂಜಿನ್ ಆಗಿದೆ ಎಂದರು, ಇದರೊಂದಿಗೆ ಸಂಪೂರ್ಣ ಎಲೆಕ್ಟ್ರಾನಿಕ್ಸ್ ಮೌಲ್ಯ ಸರಪಳಿಯನ್ನು ದೇಶೀಯವಾಗಿಯೇ ನಿರ್ಮಿಸಲಾಗುತ್ತಿದೆ. "ಪಿಎಲ್‌ಐ (PLI) ಯೋಜನೆಯು ದೇಶದಲ್ಲಿ ದಾಖಲೆಯ ಎಲೆಕ್ಟ್ರಾನಿಕ್ಸ್ ಉತ್ಪಾದನೆಗೆ ಕಾರಣವಾಗುತ್ತಿದೆ" ಎಂದು ಹೇಳುವ ಮೂಲಕ ಶ್ರೀ ಮೋದಿ ಅವರು ಎಲ್ಲರ ಗಮನ ಸೆಳೆದರು.

ಸಾರ್ವಜನಿಕ ಮತ್ತು ಖಾಸಗಿ ವಲಯಗಳೆರಡೂ ಜಂಟಿಯಾಗಿ ಈ ಬಹುಮುಖಿ ಉಪಕ್ರಮಗಳಲ್ಲಿ ಭಾರಿ ಪ್ರಮಾಣದ ಹೂಡಿಕೆಯನ್ನು ತೊಡಗಿಸುತ್ತಿವೆ ಎಂದು ಒತ್ತಿಹೇಳಿದ ಪ್ರಧಾನಮಂತ್ರಿಯವರು, ಹೊಸದಾಗಿ ನೇಮಕಗೊಂಡ ಸರ್ಕಾರಿ ಉದ್ಯೋಗಿಗಳು ವ್ಯಾಪಾರ ಮತ್ತು ಉದ್ಯಮಗಳನ್ನು ಸುಗಮಗೊಳಿಸುವಲ್ಲಿ ತಮ್ಮ ಪಾತ್ರದ ಬಗ್ಗೆ ಗಮನ ಹರಿಸಬೇಕು ಎಂದು ಕರೆ ನೀಡಿದರು. "ಸುಲಭ ವ್ಯಾಪಾರ ನಿರ್ವಹಣೆಯು  ದೇಶಕ್ಕೆ ಅತ್ಯಂತ ದೊಡ್ಡ ಆದ್ಯತೆಯಾಗಿದೆ" ಎಂದು ಶ್ರೀ ಮೋದಿ ಅವರು ಪ್ರತಿಪಾದಿಸಿದರು.

ಉದ್ಯೋಗ ಸೃಷ್ಟಿ ಮತ್ತು ಸಮಗ್ರ ಬೆಳವಣಿಗೆಯನ್ನು ಮುನ್ನಡೆಸುವಲ್ಲಿ, ಮೂಲಸೌಕರ್ಯವಹಿಸುವ  ಪ್ರಮುಖ ಪಾತ್ರದ ಕುರಿತು ಒತ್ತಿಹೇಳಿದ ಪ್ರಧಾನಮಂತ್ರಿಯವರು, ಹಳ್ಳಿಗಳು, ಸಣ್ಣ ಪಟ್ಟಣಗಳು ಮತ್ತು ದೂರದ ಪ್ರದೇಶಗಳನ್ನು ಅಭಿವೃದ್ಧಿಯ ಚೌಕಟ್ಟಿನಲ್ಲಿ ಸಂಯೋಜಿಸಿದಾಗ ಮಾತ್ರ ರಾಷ್ಟ್ರೀಯ ಪ್ರಗತಿಯ ನಿಜವಾದ ಲಾಭವು ಅದರ ಸಂಪೂರ್ಣ ಸಾಮರ್ಥ್ಯವನ್ನು ತಲುಪುತ್ತದೆ ಎಂದರು. "ಹಳ್ಳಿಗಳು ಮತ್ತು ದೂರದ ಪ್ರದೇಶಗಳು ಅಭಿವೃದ್ಧಿಯೊಂದಿಗೆ ಸಂಪರ್ಕ ಹೊಂದಿದಾಗ, ದೇಶದ ಪ್ರಗತಿಯ ಪ್ರಯೋಜನವು ಹೆಚ್ಚಿನ ಜನರನ್ನು ತಲುಪುತ್ತದೆ" ಎಂದು ಶ್ರೀ ಮೋದಿ ಅವರು ಒತ್ತಿ ಹೇಳಿದರು.

ಕಳೆದ ಹನ್ನೆರಡು ವರ್ಷಗಳಲ್ಲಿ ರೈಲ್ವೆ, ಹೆದ್ದಾರಿಗಳು, ವಿಮಾನ ನಿಲ್ದಾಣಗಳು, ಲಾಜಿಸ್ಟಿಕ್ಸ್, ಬಂದರುಗಳು ಮತ್ತು ಡಿಜಿಟಲ್ ನೆಟ್‌ವರ್ಕ್‌ಗಳಾದ್ಯಂತ ನಿರ್ಮಿಸಲಾದ ಮೂಲಸೌಕರ್ಯಗಳ ವ್ಯಾಪ್ತಿಯನ್ನು ಪಟ್ಟಿ ಮಾಡಿದ ಪ್ರಧಾನಮಂತ್ರಿಯವರು, ಸಂಪರ್ಕ ವ್ಯವಸ್ಥೆಯು ರೈತರು, ಸಣ್ಣ ವ್ಯಾಪಾರಿಗಳು ಮತ್ತು ವಿದ್ಯಾರ್ಥಿಗಳಿಗೆ ಹೊಸ ಮಾರ್ಗಗಳನ್ನು ಮುಕ್ತಗೊಳಿಸಿದೆ ಎಂದರು, ಈ ಪರಿವರ್ತನೆಯು ಈಗ ಭಾರತದ ಹಳ್ಳಿಗಳನ್ನೂ ಸಹ ಅತ್ಯಂತ ವೇಗವಾಗಿ ಮರುರೂಪಿಸುತ್ತಿದೆ. "ಗ್ರಾಮಗಳಲ್ಲೂ ಸಹ ಅತ್ಯಂತ ಶೀಘ್ರ ಗತಿಯಲ್ಲಿ ಬದಲಾವಣೆಗಳು ಆಗುತ್ತಿರುವುದು ಸ್ಪಷ್ಟವಾಗಿ ಕಂಡುಬರುತ್ತಿದೆ" ಎಂದು ಶ್ರೀ ಮೋದಿ ತಿಳಿಸಿದರು.

ಕೋಟ್ಯಾಂತರ ಭಾರತೀಯ ಕುಟುಂಬಗಳಿಗೆ, ಜಲ ಜೀವನ್ ಮಿಷನ್ ಅಡಿಯಲ್ಲಿ ಕಾಯಂ ಮನೆಗಳು, ಗೃಹ ಶೌಚಾಲಯಗಳು, ವಿದ್ಯುತ್ ಮತ್ತು ನಲ್ಲಿ ನೀರಿನ ಸಂಪರ್ಕ ಒದಗಿಸಿರುವ ಮೂಲಭೂತ ಸೌಕರ್ಯಗಳ ಸಾಮಾಜಿಕ ಪ್ರಭಾವವನ್ನು ಸ್ಮರಿಸಿದ ಪ್ರಧಾನಮಂತ್ರಿಯವರು, ಈ ಮೂಲಭೂತ ಬದಲಾವಣೆಗಳು ಕೇವಲ ಸೌಕರ್ಯಗಳಿಗೆ ಮಾತ್ರ ಸೀಮಿತವಾಗಿಲ್ಲ ಎಂದರು. "ಈ ಬದಲಾವಣೆಗಳ ಪ್ರಭಾವ ಕೇವಲ ಸೌಕರ್ಯಗಳಿಗೆ ಮಾತ್ರ ಸೀಮಿತವಾಗಿಲ್ಲ" ಎಂದು ಶ್ರೀ ಮೋದಿ ಅವರು ಹೇಳಿದರು.

