ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನ ಧನ್ ಯೋಜನೆ ಯಶಸ್ವಿಯಾಗಿ 6 ವರ್ಷಗಳನ್ನು ಪೂರೈಸಿದ ಬಗ್ಗೆ ಸಂತೋಷ ವ್ಯಕ್ತಪಡಿಸಿದರು. ಪಿಎಂ-ಜೆಡಿವೈ ಯಶಸ್ಸಿಗೆ ಶ್ರಮಿಸಿದ ಎಲ್ಲರನ್ನೂ ಅವರು ಶ್ಲಾಘಿಸಿದರು.

ಟ್ವೀಟ್ ಸಂದೇಶದಲ್ಲಿ ಪ್ರಧಾನಿ ಅವರು, “ಬ್ಯಾಂಕಿಂಗ್ ನಿಂದ ಹೊರಗುಳಿದವರನ್ನು ಬ್ಯಾಂಕಿಂಗ್ ವ್ಯವಸ್ಥೆಗೆ ತರುವ ಮಹತ್ವಾಕಾಂಕ್ಷೆಯ ಗುರಿಯೊಂದಿಗೆ ಇಂದಿಗೆ ಆರು ವರ್ಷಗಳ ಹಿಂದೆ, ಪ್ರಧಾನ ಮಂತ್ರಿ ಜನಧನ್ ಯೋಜನೆಯನ್ನು ಪ್ರಾರಂಭಿಸಲಾಯಿತು. ಈ ಉಪಕ್ರಮವು ಮಹತ್ವದ ಬದಲಾವಣೆ ತಂದಿದ್ದು, ಅನೇಕ ಬಡತನ ನಿರ್ಮೂಲನಾ ಕ್ರಮಗಳಿಗೆ ಅಡಿಪಾಯವಾಗಿ ಕಾರ್ಯನಿರ್ವಹಿಸುತ್ತಿದೆ, ಕೋಟ್ಯಂತರ ಜನರಿಗೆ ಪ್ರಯೋಜನವಾಗಿದೆ.”

“ಹಲವಾರು ಕುಟುಂಬಗಳ ಭವಿಷ್ಯವನ್ನು ಸುರಕ್ಷಿತಗೊಳಿಸಿದ ಪ್ರಧಾನ ಮಂತ್ರಿ ಜನಧನ್ ಯೋಜನೆಗೆ ಧನ್ಯವಾದಗಳು. ಯೋಜನೆಯ ಬಹುತೇಕ ಫಲಾನುಭವಿಗಳು ಗ್ರಾಮೀಣ ಪ್ರದೇಶದವರು ಮತ್ತು ಮಹಿಳೆಯರು. ಪಿಎಂ-ಜೆಡಿವೈ ಯಶಸ್ಸಿಗಾಗಿ ದಣಿವರಿಯದೆ ಕೆಲಸ ಮಾಡಿದ ಎಲ್ಲರಿಗೂ ನನ್ನ ಮೆಚ್ಚುಗೆಗಳು.” ಎಂದು ತಿಳಿಸಿದ್ದಾರೆ.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
PM Modi Leads International Yoga Day Event In Kolkata, Says It Has Become 'World's Biggest Festival'

Media Coverage

PM Modi Leads International Yoga Day Event In Kolkata, Says It Has Become 'World's Biggest Festival'
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 21 ಜೂನ್ 2026
June 21, 2026

PM Modi Taking India’s Traditions to Every Corner of the World