ಛತ್ತೀಸ್ ಗಢದ 25ನೇ ಸಂಸ್ಥಾಪನಾ ದಿನದಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಛತ್ತೀಸ್ ಗಢದ ಜನತೆಗೆ ಶುಭಾಶಯ ಕೋರಿದ್ದಾರೆ.
ಪ್ರಕೃತಿ ಮತ್ತು ಸಂಸ್ಕೃತಿಗೆ ಸಮರ್ಪಿತವಾದ ಛತ್ತೀಸ್ ಗಢವು ಪ್ರಗತಿಯ ಹೊಸ ಮಾನದಂಡಗಳನ್ನು ಸ್ಥಾಪಿಸುತ್ತಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಒಂದು ಕಾಲದಲ್ಲಿ ನಕ್ಸಲಿಸಂನಿಂದ ಬಾಧಿತವಾದ ಅನೇಕ ಪ್ರದೇಶಗಳು ಈಗ ಅಭಿವೃದ್ಧಿಯಲ್ಲಿ ಸ್ಪರ್ಧಿಸುತ್ತಿವೆ ಎಂದು ಅವರು ಹೇಳಿದರು. ಛತ್ತೀಸ್ ಗಢದ ಪ್ರತಿಭಾವಂತ ಜನರ ಕಠಿಣ ಪರಿಶ್ರಮ ಮತ್ತು ಉದ್ಯಮಶೀಲತೆಯು ವಿಕಸಿತ ಭಾರತ (ಅಭಿವೃದ್ಧಿ ಹೊಂದಿದ ಭಾರತ) ದೃಷ್ಟಿಕೋನವನ್ನು ಸಾಕಾರಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಪ್ರಧಾನಮಂತ್ರಿ ವಿಶ್ವಾಸ ವ್ಯಕ್ತಪಡಿಸಿದರು.
ಈ ಕುರಿತು ಎಕ್ಸ್ ನಲ್ಲಿ ಪ್ರಧಾನಮಂತ್ರಿ ಅವರು ಹೀಗೆ ಹೇಳಿದ್ದಾರೆ;
"ಛತ್ತೀಸ್ ಗಢದ 25ನೇ ಸಂಸ್ಥಾಪನಾ ದಿನಾಚರಣೆಯ ಸಂದರ್ಭದಲ್ಲಿ ಆ ದೇಶದ ನನ್ನ ಎಲ್ಲ ಸಹೋದರಿಯರು ಮತ್ತು ಸಹೋದರರಿಗೆ ಶುಭಾಶಯಗಳು. ಪ್ರಕೃತಿ ಮತ್ತು ಸಂಸ್ಕೃತಿಗೆ ಸಮರ್ಪಿತವಾದ ಈ ರಾಜ್ಯವು ಇಂದು ಪ್ರಗತಿಯ ಹೊಸ ಮಾನದಂಡಗಳನ್ನು ಸೃಷ್ಟಿಸುವಲ್ಲಿ ತೊಡಗಿದೆ. ಒಂದು ಕಾಲದಲ್ಲಿ ನಕ್ಸಲಿಸಂನಿಂದ ಬಾಧಿತವಾಗಿದ್ದ ಅನೇಕ ಪ್ರದೇಶಗಳು ಈಗ ಅಭಿವೃದ್ಧಿಗಾಗಿ ಪೈಪೋಟಿ ನಡೆಸುತ್ತಿವೆ. ಇಲ್ಲಿನ ಕಠಿಣ ಪರಿಶ್ರಮಿ ಮತ್ತು ನುರಿತ ಜನರ ಸಮರ್ಪಣೆ ಮತ್ತು ಉದ್ಯಮದಿಂದ, ಅಭಿವೃದ್ಧಿ ಹೊಂದಿದ ಭಾರತದ ದೃಷ್ಟಿಕೋನವನ್ನು ಸಾಕಾರಗೊಳಿಸುವಲ್ಲಿ ನಮ್ಮ ರಾಜ್ಯವು ಪ್ರಮುಖ ಪಾತ್ರ ವಹಿಸುತ್ತದೆ ಎಂದು ನನಗೆ ವಿಶ್ವಾಸವಿದೆ.”
छत्तीसगढ़ के अपने सभी भाई-बहनों को राज्य के स्थापना दिवस की 25वीं वर्षगांठ की अनेकानेक शुभकामनाएं। प्रकृति और संस्कृति को समर्पित यह प्रदेश आज प्रगति के नित-नए मानदंड गढ़ने में जुटा है। कभी नक्सलवाद से प्रभावित रहे यहां के कई इलाके आज विकास की प्रतिस्पर्धा कर रहे हैं। मुझे भरोसा…
— Narendra Modi (@narendramodi) November 1, 2025