ಗ್ರಾಮೀಣ ರಸ್ತೆಗಳು, ಸುಧಾರಿತ ವಿದ್ಯುತ್ ಮತ್ತು ಡಿಜಿಟಲ್ ಸಂಪರ್ಕಗಳು ಆರ್ಥಿಕ ಚಟುವಟಿಕೆಗಳನ್ನು ಹೇಗೆ ಬಹುಗುಣಗೊಳಿಸಿವೆ, ಮಾರುಕಟ್ಟೆಗಳ ಸಂಪರ್ಕವನ್ನು ಸುಲಭಗೊಳಿಸಿವೆ, ಸಣ್ಣ ಉದ್ಯಮಗಳು ಅಭಿವೃದ್ಧಿ ಹೊಂದಲು ಶಕ್ತಿ ನೀಡಿವೆ ಮತ್ತು ಹಳ್ಳಿಗಳನ್ನು ಹೊಸ ಡಿಜಿಟಲ್ ವ್ಯವಸ್ಥೆಗಳಿಗೆ ಒಳಪಡಿಸಿವೆ ಎಂಬುದನ್ನು ವಿವರಿಸಿದ ಪ್ರಧಾನಮಂತ್ರಿಯವರು, ಈ ಪರಸ್ಪರ ಸಂಪರ್ಕಿತ ಸುಧಾರಣೆಗಳು ಒಟ್ಟಾಗಿ ಭಾರತದ ಆರ್ಥಿಕತೆಯ ವೇಗವನ್ನು ಹೆಚ್ಚಿಸಿವೆ ಮತ್ತು ಲಕ್ಷಾಂತರ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸಿವೆ ಎಂದರು. "ಇವೆಲ್ಲವೂ ಉದ್ಯೋಗ ಸೃಷ್ಟಿಯ ಮೇಲೆ ಸಕಾರಾತ್ಮಕ ಪ್ರಭಾವ ಬೀರಿದೆ" ಎಂದು ಶ್ರೀ ಮೋದಿ ಅವರು ಪುನರುಚ್ಚರಿಸಿದರು.

ಉತ್ಪಾದನೆ, ತಂತ್ರಜ್ಞಾನ, ಸ್ಟಾರ್ಟ್-ಅಪ್‌ಗಳು, ಡಿಜಿಟಲ್ ಸೇವೆಗಳು, ರೈಲ್ವೆ, ರಕ್ಷಣೆ ಮತ್ತು ಬಾಹ್ಯಾಕಾಶ ಕ್ಷೇತ್ರಗಳಾದ್ಯಂತ ಇಂದು ಭಾರತದ ಯುವಕರಿಗೆ ಲಭ್ಯವಿರುವ ಅವಕಾಶಗಳು ದೇಶದ ಇತಿಹಾಸದಲ್ಲೇ ಹಿಂದೆಂದೂ ಕಂಡಿರದಂತಹುದು ಎಂದು ಘೋಷಿಸಿದ ಪ್ರಧಾನಮಂತ್ರಿಯವರು, ಗರಿಷ್ಠ ಸಂಖ್ಯೆಯ ಯುವಕರು ಈ ಅವಕಾಶಗಳನ್ನು ಬಳಸಿಕೊಳ್ಳಲು ಮತ್ತು ಅವರ ಪ್ರತಿಭೆಯನ್ನು ಸಂಪೂರ್ಣವಾಗಿ ಪ್ರದರ್ಶಿಸಲು ಸರ್ಕಾರ ಬದ್ಧವಾಗಿದೆ ಎಂದು ಪುನರುಚ್ಚರಿಸಿದರು. "ಭಾರತದ ಯುವಕರು ತಮ್ಮ ಕನಸುಗಳನ್ನು ನನಸಾಗಿಸಿಕೊಳ್ಳಲು ಇಂದು ಹೊಂದಿರುವ ಅವಕಾಶಗಳು ಹಿಂದೆಂದೂ ಇರಲಿಲ್ಲ" ಎಂದು ಶ್ರೀ ಮೋದಿ ಪ್ರತಿಪಾದಿಸಿದರು.

ಐಟಿಐಗಳ (ITIs) ಆಧುನೀಕರಣ, ರಾಷ್ಟ್ರೀಯ ಕೌಶಲ್ಯ ತರಬೇತಿ ಸಂಸ್ಥೆಗಳ ಬಲವರ್ಧನೆ ಮತ್ತು 'ಪಿಎಂ ಸೇತು' (PM SETU) ಉಪಕ್ರಮದ ಜಾರಿ ಸೇರಿದಂತೆ ಕೌಶಲ್ಯ ಅಭಿವೃದ್ಧಿ, ಉದ್ಯಮ-ಸಂಯೋಜಿತ ಶಿಕ್ಷಣ ಮತ್ತು ಭವಿಷ್ಯದ ತಂತ್ರಜ್ಞಾನದಲ್ಲಿ ಸರ್ಕಾರದ ಪ್ರಸ್ತುತ ಹೂಡಿಕೆಯ ಬಗ್ಗೆ ವಿವರಿಸಿದ ಪ್ರಧಾನಮಂತ್ರಿಯವರು, ತ್ವರಿತಗತಿಯಲ್ಲಿ ಅಭಿವೃದ್ಧಿಯಾಗುತ್ತಿರುವ ಆರ್ಥಿಕತೆಯ ವೇಗಕ್ಕೆ ಹೊಂದಿಕೊಳ್ಳಲು, ನಿರಂತರ ಸಿದ್ಧತೆಯ ಪ್ರಾಮುಖ್ಯತೆ ಬಗ್ಗೆ ಅವರು  ಒತ್ತಿಹೇಳಿದರು. "ಕೌಶಲ್ಯ ಅಭಿವೃದ್ಧಿ, ಉದ್ಯಮ-ಸಂಯೋಜಿತ ಶಿಕ್ಷಣ ಮತ್ತು ಭವಿಷ್ಯದ ತಂತ್ರಜ್ಞಾನಕ್ಕೆ ನಿರಂತರ ಒತ್ತು ನೀಡಲಾಗುತ್ತಿದೆ" ಎಂದು ಶ್ರೀ ಮೋದಿ ಅವರು ತಿಳಿಸಿದರು.

