ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಛತ್ತೀಸ್‌ಗಢದ ಶಕ್ತಿ ಜಿಲ್ಲೆಯ ವಿದ್ಯುತ್ ಸ್ಥಾವರದಲ್ಲಿ ಸಂಭವಿಸಿದ ದುರಂತಕ್ಕೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಪ್ರಧಾನಿ ಸಂತಾಪ ಸೂಚಿಸಿದ್ದಾರೆ ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಹಾಯ ಮಾಡುತ್ತಿದೆ ಎಂದು ಅವರು ಉಲ್ಲೇಖಿಸಿದರು.
ಮೃತರ ಪ್ರತಿಯೊಬ್ಬರ ಹತ್ತಿರದ ಸಂಬಂಧಿಕರಿಗೆ ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿ ಎಂ ಎನ್ ಆರ್ ಎಫ್) ನಿಂದ ತಲಾ 2 ಲಕ್ಷ ರೂ.ಗಳ ಪರಿಹಾರ ನೀಡುವುದಾಗಿ ಪ್ರಧಾನಮಂತ್ರಿ ಘೋಷಿಸಿದರು. ಗಾಯಾಳುಗಳಿಗೆ ತಲಾ 50,000 ರೂಪಾಯಿ ಪರಿಹಾರವನ್ನು ನೀಡಲಾಗುವುದು.
ಪ್ರಧಾನಮಂತ್ರಿಗಳ ಕಚೇರಿ ತನ್ನ ಸಾಮಾಜಿಕ ಜಾಲತಾಣ X ಪೋಸ್ಟ್ ನಲ್ಲಿ ಹೀಗೆ ತಿಳಿಸಿದೆ;
“ಛತ್ತೀಸ್‌ಗಢದ ಶಕ್ತಿ ಜಿಲ್ಲೆಯ ವಿದ್ಯುತ್ ಸ್ಥಾವರದಲ್ಲಿ ಸಂಭವಿಸಿದ ಅಪಘಾತವು ದುರಂತವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನಾನು ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಹಾಯ ಮಾಡುತ್ತಿದೆ.
ಮೃತರ ಎಲ್ಲಾ ಸಂಬಂಧಿಕರಿಗೆ ಪಿ ಎಂ ಎನ್ ಆರ್ ಎಫ್ ನಿಂದ ತಲಾ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ ತಲಾ 50,000 ರೂ. ಪರಿಹಾರ ನೀಡಲಾಗುವುದು: PM @narendramodi’’
The mishap at a power plant in Sakti district, Chhattisgarh, is tragic. I extend my condolences to those who have lost their loved ones. May the injured recover at the earliest. The local administration is assisting those affected.
— PMO India (@PMOIndia) April 14, 2026
An ex-gratia of Rs. 2 lakh from PMNRF would be…


