ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹುಟ್ಟುಹಬ್ಬದ ಆತ್ಮೀಯ ಶುಭಾಶಯಗಳನ್ನು ಕೋರಿದ್ದಾರೆ.

ಧೈರ್ಯ, ಸರಳತೆ, ವಿನಯತೆ ಮತ್ತು ಸಾರ್ವಜನಿಕ ಸೇವೆಗೆ ಅಚಲ ಬದ್ಧತೆಯಿಂದ ಪ್ರಸಂಶಿಸಲ್ಪಟ್ಟ ಅವರ ಜೀವನ ಪಯಣವು ದೇಶಾದ್ಯಂತ ಜನರಿಗೆ ಸ್ಫೂರ್ತಿ ನೀಡುತ್ತಲೇ ಇದೆ ಎಂದು ಪ್ರಧಾನಮಂತ್ರಿ ಹೇಳಿದ್ದಾರೆ.

ಸಾರ್ವಜನಿಕ ಜೀವನದಲ್ಲಿ ಹಲವು ವರ್ಷಗಳ ಕಾಲ, ರಾಷ್ಟ್ರಪತಿಗಳು ರಾಷ್ಟ್ರಕ್ಕೆ ಅತ್ಯುತ್ತಮ ರೀತಿಯಲ್ಲಿ ಸೇವೆ ಸಲ್ಲಿಸಿದ್ದಾರೆ ಮತ್ತು ವಿಶೇಷವಾಗಿ ಹಿಂದುಳಿದವರು ಮತ್ತು ಸಮಾಜದ ಅಂಚಿನಲ್ಲಿರುವವರ ಯೋಗಕ್ಷೇಮದ ಬಗ್ಗೆ ಉತ್ಸುಕರಾಗಿದ್ದಾರೆ ಎಂದು ಶ್ರೀ ನರೇಂದ್ರ ಮೋದಿ ಉಲ್ಲೇಖಿಸಿದರು.

ಭಾರತದ ಅಭಿವೃದ್ಧಿಗೆ ಅವರ ದೃಢ ಬದ್ಧತೆ ಬಹಳ ಪ್ರೇರಣಾದಾಯಕವಾಗಿದೆ ಎಂದು ಪ್ರಧಾನಮಂತ್ರಿ ಅವರು ಹೇಳಿದರು.

ರಾಷ್ಟ್ರ ಸೇವೆಯಲ್ಲಿ ಅವರ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ಶ್ರೀ ನರೇಂದ್ರ ಮೋದಿ ಪ್ರಾರ್ಥಿಸಿದರು ಮತ್ತು ಒಡಿಶಾದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಅವರನ್ನು ಭೇಟಿಯಾಗಲು ಎದುರು ನೋಡುತ್ತಿದ್ದೇನೆ ಎಂದು ಹೇಳಿದರು.

ಪ್ರಧಾನಮಂತ್ರಿ ತಮ್ಮ ಸಾಮಾಜಿಕ ಜಾಲತಾಣ Xಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ;

”ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಧೈರ್ಯ,ಸರಳತೆ, ವಿನಯ ಮತ್ತು ಸಾರ್ವಜನಿಕ ಸೇವೆಗೆ ಅಚಲವಾದ ಬದ್ಧತೆಯಿಂದ ಗುರುತಿಸಲ್ಪಟ್ಟ ಅವರ ಜೀವನ ಪಯಣವು ದೇಶಾದ್ಯಂತ ಜನರಿಗೆ ಸ್ಫೂರ್ತಿ ನೀಡುತ್ತಲೇ ಇದೆ.

ಸಾರ್ವಜನಿಕ ಜೀವನದಲ್ಲಿ ಹಲವು ವರ್ಷಗಳ ಕಾಲ, ಅವರು ರಾಷ್ಟ್ರಕ್ಕೆ ಅತ್ಯುತ್ತಮ ರೀತಿಯಲ್ಲಿ ಸೇವೆ ಸಲ್ಲಿಸಿದ್ದಾರೆ. ವಿಶೇಷವಾಗಿ ಹಿಂದುಳಿದವರು ಮತ್ತು ಸಮಾಜದ ಅಂಚಿನಲ್ಲಿರುವವರ ಯೋಗಕ್ಷೇಮದ ಬಗ್ಗೆ ಉತ್ಸುಕರಾಗಿದ್ದಾರೆ. ಭಾರತದ ಅಭಿವೃದ್ಧಿಗೆ ಅವರ ದೃಢ ಬದ್ಧತೆ ಅತ್ಯಂತ ಪ್ರೇರಣಾದಾಯಕವಾಗಿದೆ.

ರಾಷ್ಟ್ರ ಸೇವೆಯಲ್ಲಿ ಅವರಿಗೆ ದೀರ್ಘ ಮತ್ತು ಆರೋಗ್ಯಕರ ಜೀವನ ಸಿಗಲಿ. ನಂತರ ಇಂದು ಒಡಿಶಾದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಅವರನ್ನು ಭೇಟಿಯಾಗಲು ನಾನು ಎದುರು ನೋಡುತ್ತಿದ್ದೇನೆ.’’

@rashtrapatibhvn”

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Auto PLI disbursals to reach Rs 4,000 crore in FY27

Media Coverage

Auto PLI disbursals to reach Rs 4,000 crore in FY27
NM on the go

Nm on the go

Always be the first to hear from the PM. Get the App Now!
...
Prime Minister shares Sanskrit Subhashitam applauding the effort and dedication of India's Youth
August 04, 2026

The Prime Minister, Shri Narendra Modi, shared a Sanskrit Subhashitam applauding the effort and dedication of India's Youth:

"न हि ज्ञानेन सदृशं पवित्रमिह विद्यते ।

तत्स्वयं योगसंसिद्ध: कालेनात्मनि विन्दति ॥"

Shri Modi said that through continuous effort and dedication, our talents are honed and refined, and our youth is imbibing these very qualities and bringing glory to India.

The Prime Minister posted on X:

निरंतर प्रयास और साधना से हमारी प्रतिभा और निखरती है। आज हमारे युवा इन्हीं गुणों को आत्मसात कर दुनियाभर में देश का नाम रोशन कर रहे हैं।

न हि ज्ञानेन सदृशं पवित्रमिह विद्यते ।

तत्स्वयं योगसंसिद्ध: कालेनात्मनि विन्दति ॥