ದೇಶಾದ್ಯಂತ ಸ್ವಯಂ ಉದ್ಯೋಗ ಮತ್ತು ಉದ್ಯಮಶೀಲತೆಯ ಹೊಸ ಸಂಸ್ಕೃತಿಯ ಉದಯವನ್ನು ಶ್ಲಾಘಿಸಿದ ಪ್ರಧಾನಮಂತ್ರಿಯವರು, ಭಾರತವು 2.3 ಲಕ್ಷಕ್ಕೂ ಹೆಚ್ಚು ಮಾನ್ಯತೆ ಪಡೆದ ಸ್ಟಾರ್ಟ್-ಅಪ್‌ಗಳೊಂದಿಗೆ ವಿಶ್ವದ ಮೂರನೇ ಅತಿ ದೊಡ್ಡ ಸ್ಟಾರ್ಟ್-ಅಪ್ ಪರಿಸರ ವ್ಯವಸ್ಥೆಯಾಗಿ ಹೊರಹೊಮ್ಮಿದೆ ಮತ್ತು ಈ ಪರಿವರ್ತನೆಯು ಇನ್ನು ಮುಂದೆ ಕೇವಲ ಮೆಟ್ರೋಪಾಲಿಟನ್ ಕೇಂದ್ರಗಳಿಗೆ ಸೀಮಿತವಾಗಿಲ್ಲ ಎಂದರು. "ಈ ಬದಲಾವಣೆಯು ಕೇವಲ ದೊಡ್ಡ ನಗರಗಳಿಗೆ ಮಾತ್ರ ಸೀಮಿತವಾಗಿಲ್ಲ" ಎಂದು ಶ್ರೀ ಮೋದಿ ಅವರು ಪ್ರತಿಪಾದಿಸಿದರು.

ಟೈರ್-2 ಮತ್ತು ಟೈರ್-3 ನಗರಗಳ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಸ್ಟಾರ್ಟ್-ಅಪ್‌ಗಳು ಮತ್ತು ನಾವೀನ್ಯತೆಗಳ ಜಗತ್ತನ್ನು ಪ್ರವೇಶಿಸುತ್ತಿದ್ದಾರೆ ಮತ್ತು ಈ ಆಂದೋಲನವು ರಾಷ್ಟ್ರೀಯ ಆರ್ಥಿಕತೆಯ ಪ್ರಮುಖ ಅಂಶವಾಗಿದೆ ಎಂದು ಹೆಮ್ಮೆಯಿಂದ ಹೇಳಿದ ಪ್ರಧಾನಮಂತ್ರಿಯವರು, ಈ ಉದ್ಯಮಶೀಲತೆಯ ಉಲ್ಬಣದಲ್ಲಿ ಭಾರತದ ಮಹಿಳೆಯರ ಬೆಳೆಯುತ್ತಿರುವ ಮತ್ತು ನಿರ್ಣಾಯಕ ಪಾತ್ರವನ್ನು ಎತ್ತಿ ತೋರಿಸಿದರು. ಮುದ್ರಾ ಯೋಜನೆಯ ಮೂಲಕ ಕೋಟ್ಯಂತರ ಮಹಿಳೆಯರ ಆರ್ಥಿಕ ಸಬಲೀಕರಣ ಮತ್ತು ಪಿಎಂ ಸ್ವನಿಧಿ ಯಂತಹ ಯೋಜನೆಗಳ ಮೂಲಕ ಸಾಧ್ಯವಾದ ಸ್ವಾವಲಂಬನೆಯನ್ನು ಗುರುತಿಸಿದ ಶ್ರೀ ಮೋದಿ, "ಇಂದು ಹಳ್ಳಿಗಳು ಮತ್ತು ಸಣ್ಣ ಪಟ್ಟಣಗಳಲ್ಲಿ ಹಿಂದೆಂದಿಗಿಂತಲೂ ಹೆಚ್ಚು ಮಹಿಳೆಯರು ಸಂಪೂರ್ಣವಾಗಿ ತಮ್ಮದೇ ಆದ ಹೊಸ ಉದ್ಯಮಗಳನ್ನು ಪ್ರಾರಂಭಿಸುತ್ತಿದ್ದಾರೆ" ಎಂದರು.

ಹೊಸದಾಗಿ ನೇಮಕಗೊಂಡವರನ್ನು ನೇರವಾಗಿ ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಯಾವುದೇ ಸಂಸ್ಥೆಯ ನಿಜವಾದ ಶಕ್ತಿ ಅಲ್ಲಿನ ಜನರಲ್ಲಿದೆ ಮತ್ತು ಅವರು ಸೇರುತ್ತಿರುವ ವ್ಯವಸ್ಥೆಯು ಕೋಟ್ಯಂತರ ನಾಗರಿಕರ ಜೀವನದೊಂದಿಗೆ ನಿಕಟವಾದ ಮತ್ತು ನೇರವಾದ ಸಂಪರ್ಕ ಹೊಂದಿದೆ ಎಂಬುದನ್ನು ನೆನಪಿಸಿದರು. ಸರ್ಕಾರಿ ಉದ್ಯೋಗವು ಮೊದಲನೆಯದಾಗಿ ಜನರ ಜೀವನವನ್ನು ಸುಲಭಗೊಳಿಸುವ ಮಾಧ್ಯಮವಾಗಿದೆ ಎಂದು ಅವರು ತಿಳಿಸಿದರು. "ನೀವು ಯಾವುದೇ ಇಲಾಖೆಯಲ್ಲಿ ಸೇವೆ ಸಲ್ಲಿಸಿದರೂ, ನಿಮ್ಮ ನಡವಳಿಕೆ, ಸಹಾನುಭೂತಿ ಮತ್ತು ಕೆಲಸ ಮಾಡುವ ವಿಧಾನವು ಅತ್ಯಂತ ಮಹತ್ವದ್ದಾಗಿರುತ್ತದೆ" ಎಂದು ಶ್ರೀ ಮೋದಿ ಹೇಳಿದರು.

ಹೊಸದಾಗಿ ನೇಮಕಗೊಂಡವರ ಮೇಲೆ ದೇಶದ ನಾಗರಿಕರು ಹೊಂದಿರುವ ವಿಶ್ವಾಸವನ್ನು ದೃಢೀಕರಿಸಿದ ಪ್ರಧಾನಮಂತ್ರಿಯವರು, ಪ್ರತಿಯೊಬ್ಬ ಯುವ ಕರ್ಮಯೋಗಿಯು, ತಮ್ಮ ಹುದ್ದೆಯನ್ನು ಒಂದು ಜೀವಂತ ಜವಾಬ್ದಾರಿಯೆಂದು ಭಾವಿಸಬೇಕು, ಭಾರತದ ಜನರ ಬೆಳೆಯುತ್ತಿರುವ ಆಕಾಂಕ್ಷೆಗಳನ್ನು ಅರ್ಥಮಾಡಿಕೊಳ್ಳಬೇಕು ಮತ್ತು ಅದಕ್ಕೆ ಅನುಗುಣವಾಗಿ ತಮ್ಮ ಕರ್ತವ್ಯಗಳನ್ನು ನಿಭಾಯಿಸಬೇಕು ಎಂದು ಕರೆ ನೀಡಿದರು. "ಈಗ ನಿಮ್ಮ ಕೆಲಸದ ಮೂಲಕ ಆ ನಂಬಿಕೆಯನ್ನು ಬಲಪಡಿಸುವುದು ನಿಮ್ಮ ಜವಾಬ್ದಾರಿಯಾಗಿದೆ" ಎಂದು ಶ್ರೀ ಮೋದಿ ಹೇಳಿದರು.

