ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮಿಳುನಾಡಿನ ಕೊಯಂಬತ್ತೂರಿನಲ್ಲಿ ಸಂಭವಿಸಿದ ಅಪಘಾತದ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ಘಟನೆಯಲ್ಲಿ ತಮ್ಮ ಕುಟುಂಬಸ್ಥರು ಮತ್ತು ಪ್ರೀತಿಪಾತ್ರದವರನ್ನು ಕಳೆದುಕೊಂಡವರಿಗಾಗಿ ಹೃದಯಪೂರ್ವಕ ಸಂತಾಪವನ್ನು ಪ್ರಧಾನಿ ಶ್ರೀ ಮೋದಿ ಸೂಚಿಸಿದ್ದಾರೆ. ಅಲ್ಲದೆ, ಅಪಘಾತದಲ್ಲಿ ಗಾಯಗೊಂಡವರ ಶೀಘ್ರ ಚೇತರಿಕೆಗೆ ಪ್ರಾರ್ಥಿಸಿದ್ದಾರೆ.
ಪ್ರಧಾನಮಂತ್ರಿ ಅವರ ಕಚೇರಿಯು X ನಲ್ಲಿ ಹೀಗೆ ಪೋಸ್ಟ್ ಮಾಡಲಾಗಿದೆ;
“ತಮಿಳುನಾಡಿನ ಕೊಯಂಬತ್ತೂರಿನಲ್ಲಿ ಸಂಭವಿಸಿದ ಅಪಘಾತದ ಬಗ್ಗೆ ತಿಳಿದು ದುಃಖವಾಗಿದೆ. ಈ ಅಪಘಾತದಲ್ಲಿ ತಮ್ಮವರನ್ನು ಕಳೆದುಕೊಂಡವರಿಗೆ ನನ್ನ ಹೃದಯಪೂರ್ವಕ ಸಂತಾಪಗಳು. ಗಾಯಗೊಂಡವರ ಶೀಘ್ರ ಚೇತರಿಕೆಗೆ ಪ್ರಾರ್ಥಿಸುತ್ತೇನೆ. PM @narendramodi”
Distressed to hear about the mishap in Coimbatore, Tamil Nadu. I extend my heartfelt condolences to those who have lost their loved ones in the mishap. Prayers for the speedy recovery of those injured: PM @narendramodi
— PMO India (@PMOIndia) April 17, 2026
தமிழ்நாட்டின் கோயம்புத்தூரில் நிகழ்ந்த விபத்தை அறிந்து மிகுந்த வேதனையடைந்தேன். இந்த விபத்தில் தங்கள் அன்புக்குரியவர்களை இழந்தவர்களுக்கு எனது ஆழ்ந்த இரங்கல்களைத் தெரிவித்துக்கொள்கிறேன். காயமடைந்தவர்கள் விரைவில் குணமடைய பிரார்த்திக்கிறேன்: பிரதமர் @narendramodi
— PMO India (@PMOIndia) April 17, 2026




