ದ್ರವ್ಯದ ಸಣ್ಣ ಕಣಗಳಲ್ಲಿ ಅಪಾರ ಶಕ್ತಿಯನ್ನು ಜಾಗೃತಗೊಳಿಸುವ ಉರಿಯುತ್ತಿರುವ ಸಾರವಾಗಿ ಅಗ್ನಿಯನ್ನು ಉಲ್ಲೇಖಿಸುವ ಸಂಸ್ಕೃತ ಸುಭಾಷಿತ ಹಂಚಿಕೊಂಡ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ರಾಷ್ಟ್ರೀಯ ತಂತ್ರಜ್ಞಾನ ದಿನದಂದು ಎಲ್ಲರಿಗೂ ಶುಭಾಶಯ ಕೋರಿದ್ದಾರೆ.

1998ರಲ್ಲಿ ಪೋಖ್ರಾನ್‌ನಲ್ಲಿ ಯಶಸ್ವಿ ಅಣು ಪರೀಕ್ಷೆಗಳಿಗೆ ಕಾರಣವಾದ ವಿಜ್ಞಾನಿಗಳ ಕಠಿಣ ಪರಿಶ್ರಮ ಮತ್ತು ಬದ್ಧತೆಯನ್ನು ಪ್ರಧಾನಮಂತ್ರಿ ಹೆಮ್ಮೆಯಿಂದ ಸ್ಮರಿಸಿಕೊಂಡರು. ಈ ಮೈಲಿಗಲ್ಲು ಭಾರತದ ವೈಜ್ಞಾನಿಕ ಶ್ರೇಷ್ಠತೆ ಮತ್ತು ಅಚಲ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ ಎಂದು ಅವರು ಉಲ್ಲೇಖಿಸಿದರು.

ತಂತ್ರಜ್ಞಾನವು ಸ್ವಾವಲಂಬಿ ಭಾರತವನ್ನು ನಿರ್ಮಿಸುವಲ್ಲಿ ಪ್ರಮುಖ ಆಧಾರಸ್ತಂಭವಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು. ತಂತ್ರಜ್ಞಾನವು ನಾವೀನ್ಯತೆಯನ್ನು ವೇಗಗೊಳಿಸುತ್ತಿದೆ, ಅವಕಾಶಗಳನ್ನು ವಿಸ್ತರಿಸುತ್ತಿದೆ ಮತ್ತು ವಿವಿಧ ಕ್ಷೇತ್ರಗಳಲ್ಲಿ ರಾಷ್ಟ್ರದ ಬೆಳವಣಿಗೆಗೆ ಕೊಡುಗೆ ನೀಡುತ್ತಿದೆ ಎಂದು ಶ್ರೀ ನರೇಂದ್ರ ಮೋದಿ ಪ್ರಮುಖವಾಗಿ ಪ್ರಸ್ತಾಪಿಸಿದರು. ಪ್ರತಿಭೆಗಳನ್ನು ಸಬಲೀಕರಣಗೊಳಿಸುವುದು, ಸಂಶೋಧನೆಯನ್ನು ಪ್ರೋತ್ಸಾಹಿಸುವುದು ಮತ್ತು ರಾಷ್ಟ್ರೀಯ ಪ್ರಗತಿ ಮತ್ತು ಜನರ ಆಕಾಂಕ್ಷೆಗಳಿಗೆ ಸೇವೆ ಸಲ್ಲಿಸುವ ಪರಿಹಾರಗಳನ್ನು ಕಂಡುಕೊಳ್ಳುವುದಕ್ಕೆ ಸತತ ಹೆಚ್ಚಿನ ಗಮನ ಹರಿಸಲಾಗುತ್ತಿದೆ ಎಂದು ಅವರು ಹೇಳಿದರು.

ಈ ಐತಿಹಾಸಿಕ ಮೈಲಿಗಲ್ಲನ್ನು ಸ್ಮರಿಸಿಕೊಂಡ ಪ್ರಧಾನಮಂತ್ರಿಮಂತ್ರಿ, 1998ರಲ್ಲಿ ಆ ದಿನದಂದು ಪೋಖ್ರಾನ್‌ನಲ್ಲಿ ನಡೆಸಲಾದ ಪರಮಾಣು ಪರೀಕ್ಷೆಗಳು ಭಾರತದ ಅದ್ಭುತ ಸಾಮರ್ಥ್ಯಗಳನ್ನು ಜಗತ್ತಿಗೆ ಪರಿಚಯಿಸಿದವು ಎಂದು ಹೇಳಿದರು. ವಿಜ್ಞಾನಿಗಳು ದೇಶದ ಹೆಮ್ಮೆ ಮತ್ತು ಸ್ವಾಭಿಮಾನದ ನಿಜವಾದ ವಾಸ್ತುಶಿಲ್ಪಿಗಳು ಎಂದು ಅವರು ಶ್ಲಾಘಿಸಿದರು.

ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡ ಪ್ರಧಾನಮಂತ್ರಿ, ಅಗ್ನಿಯು ಸ್ವರ್ಗದ ಸರ್ವೋಚ್ಚ ಶಕ್ತಿ ಮತ್ತು ಭೂಮಿಯ ಮೇಲಿನ ಎಲ್ಲಾ ಶಕ್ತಿಯ ಪ್ರಾಥಮಿಕ ಮೂಲವಾಗಿದೆ ಎಂದು ಉಲ್ಲೇಖಿಸಿದರು.  ಉರಿಯುತ್ತಿರುವ ಸಾರವು ವಸ್ತುವಿನ ಸಣ್ಣ ಕಣಗಳಲ್ಲಿ ಅಡಗಿರುವ ಅಗಾಧ ಶಕ್ತಿಯನ್ನು ಜಾಗೃತಗೊಳಿಸುತ್ತದೆ ಮತ್ತು ಸೃಷ್ಟಿಯಾದ್ಯಂತ ಶಕ್ತಿ ಮತ್ತು ಚಲನೆಯನ್ನು ಹರಡುತ್ತದೆ ಎಂದರು.

ಪ್ರಧಾನಮಂತ್ರಿ ತಮ್ಮ ಸಾಮಾಜಿಕ ಜಾಲತಾಣ X ನ ಸರಣಿ ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ;

“ರಾಷ್ಟ್ರೀಯ ತಂತ್ರಜ್ಞಾನ ದಿನದ ಶುಭಾಶಯಗಳು. 1998ರಲ್ಲಿ ಪೋಖ್ರಾನ್‌ನಲ್ಲಿ ಯಶಸ್ವಿ ಅಣು ಪರೀಕ್ಷೆಗಳಿಗೆ ಕಾರಣವಾದ ನಮ್ಮ ವಿಜ್ಞಾನಿಗಳ ಕಠಿಣ ಪರಿಶ್ರಮ ಮತ್ತು ಬದ್ಧತೆಯನ್ನು ನಾವು ಹೆಮ್ಮೆಯಿಂದ ಸ್ಮರಿಸಿಕೊಳ್ಳುತ್ತೇವೆ. ಆ ಮೈಲಿಗಲ್ಲು ಕ್ಷಣವು ಭಾರತದ ವೈಜ್ಞಾನಿಕ ಶ್ರೇಷ್ಠತೆ ಮತ್ತು ಅಚಲ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.

ತಂತ್ರಜ್ಞಾನವು ಸ್ವಾವಲಂಬಿ ಭಾರತವನ್ನು ನಿರ್ಮಿಸುವಲ್ಲಿ ಪ್ರಮುಖ ಆಧಾರಸ್ತಂಭವಾಗಿದೆ. ಇದು ನಾವೀನ್ಯತೆಯನ್ನು ವೇಗಗೊಳಿಸುತ್ತಿದೆ, ಅವಕಾಶಗಳನ್ನು ವಿಸ್ತರಿಸುತ್ತಿದೆ ಮತ್ತು ವಿವಿಧ ಕ್ಷೇತ್ರಗಳಲ್ಲಿ ರಾಷ್ಟ್ರದ ಬೆಳವಣಿಗೆಗೆ ಕೊಡುಗೆ ನೀಡುತ್ತಿದೆ. ಪ್ರತಿಭೆಗಳನ್ನು ಸಬಲೀಕರಣಗೊಳಿಸುವುದು, ಸಂಶೋಧನೆ ಪ್ರೋತ್ಸಾಹಿಸುವುದು ಮತ್ತು ರಾಷ್ಟ್ರೀಯ ಪ್ರಗತಿ ಮತ್ತು ನಮ್ಮ ಜನರ ಆಕಾಂಕ್ಷೆಗಳನ್ನು ಪೂರೈಸುವ ಪರಿಹಾರಗಳನ್ನು ಕಂಡುಹಿಡಿಯುವುದಕ್ಕೆ ನಾವು ನಿರಂತರ ಗಮನ ಹರಿಸುತ್ತಿದ್ದೇವೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
In a first, NCERT adds Emergency to Class 9 textbooks; chapter details rights suspension and press censorship

Media Coverage

In a first, NCERT adds Emergency to Class 9 textbooks; chapter details rights suspension and press censorship
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 25 ಜೂನ್ 2026
June 25, 2026

Viksit Bharat in Action: PM Modi's Reforms Powering Inclusive Growth, Tech Innovation & Global Competitiveness