ಹೊಸದಾಗಿ ನೇಮಕಗೊಂಡವರ ಮೇಲೆ ದೇಶದ ನಾಗರಿಕರು ಹೊಂದಿರುವ ವಿಶ್ವಾಸವನ್ನು ದೃಢೀಕರಿಸಿದ ಪ್ರಧಾನಮಂತ್ರಿಯವರು, ಪ್ರತಿಯೊಬ್ಬ ಯುವ ಕರ್ಮಯೋಗಿಯು, ತಮ್ಮ ಹುದ್ದೆಯನ್ನು ಒಂದು ಜೀವಂತ ಜವಾಬ್ದಾರಿಯೆಂದು ಭಾವಿಸಬೇಕು, ಭಾರತದ ಜನರ ಬೆಳೆಯುತ್ತಿರುವ ಆಕಾಂಕ್ಷೆಗಳನ್ನು ಅರ್ಥಮಾಡಿಕೊಳ್ಳಬೇಕು ಮತ್ತು ಅದಕ್ಕೆ ಅನುಗುಣವಾಗಿ ತಮ್ಮ ಕರ್ತವ್ಯಗಳನ್ನು ನಿಭಾಯಿಸಬೇಕು ಎಂದು ಕರೆ ನೀಡಿದರು. "ಈಗ ನಿಮ್ಮ ಕೆಲಸದ ಮೂಲಕ ಆ ನಂಬಿಕೆಯನ್ನು ಬಲಪಡಿಸುವುದು ನಿಮ್ಮ ಜವಾಬ್ದಾರಿಯಾಗಿದೆ" ಎಂದು ಶ್ರೀ ಮೋದಿ ಹೇಳಿದರು.

ಹೊಸ ಸರ್ಕಾರಿ ಉದ್ಯೋಗಿಗಳು ಜೀವಮಾನವಿಡೀ ಕಲಿಯಲು ಮತ್ತು ಹೊಸ ತಂತ್ರಜ್ಞಾನಗಳು, ವ್ಯವಸ್ಥೆಗಳು ಹಾಗೂ ವಿಕಸನಗೊಳ್ಳುತ್ತಿರುವ ಅಗತ್ಯಗಳಿಗೆ ನಿರಂತರವಾಗಿ ಹೊಂದಿಕೊಳ್ಳಲು ಬದ್ಧರಾಗಿರಬೇಕು ಎಂದು ಒತ್ತಾಯಿಸಿದ ಪ್ರಧಾನಮಂತ್ರಿಯವರು, 'ಐಗಾಟ್ ಕರ್ಮಯೋಗಿ' (iGOT Karmayogi) ವೇದಿಕೆ ಮತ್ತು 'ಕರ್ಮಯೋಗಿ ಪ್ರಾರಂಭ್' ಮಾಡ್ಯೂಲ್ ಅನ್ನು ತಮ್ಮ ಜವಾಬ್ದಾರಿಗಳನ್ನು ಅರ್ಥಮಾಡಿಕೊಳ್ಳಲು ಮತ್ತು ಆತ್ಮವಿಶ್ವಾಸದಿಂದ ಕಾರ್ಯ ನಿರ್ವಹಿಸಲು ಸಹಾಯ ಮಾಡುವ ಪ್ರಬಲ ಸಾಧನಗಳಾಗಿ ಶ್ಲಾಘಿಸಿದರು. "ಇದರ ಗರಿಷ್ಠ ಪ್ರಯೋಜನವನ್ನು ಪಡೆದುಕೊಳ್ಳುವಂತೆ ನಾನು ನಿಮ್ಮನ್ನು ಆಗ್ರಹಿಸುತ್ತೇನೆ" ಎಂದು ಶ್ರೀ ಮೋದಿ ತಿಳಿಸಿದರು.

ಒಂದು ಸ್ಪೂರ್ತಿದಾಯಕ ಕರೆಯೊಂದಿಗೆ ಭಾಷಣ ಮುಕ್ತಾಯಗೊಳಿಸಿದ ಪ್ರಧಾನಮಂತ್ರಿಯವರು, ಇಂದು ನೇಮಕಾತಿ ಪತ್ರಗಳನ್ನು ಸ್ವೀಕರಿಸುತ್ತಿರುವ ಯುವಕರು, ತಮ್ಮೊಳಗೆ ಅದೇ ಉತ್ಸಾಹ ಮತ್ತು ಶಕ್ತಿಯನ್ನು ಹೊಂದಿದ್ದಾರೆ, ಅದರಿಂದಲೇ ಭಾರತದ ಯುವಕರು ಜಗತ್ತಿನಾದ್ಯಂತ ಪ್ರತಿಯೊಂದು ಕ್ಷೇತ್ರದಲ್ಲೂ ತಮ್ಮ ಮುದ್ರೆಯನ್ನು ಒತ್ತುತ್ತಿದ್ದಾರೆ ಮತ್ತು ಈ ಉತ್ಸಾಹವು ಅವರ ಸಾರ್ವಜನಿಕ ಸೇವೆಯಲ್ಲೂ ಇರಬೇಕು ಎಂದು ಸಂಪೂರ್ಣ ವಿಶ್ವಾಸ ವ್ಯಕ್ತಪಡಿಸಿದರು. "ತಮ್ಮ ಕೆಲಸವನ್ನು ರಾಷ್ಟ್ರ ಸೇವೆಯ ಮಾಧ್ಯಮವೆಂದು ಪರಿಗಣಿಸುವ ಯುವಕರ ಶ್ರಮದಿಂದ ವಿಕಸಿತ ಭಾರತ ನಿರ್ಮಾಣವಾಗಲಿದೆ" ಎಂದು ಶ್ರೀ ಮೋದಿ ಪ್ರತಿಪಾದಿಸಿದರು.

ತಮ್ಮ ಮುಕ್ತಾಯ ಭಾಷಣದಲ್ಲಿ, ಹೊಸದಾಗಿ ನೇಮಕಗೊಂಡವರು ಭಾರತದ ಅಭಿವೃದ್ಧಿಯ ಪಯಣಕ್ಕೆ ಹೊಸ ವೇಗವನ್ನು ನೀಡಲಿದ್ದಾರೆ ಮತ್ತು ಅವರ ಕೆಲಸ ಹಾಗೂ ನಿರ್ಧಾರಗಳ ಮೂಲಕ ವಿಕಸಿತ ಭಾರತದ ಸಂಕಲ್ಪ ಈಡೇರಲಿದೆ ಎಂದು ಪ್ರಧಾನಮಂತ್ರಿಯವರು ತಮ್ಮ ಸಂಪೂರ್ಣ ವಿಶ್ವಾಸವನ್ನು ವ್ಯಕ್ತಪಡಿಸಿದರು. ನೇಮಕಾತಿ ಪತ್ರಗಳನ್ನು ಸ್ವೀಕರಿಸುತ್ತಿರುವ ಎಲ್ಲಾ ಯುವಕರಿಗೆ ಮುಂಬರುವ ಭವಿಷ್ಯಕ್ಕಾಗಿ ಅವರು ತಮ್ಮ ಹೃತ್ಪೂರ್ವಕ ಶುಭ ಹಾರೈಕೆಗಳನ್ನು ತಿಳಿಸಿದರು.

