ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ರೈತರಿಗಾಗಿ 7 ಕಸ್ಟಮ್ ಹೈರಿಂಗ್ ಕೇಂದ್ರಗಳು, 9 ಪಾಲಿ ಗ್ರೀನ್ ಹೌಸ್ ಗಳು ಸೇರಿದಂತೆ ಹಲವಾರು ಪ್ರಮುಖ ಮೂಲಸೌಕರ್ಯ ಯೋಜನೆಗಳ ಉದ್ಘಾಟನೆಯ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತೋಷ ವ್ಯಕ್ತಪಡಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಕಚೇರಿಯ ಸರಣಿ ಟ್ವೀಟ್ ಸಂದೇಶಗಳನ್ನು ಹಂಚಿಕೊಳ್ಳುತ್ತಾ, ಪ್ರಧಾನಮಂತ್ರಿ ಈ ರೀತಿ ಟ್ವೀಟ್ ಮಾಡಿದ್ದಾರೆ;
"ಉದ್ಘಾಟನೆಗೊಂಡಿರುವ ಗಮನಾರ್ಹ ಶ್ರೇಣಿಯ ಅಭಿವೃದ್ಧಿ ಕಾರ್ಯಗಳು ಜಮ್ಮು ಮತ್ತು ಕಾಶ್ಮೀರದ ಜನರ, ವಿಶೇಷವಾಗಿ ಮಹತ್ವಾಕಾಂಕ್ಷೆಯ ಜಿಲ್ಲೆಗಳ ಜೀವನದ ಗುಣಮಟ್ಟವನ್ನು ಹೆಚ್ಚಿಸುವ ನಿಟ್ಟಿನಲ್ಲಿ ನಮ್ಮ ಬದ್ಧತೆಗೆ ಸಾಕ್ಷಿಯಾಗಿವೆ."
The remarkable range of developmental works inaugurated stand as a testament to our commitment towards enhancing the quality of life for the people of Jammu and Kashmir, especially the aspirational districts. https://t.co/4nFo6RWuul
— Narendra Modi (@narendramodi) June 1, 2023