ಭಾಷಣದ ಪೂರ್ಣ ಪಠ್ಯವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
New Smart Drug RK-251 Developed as Replacement for Chemotherapy

Media Coverage

New Smart Drug RK-251 Developed as Replacement for Chemotherapy
NM on the go

Nm on the go

Always be the first to hear from the PM. Get the App Now!
...
Text of PM’s address at the Economic Times World Leaders Forum 2026
August 21, 2026
The world sees India as a bright spot for growth and hope: PM
Today, India is implementing next-generation reforms at the policy level and undertaking reforms at governance level: PM
Increasing production was met with punishment earlier but today, our government is providing incentives for boosting production
India has political stability and continuity in its policies: PM
Earlier, the approach of regulations was, 'prohibited unless permitted’; We are changing this approach and taking it towards 'permitted unless prohibited’: PM
The relationship between the government and citizens should be based on trust, not suspicion: PM
Today, we are shaping policies that are pro-people, pro-growth and pro-development: PM

World Leaders Forum का ये प्रतिष्ठित मंच, Business और Industry की दुनिया के सभी जाने माने दिग्गज, पॉलिसी मेकर्स, अन्य महानुभाव, देवियों और सज्जनों।

आप सबके बीच आकर के खुश होना बहुत स्वाभाविक भी है। इस साल समिट का फोकस Shared Future पर है। पिछले कुछ वर्षों में दुनिया ने अनेक उतार-चढ़ाव देखे हैं। और इन अनुभवों ने एक बात बहुत स्पष्ट कर दी है, कोई चाहे या ना चाहे, हर देश का भविष्य, उसका फ्यूचर, एक-दूसरे से जुड़ा हुआ ही है, Isolation में कुछ संभव नहीं है। इसीलिए Shared Futures की ये theme, आज और भी अधिक प्रासंगिक हो गई है। और भारत तो हमेशा से इसी भावना को लेकर चला है। जी-20 की अध्यक्षता में इसलिए ही भारत का मंत्र रहा, One Earth, One Family, One Future. Shared Future की ये भावना और इसके साथ जुड़ा दायित्वबोध, 21वीं सदी के इस विश्व की अनेक समस्याओं का समाधान देता है।

साथियों,

आज दुनिया में growth को लेकर के कई तरह की चिंताएं हैं। दुनिया ने बड़ा भयंकर एक रूप देखा है इन दिनों। Resources का वेपनाइजेशन हो रहा है। अविश्वास का वातावरण विश्व के लिए अनेक नई चुनौतियां लेकर के आ रहा है। लेकिन ऐसे समय में भी, दुनिया भारत को growth और hope के bright spot के रूप में देख रही है। भारत ने पिछले 10-12 साल में अपनी 25 करोड़ आबादी को गरीबी से बाहर निकाला है। इतना ही नहीं, अगर आने वाले दिनों की चर्चा करें, तो IMF का forecast है कि भारत दुनिया की fastest growing major economy बना रहेगा। और भारत निरंतर वो कदम उठा रहा है, जो उसके विकास को गति दे रहे हैं।

Friends,

अभी पिछले हफ्ते ही, 15 अगस्त को मैंने लाल किले से सप्त-धारा की सप्त-शक्तियों की बात की है। मैन्यूफैक्चरिंग, टेक्नोलॉजी और इनोवेशन, फूड प्रोसेसिंग, ग्रीन और ब्लू इकोनॉमी समेत, मैंने ऐसे सात सेक्टर्स की बात की है, जिन पर भारत का आज बहुत ज्यादा फोकस है। और इसलिए भारत आज, Policy level पर, नेक्स्ट जनरेशन reforms कर रहा है, ताकि हमारा future सुरक्षित हो। Governance पर reforms कर रहा है, Ease of Living के लिए reforms कर रहा है। पिछली बार जब मैं इसी मंच के माध्यम से आपसे जुड़ा था, तब भी मैंने कहा था, ये Reforms हमारे लिए Compulsion नहीं है। ये हमारा commitment है, ये हमारा conviction है।

साथियों,

2014 में, जब हमारी सरकार बनी, तो उसके बाद से ही रिफॉर्म्स ने कैसे देश की दिशा और दशा बदली है, मैं इसका एक बहुत दिलचस्प उदाहरण आपको देना चाहता हूं। यहां मौजूद शायद ही किसी को PLP के बारे में पता होगा, कोई है, जिसको PLP के बारे में पता है? अपना हाथ उठाएं। यहां इतने मीडिया के दिग्गज बैठे हैं, PLP आपको पता है? और आप सुनकर के हैरान हो जाएंगे। PLP यानी प्रोडक्शन लिंक्ड पनिशमेंट, इसके बारे में किसी को पता नहीं है। और एक दूसरा टर्म आपने जरूर सुना है PLI, ये ज्यादातर लोगों को पता होगा। PLI- यानी प्रोडक्शन लिंक्ड इंसेंटिव।

साथियों,

ये दोनों टर्म, भारत के दो अलग-अलग Time Period को डिफाइन करते हैं। आजकल Explainer का जमाना है, तो मैं आपको Explain करता हूं।

साथियों,

आज की युवा पीढ़ी को ये सुनकर हैरानी होगी, कि हमारे देश में एक समय ऐसा भी था, कि अगर कोई कंपनी तय लिमिट से ज्यादा प्रॉडक्शन कर दे, तो उसे पनिशमेंट दिया जाता था। ये पहले की लाइसेंस राज वाली सरकारों का, PLP यानी प्रोडक्शन लिंक्ड पनिशमेंट मॉडल था। ऐसे भी उदाहरण रहे हैं कि अगर किसी फैक्ट्री ने ज्यादा डिमांड देखते हुए ज्यादा प्रॉडक्शन कर दिया, तो उसे नोटिस भेज दिया जाता था। मजबूरी में वो कंपनी अपना प्रॉडक्ट मार्केट में बेचने के बजाय, उसे खुद ही नष्ट कर देती थी।

साथियों,

आज जो लोग Make In India और आत्मनिर्भर भारत अभियान का मजाक उड़ाते हैं, उनके पुरखों की सोच यही थी, PLP यानी प्रोडक्शन लिंक्ड पनिशमेंट। ऐसा करने के पीछे एक विशेष तरह की विकृत मानसिकता काम करती थी। ऐसी मानसिकता वाले लोग हमेशा चाहते थे कि जरूरी चीजों की किल्लत बनी रहे। देश के नागरिकों को अभाव में रखना उनकी पॉलिसी थी। वो चाहते थे कि जनता उनके सामने हाथ जोड़े, हाथ फैलाए, आप समझ गए मैं किन लोगों की बात कर रहा हूं। लोगों से हाथ जुड़वाने के बाद उपकार करना, उन सरकारों का तरीका था, इसलिए वो प्रोडक्शन लिंक्ड पनिशमेंट मॉडल पर चलते थे। आप कल्पना कर सकते हैं, ऐसे करके उन लोगों ने Employment Generation के बेसिक principal का गला घोंट दिया था। और हैरानी ये, इन लोगों के दरबारियों ने again I repeat, इन लोगों के दरबारियों ने, कभी इसके खिलाफ कोई आवाज नहीं उठाई।

साथियों,

हर reform की शुरुआत सबसे पहले, आपके सोचने के तरीके, आपके मानसिक, किस रेंज में आप काम कर रहे हैं, इस सोच के reform से ही होती है। जहां पहले production बढ़ाने पर पनिशमेंट मिलता था, वहीं आज हमारी सरकार production बढ़ाने पर incentive दे रही है। और आज PLI स्कीम की सक्सेस दुनिया देख रही है। सिर्फ इस एक योजना की वजह से, मैं सारी योजनाओं की बात नहीं करता हूं, एक की बात करता हूं, करीब ढाई लाख करोड़ रुपए का actual investment हुआ है। 22 लाख करोड़ रुपए से ज्यादा का production और sales हुई है। 15 लाख करोड़ रुपए से ज्यादा का exports हुआ है, और 14 लाख से ज्यादा direct और indirect jobs बनी हैं। और मैं फिर याद दिलाउंगा, ये आंकड़े सिर्फ एक स्कीम के हैं। आप सोचिए, पहले का लाइसेंस राज वाली सरकार का पनिशमेंट मॉडल जहां बेरोजगारी बढ़ाता था, वहीं आज का हमारा incentive मॉडल लाखों नई जॉब्स क्रिएट कर रहा है।

साथियों,

आज भारत में ये तेज विकास, ये तेज रिफॉर्म इसलिए हो रहे हैं, क्योंकि भारत में और जिसका अभी सत्य ने उल्लेख किया, political stability है, हमारी policy में continuity है। पहले देश में रिफॉर्म्स की बात करने वाले घोषणा तो कर देते थे, बाद में भूल जाते थे। लेकिन हमने रिफॉर्म्स को लेकर एक क्लियर रोडमैप बनाया। इस रोडमैप की प्रमुख दिशा रही है- गवर्नेंस लेवेल के रिफॉर्म्स हों! इसके लिए, आज 21वीं सदी के भारत में, हम सिर्फ regulations नहीं बदल रहे हैं, हम regulation की पूरी philosophy बदल रहे हैं। पहले regulations की अप्रोच थी- “Prohibited unless permitted.” यानी जब तक सरकार इजाजत ना दे, तब तक आप वो काम नहीं कर सकते। हम इस approach को बदलकर, “Permitted unless prohibited” की तरफ ले जा रहे हैं। यानी, जो काम कानून ने स्पष्ट रूप से मना नहीं किया है, उसके लिए हर कदम पर permission की कोई जरूरत नहीं होनी चाहिए। और इसके पीछे सोच बहुत सीधी है, सरकार और नागरिक के रिश्ते का आधार, Suspicion नहीं, trust होना चाहिए।

साथियों,

यही सोच आपको Jan Vishwas बिल में भी दिखाई देती है। मैं मानता हूं, हर procedural गलती को criminal offence मान लेना ठीक नहीं है। इसीलिए अनेक offences को decriminalise किया गया है। कई मामलों में जेल की जगह केवल आर्थिक penalty का प्रावधान किया गया है। Government और enterprise के रिश्ते में, हम इसी reform mindset को आगे बढ़ा रहे हैं। बीते वर्षों में 40 हजार से ज्यादा compliances हटाए गए हैं, 40 thousand. डेढ़ हजार से ज्यादा, 15 hundred, डेढ़ हजार से ज्यादा, पुराने और बेकार हो चुके कानून हमने खत्म किए, और जब इन सारे reforms को एक साथ देखते हैं, तो अंदाजा होता है, हमारी industries और businesses के कंधों से कितना बड़ा बोझ कम हुआ है।

साथियों,

गवर्नेंस रिफॉर्म्स की इस प्रक्रिया, उस पर हम निरंतर काम कर रहे है। अभी संसद के मॉनसून सत्र में हमने ‘बैंकर्स बुक एविडेंस बिल’ पारित किया है। और वो भी तब जब विपक्ष ने संसद में लगातार गतिरोध बनाया हुआ था। हमने देश की सेवा करने का काम रूकने नहीं दिया। अब इस कानून ने 19वीं सदी के अंग्रेजी कानून को रिप्लेस किया है। अब बैंकों के डिजिटल रिकॉर्ड्स की स्वीकार्यता को कानूनी मान्यता दी गई है। इससे कानूनी उलझनें कम होंगी, सिस्टम में पारदर्शिता होगी, Ease of Doing Business बढ़ेगा।

साथियों,

गवर्नेंस में रिफॉर्म का एक मतलब ये भी है कि सिस्टम ऐसे बनें, जिसमें एक-एक मानव जीवन और उसके समय के प्रति संवेदनशीलता हो। मैं रेलवे का उदाहरण देता हूं। हमारी रेलवेज में भी इसी अप्रोच के साथ काम हुआ है। आज साढ़े 6 हजार से ज्यादा रेलवे स्टेशनों पर इलेक्ट्रॉनिक इंटरलॉकिंग की व्यवस्था है। 10 हजार से ज्यादा लेवल क्रॉसिंग गेट्स को भी इंटरलॉकिंग से जोड़ा जा चुका है। इससे ह्यूमन एरर से होने वाले हादसों की आशंका बहुत कम हुई है।

साथियों,

जब 2014 में हमारी सरकार आई, तो करीब 9 हजार फाटक ऐसे थे जो Un-Manned थे। इन्हें हटाना कोई रॉकेट साइंस नहीं था। Un-Manned क्रॉसिंग्स की वजह से हजारों लोगों को अपनी जान गंवानी पड़ी, लेकिन पहले की सरकारों को इससे बहुत फर्क नहीं पड़ता था। हमने मिशन मोड में, गत दस वर्ष में, इन Un-Manned क्रॉसिंग्स को समाप्त कर दिया। हमने रोड ओवर ब्रिज और रोड अंडर ब्रिज बनाने की गति भी कई गुना बढ़ा दी। और इसी का नतीजा है कि 2014 के पहले के मुकाबले ट्रेन दुर्घटनाओं की संख्या में Ninety Percent तक की कमी आई है, 90, Ninety Percent. 12 साल पहले जहां एक साल में करीब डेढ़ सौ रेल दुर्घटनाएं होती थीं, वहीं अब इनकी संख्या घटकर 15-20 रह गई है। और हम इसे और कम से कम करने का प्रयास लगातार कर रहे हैं।

साथियों,

Railways में स्वच्छता भी गवर्नेंस रिफॉर्म का एक बड़ा उदाहरण है। एक समय था, जब रेल पटरियों पर गंदगी और human waste एक बड़ी समस्या हुआ करती थी। आज स्थिति पूरी तरह बदल गई है। 2014 से पहले हमारी ट्रेनों में जहां लगभग 12 हजार बायो-टॉयलेट्स लगाए गए थे, वहीं 2014 के बाद ट्रेनों में 3 लाख 60 हजार से ज्यादा बायो-टॉयलेट्स लगाए गए हैं। यानी, 97 प्रतिशत से ज्यादा बायो-टॉयलेट्स पिछले 12 वर्षों में लगे हैं। ये बदलाव सिर्फ सफाई का नहीं, यात्रियों की गरिमा, स्वच्छता और आधुनिक भारत के निर्माण की दिशा में गवर्नेंस का एक नया मॉडल है। ये करोड़ों यात्रियों को बेहतर अनुभव देने का अभियान भी है।

साथियों,

गवर्नेंस की क्वालिटी का एक और पैमाना, और वो पैमाना है - समय। जो प्रोजेक्ट शुरू हो, वो समय पर पूरा हो। और जो सर्विस लोगों को मिले, वो भी समय की कसौटी पर खरी उतरे। दिल्ली-मेरठ नमो भारत रैपिड रेल सिस्टम इसका बहुत अच्छा उदाहरण है। इस कॉरिडोर पर 160 किलोमीटर प्रति घंटे की रफ्तार से ट्रेनें चल रही हैं। ये हमारे देश में पहले कभी सोचा नहीं जा सकता था। अब तक 4 करोड़ से ज्यादा यात्री इसमें ट्रैवल कर चुके हैं। और इसका एक और अहम फैक्टर है, जिसकी चर्चा नहीं होती है। दिल्ली मेरठ नमो भारत रैपिड रेल की पंक्चुअलिटी 99.9 परसेंट है। वरना हम तो हर चीज में कहते हैं, लेट हो तो कहते थे, ये तो इंडियन टाइम है। वक्त बदला है, ये मैं छोटी-छोटी चीजें इसलिए बताता हूं, कि हमें अंदाज आए कि कितने बड़े व्यापक स्तर पर काम हो रहा है। इसी तरह, Delhi Metro की पंक्चुअलिटी। Delhi Metro की पंक्चुअलिटी 99.9 परसेंट है। और ये punctuality, New York, Hong Kong और Paris जैसे शहरों की Metro से करीब-करीब बराबर हो चुकी है। ये सिर्फ समय पर चलती हुई Metro और नमो रेपिड रेल की कहानी नहीं है, ये समय के साथ बदलते हुए भारत की पहचान है। मैं जानता हूं कि अभी भी, और र्मैं कोई इतने से संतोष मानकर बैठने वाला व्यक्ति नहीं हूं, अभी भी इस दिशा में हमें बहुत कुछ करना है, बहुत कुछ बाकी है, लेकिन हम लगातार कर रहे हैं। लेकिन एक शुरूआत तो हुई है और ये शुरुआत सराहनीय है।

साथियों,

हमारे रिफॉर्म्स रोडमैप का एक और बड़ा आयाम है- पॉलिसी लेवल पर होने वाले रिफॉर्म्स! आज हम ऐसी policies बना रहे हैं, जो pro-people हों, Pro-growth हों, pro development हों! पॉलिसीज़ देश और देश के लोगों की जरूरत के हिसाब से होनी चाहिए न कि पॉलिसीज़ बनाकर देश को उनके हिसाब से चलने को मजबूर होना पड़े! मैं आपको एक और Interesting उदाहरण देना चाहता हूं। कुछ साल पहले तक हमारे यहाँ देश का नक्शा बनाना भी गैर-कानूनी था, मैप बनाए तो गैर कानूनी था, आप जेल चले जाएंगे। बिना परमिशन के आप देश में मैपिंग का काम भी नहीं कर सकते थे। आप सोचिए, विदेशी सैटेलाइट टेक्नोलॉजी के जरिए भारत के किसी भी कोने को मैप कर सकती थी, लेकिन भारत में भारतीयों पर भारत का मैप बनाने पर पाबंदी लगी हुई थी।

साथियों,

आज टेक्नोलॉजी के इस दौर में, इस एक पाबंदी से कितने स्टार्टअप्स की हत्या हो सकती थी! कितने ideas implement होने से वंचित रह सकते थे! हमने इस व्यवस्था को भी बदला। हमने Geospatial डेटा का Deregulation किया और आज Geospatial डेटा कितने ही स्टार्टअप्स का आधार बन रहा है।

साथियों,

आज आप लगातार ड्रोन्स की उपयोगिता बढ़ते हुए देख रहे हैं। एग्रीकल्चर में, डिफेंस में, डिलिवरी में, शूटिंग में, कंटेंट क्रिएशन में, ये सब संभव ही नहीं होता, अगर सरकार ने इससे जुड़े नियमों में Reform नहीं किए होते। पहले देश में ड्रोन फ्लाइंग पूरी तरह नियमों में, बंधनों में जकड़ी हुई थी। हमने उसे बंधनों से आजाद किया, और आज भारत की ड्रोन इंडस्ट्री, एक अभूतपूर्व उड़ान के साथ आगे बढ़ रही है।

साथियों,

पहले border areas को लेकर सरकारों की सोच थी कि बॉर्डर पर roads और infrastructure बढ़ेगा, तो उसका फायदा दुश्मन भी उठा सकता है। हमने इस सोच को बदला। हमने कहा, Border infrastructure कमजोरी नहीं, देश की ताकत है। और इसीलिए आज border areas में roads, bridges और tunnels का network तेजी से बढ़ रहा है। सिर्फ 2024 और 2025 में ही, BRO के 250 infrastructure projects देश को समर्पित किए गए हैं। सोच बदली, तो border infrastructure की तस्वीर भी बदल गई।

साथियों,

एक उदाहरण न्यूक्लियर रिफॉर्म्स का भी है। एक ऐसे समय में, जब विकास पूरी तरह से energy dependent है, बंदिशों और प्रतिबंधों के कारण, देश अपने न्यूक्लियर potential का इस्तेमाल नहीं कर पा रहा था। हमने शांति बिल के जरिए इसमें भी बड़ा रिफॉर्म किया है। आज भारत में न्यूक्लियर एनर्जी में प्राइवेट सेक्टर के लिए रास्ता खुल चुका है। इसी तरह, हमने एक बड़ा पॉलिसी रिफॉर्म डिफेंस सेक्टर में भी किया। 200 साल के पहले जो व्यवस्था चली आ रही थी, उसे बदलकर हमने 40 से ज्यादा ordnance फैक्ट्रीज़ को मर्ज करके 7 फैक्ट्रीज़ बना दी। और उसका परिणाम हमें देखने को मिल रहा है। आज भारत अपनी रक्षा जरूरतों के लिए भी आत्मनिर्भर बन रहा है, और 2014 की तुलना में, हमारा डिफेंस एक्सपोर्ट 55 गुना बढ़ा है। और इसलिए, कई बार रिफॉर्म्स हमारे जीवन में इस तरह घुल-मिल जाते हैं कि हमारा उनकी तरफ ध्यान ही नहीं जाता। आप सोचिए, आपका कोई सामान्य दिन आज कैसे बीतता है। आप सुबह उठते हैं, फोन पर घर का सामान ऑर्डर कर देते हैं, और जब तक ऑफिस के लिए रेडी होते हैं, वो सारा सामान आपके घर आकर के पहुंच जाता है। आपकी गली के स्ट्रीट वेंडर से लेकर, आपकी गाड़ी के शो रूम तक, आपकी सारी पेमेंट्स, सिर्फ एक क्यूआर कोड स्कैन करके हो जाती है। अगर आपकी बेटी, किसी दूसरे शहर में पढ़ती है, तो आप फोन से उसे पैसे भेज सकते हैं, और वो पैसा, कुछ सेकंड्स में उसके पास भी पहुंच जाता है। कई बार तो बिटिया क्यूआर ही शेयर कर देती है कि ‘पापा-मां मैंने ये ड्रेस ले ली है, इसकी पेमेंट कर दीजिए, और आप उसकी शॉपिंग अपने घर बैठे-बैठे करवा देते हैं। ये चीजें Remarkable हैं, लेकिन अब ये कोई भारत के लोगों को कम से कम हैरानी नहीं होती, बाहर के लोग आते हैं, उनको आश्चर्य होता है, अच्छा ऐसे होता है। भारत के लोगों का रूटीन हो गया है। ये भारत के सामान्य मानवी के जीवन का हिस्सा बन चुका है। आप सोचिए, 2014 से पहले ऐसी कितनी ही बातें क्या पॉसिबल थीं?

साथियों,

भारत ने बीते 10-12 सालों में Ease of Living से जुड़े जो रिफॉर्म्स किए हैं, उसकी वजह से लोगों का, खासतौर पर हमारे मिडिल क्लास का जो जीवन बदला है, वो दुनिया के कई विकसित देशों में आज भी एक सपना ही है।

साथियों,

आज दुनिया का सबसे सस्ता डेटा भारत में है, हम सस्ते और अच्छे स्मार्टफोन्स बना रहे हैं। अभी सत्या ने उसका वर्णन किया। भारत दुनिया के fastest 5G rollouts करने वाले देशों में से एक है। हमने आधार को बैंकिंग, मोबाइल कनेक्टिविटी और सर्विसेज से जोड़कर, ई-के.वाई.सी और Digital Authentication जैसी सर्विसेज को पॉसिबल किया है। आज आपको अगर बैंक अकाउंट खोलना है, तो उसके लिए बैंक जाने तक की जरूरत नहीं है। सरकार ने बैंक को ही, आपके पास पहुंचा दिया है। आज चाहे कोई बिल जमा करना हो, कोई टिकट करानी हो, किसी सरकारी दफ्तर में जाने की जरूरत नहीं पड़ती, ये सारा काम ऑनलाइन हो जाता है। इनकम टैक्स की फाइलिंग का काम आसान हुआ है। ऐसी व्यवस्था बनी है कि फॉर्म में मैक्सिमम जानकारियां पहले से भरी होती हैं। आप ये इन्फॉर्मेशन वेरिफाई करते हैं, कुछ जोड़ना है तो जोड़ देते हैं, और सबमिट करते हैं, आपका काम पूरा हो जाता है। पहले जो रिफंड आने में महीनों लगते थे, अब वो भी कुछ ही दिनों में आ जाता है।

साथियों,

आज ई-संजीवनी की मदद से, शायद इसकी चर्चा अभी बहुत कम होती है, ई-संजीवनी की मदद से, गांव के दूर दराज के लोग भी, कहीं से भी डॉक्टर्स के साथ सीधी अपनी चर्चा करके अपने उपचार का रास्ता लेते हैं। और इससे जिन लोगों को अस्पताल जाने के लिए कई किलोमीटर का सफर करना पड़ता था, आज डॉक्टर उनके घर पर, उनकी स्क्रीन पर उपलब्ध है। अब तक ये आंकड़ा भी आपको जरूर आश्चर्य करेगा। यानी भारत ने टेक्नोलॉजी को किस प्रकार से अडाप्ट किया है, सामान्य मानवीय के जीवन को कैसे सरल किया है। अब तक ईं-संजीवनी के तहत करीब-करीब 50 करोड़ टेली-कंसल्टेशंस हो चुकी हैं।

साथियों,

आज भारत में Travel Experience बदल रहा है, भारत के नागरिकों की यात्राएं पूरी तरह बदल गई हैं। यहां इस हॉल में ऐसा व्यक्ति खोजना मुश्किल होगा, जिसने एयरपोर्ट पर डिजी यात्रा का इस्तेमाल ना किया हो। ऐसे ही आजकल बहुत सारा काम Seamless तरीके से हो रहा है। हाइवे पर फास्ट टैग चल रहे हैं, ताकि आप बिना रुके टोल देकर आगे बढ़ सकें। Ease of Living का सही अर्थ यही है। समय की बचत हो रही है, जीवन आसान हो रहा है, और करोड़ों लोग अपनी प्रगति पर फोकस कर पा रहे हैं।

साथियों,

Politics में अक्सर वही फैसले headlines बनते हैं, जिनका असर आज दिखाई दे, यानी उसकी उमर 24 घंटे हो। पहले की सरकारों ने इलेक्शन सामने देख कर भी घोषणाएं करने का फॉर्मूला अपनाया। लेकिन ऐसी घोषणाओं से देश नहीं बदला। देश बदलने वाले फैसले वो होते हैं, जिनका प्रभाव जमीन पर दिखे, जो वर्तमान और भविष्य, दोनों को ध्यान में रखकर के लिए गए होने चाहिए।

साथियों,

पीएम कुसुम योजना और पीएम सूर्यघर मुफ्त बिजली योजना इसका बहुत बड़ा यूनीक Example है। कुसुम योजना से किसानों को बिजली की चिंता से मुक्ति मिली है। और सूर्यघर योजना से मिडिल क्लास को बहुत फायदा हुआ है।

साथियों,

मैं ये जानता हूं कि अगर मैंने ये अनाउंस कर दिया होता कि आज से लाखों-लाख परिवारों के लिए बिजली मुफ्त है, तो सारा मीडिया, सारी स्क्रीन्स, सारे न्यूजपेपर्स, बड़ी-बड़ी हेडलाइन बनाकर के खबर दे देते कि मोदी जी ने आज अनाउंस कर दिया है। लेकिन हमने कुछ दूसरे अप्रोच से काम शुरू किया। हमने हर घर की छत पर एक सूरज उगाने की ठान ली, और आज देश के 50 लाख से ज्यादा परिवार, पीएम सूर्यघर मुफ्त बिजली योजना से जुड़े हैं। सरकार ने 22 हजार करोड़ रुपए से ज्यादा इन परिवारों को दिए हैं, ये सोलर सिस्टम लगाने के लिए, ताकि उनकी छत पर सोलर प्लांट लगाकर सोलर पावर पैदा की जा सके। अब ये परिवार, एक्स्ट्रा बिजली को, बिजली ग्रिड में बेचकर, पैसे भी कमा रहे हैं। खुद का बिल तो जीरो हुआ, कमाई भी होने लगी। इस योजना से लोगों के सपनों को भी विस्तार मिल रहा है। बिजली बिल कम हुआ है, तो अब घर में फ्रिज, कूलर, वाशिंग मशीन, टीवी जैसी चीजें लोग खरीदकर रखने लगे हैं। अब ये डर नहीं होता कि बिजली कटौती की वजह से दूध फट जाएगा, अब चिंता नहीं रहती है। अब स्कूल जाने वाले बच्चे रातभर चैन से सो पाते हैं। मैं फिर कहता हूं- इलेक्शन हो या ना हो, लेकिन ये सूर्यघर और उसकी रोशनी बनी रहेगी, इस प्लांट का फायदा, सालों तक देश के परिवारों को होता रहेगा।

साथियों,

आने वाले समय में Ease of Living और Ease of Doing Business का और विस्तार होगा। देश के Youth के लिए, नारीशक्ति के लिए, Farmers के लिए, गरीब और Middle Class के लिए, हमारी सरकार लगातार काम करती रहेगी, हमारी Reform Express और अधिक गति से आगे बढ़ने वाली है। विकसित भारत का लक्ष्य पूरा करने के लिए, हम पूरी प्रतिबद्धता के साथ काम करते रहेंगे। और मैं, मेरे लिए भारत का future अगर सुनिश्चित हो गया ना, तो दुनिया के future में भी स्थिरता लाने का बहुत बड़ा काम इसी धरती से होने वाला है। इस आत्मविश्वास के साथ भारत जितना स्टेबल होगा, भारत का future जितना सुरक्षित होगा, विश्व को सुरक्षत्व का एहसास देने की ताकत यहीं से पैदा होने वाली है। इस सामर्थ्य के साथ, इसी संकल्प के साथ, मैं एक बार फिर, आज के इस कार्यक्रम में मुझे आमंत्रित करने के लिए, Economic Times की पूरी टीम का हृदय से बहुत-बहुत धन्यवाद करता हूं। वन्दे मातरम् !