ಜಾರ್ಖಂಡ್ ರಾಜ್ಯದ ಸ್ಥಾಪನಾ ದಿನದಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಾರ್ಖಂಡ್‌ನ ಎಲ್ಲಾ ಜನರಿಗೆ ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದ್ದಾರೆ. ಜಾರ್ಖಂಡ್ ಶ್ರೀಮಂತ ಬುಡಕಟ್ಟು ಸಂಸ್ಕೃತಿಯಿಂದ ಸಮೃದ್ಧವಾಗಿರುವ ಅದ್ಭುತ ಭೂಮಿಯಾಗಿದೆ ಎಂದು ಅವರು ಹೇಳಿದರು. ಭಗವಾನ್ ಬಿರ್ಸಾ ಮುಂಡಾ ಅವರ ಪರಂಪರೆಯನ್ನು ನೆನಪಿಸಿಕೊಳ್ಳುತ್ತಾ, ಈ ಪವಿತ್ರ ಭೂಮಿಯ ಇತಿಹಾಸವು ಧೈರ್ಯ, ಹೋರಾಟ ಮತ್ತು ಘನತೆಯ ಸ್ಪೂರ್ತಿದಾಯಕ ಕಥೆಗಳಿಂದ ತುಂಬಿದೆ ಎಂದು ಪ್ರಧಾನಮಂತ್ರಿ ತಿಳಿಸಿದ್ದಾರೆ.
ಈ ವಿಶೇಷ ಸಂದರ್ಭದಲ್ಲಿ ರಾಜ್ಯದ ಎಲ್ಲಾ ಕುಟುಂಬಗಳ ನಿರಂತರ ಪ್ರಗತಿ ಮತ್ತು ಸಮೃದ್ಧಿಗಾಗಿ ಪ್ರಧಾನಮಂತ್ರಿ ಶುಭ ಹಾರೈಸಿದ್ದಾರೆ.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜಯಂತಿಯಂದು ಅವರಿಗೆ ಗೌರವಯುತ ನಮನ ಸಲ್ಲಿಸಿದ್ದಾರೆ. ಜನಜಾತೀಯ ಗೌರವ್ ದಿವಸ್‌ನ ಪವಿತ್ರ ಸಂದರ್ಭದಲ್ಲಿ, ಮಾತೃಭೂಮಿಯ ಗೌರವ ಮತ್ತು ಘನತೆಯನ್ನು ರಕ್ಷಿಸಲು ಅವರು ನೀಡಿದ ಅಪ್ರತಿಮ ಕೊಡುಗೆಯನ್ನು ಇಡೀ ರಾಷ್ಟ್ರವು ಕೃತಜ್ಞತೆಯಿಂದ ಸ್ಮರಿಸುತ್ತದೆ ಎಂದು ಅವರು ಹೇಳಿದ್ದಾರೆ. ವಿದೇಶಿ ಆಡಳಿತದ ಅನ್ಯಾಯಗಳ ವಿರುದ್ಧ ಭಗವಾನ್ ಬಿರ್ಸಾ ಮುಂಡಾ ಅವರ ಹೋರಾಟ ಮತ್ತು ತ್ಯಾಗ ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ ಎಂದು ಪ್ರಧಾನಮಂತ್ರಿ ಹೇಳಿದ್ದಾರೆ.
ಈ ಕುರಿತು ಪ್ರಧಾನಮಂತ್ರಿ ಅವರು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ;
"ಬುಡಕಟ್ಟು ಸಂಸ್ಕೃತಿಯಿಂದ ಸಮೃದ್ಧವಾಗಿರುವ ಜಾರ್ಖಂಡ್‌ನ ಎಲ್ಲಾ ನಿವಾಸಿಗಳಿಗೆ ರಾಜ್ಯದ ಸಂಸ್ಥಾಪನಾ ದಿನದಂದು ಅಭಿನಂದನೆಗಳು. ಭಗವಾನ್ ಬಿರ್ಸಾ ಮುಂಡಾ ಅವರ ಈ ಪವಿತ್ರ ಭೂಮಿಯ ಇತಿಹಾಸವು ಧೈರ್ಯ, ಹೋರಾಟ ಮತ್ತು ಸ್ವಾಭಿಮಾನದ ಕಥೆಗಳಿಂದ ತುಂಬಿದೆ. ಈ ವಿಶೇಷ ಸಂದರ್ಭದಲ್ಲಿ, ನಾನು ಮತ್ತು ನನ್ನ ಎಲ್ಲಾ ಕುಟುಂಬ ಸದಸ್ಯರು ರಾಜ್ಯದ ಪ್ರಗತಿ ಮತ್ತು ಸಮೃದ್ಧಿಯನ್ನು ಹಾರೈಸುತ್ತೇನೆ"
जनजातीय संस्कृति से समृद्ध गौरवशाली प्रदेश झारखंड के सभी निवासियों को राज्य के स्थापना दिवस की बहुत-बहुत शुभकामनाएं। भगवान बिरसा मुंडा जी की इस धरती का इतिहास साहस, संघर्ष और स्वाभिमान की गाथाओं से भरा हुआ है। आज इस विशेष अवसर पर मैं राज्य के अपने सभी परिवारजनों के साथ ही यहां की…
— Narendra Modi (@narendramodi) November 15, 2025
“देश के महान स्वतंत्रता सेनानी भगवान बिरसा मुंडा जी को उनकी 150वीं जयंती पर शत-शत नमन। जनजातीय गौरव दिवस के इस पावन अवसर पर पूरा देश मातृभूमि के स्वाभिमान की रक्षा के लिए उनके अतुलनीय योगदान को श्रद्धापूर्वक स्मरण कर रहा है। विदेशी हुकूमत के अन्याय के खिलाफ उनका संघर्ष और बलिदान हर पीढ़ी को प्रेरित करता रहेगा।”
देश के महान स्वतंत्रता सेनानी भगवान बिरसा मुंडा जी को उनकी 150वीं जयंती पर शत-शत नमन। जनजातीय गौरव दिवस के इस पावन अवसर पर पूरा देश मातृभूमि के स्वाभिमान की रक्षा के लिए उनके अतुलनीय योगदान को श्रद्धापूर्वक स्मरण कर रहा है। विदेशी हुकूमत के अन्याय के खिलाफ उनका संघर्ष और बलिदान…
— Narendra Modi (@narendramodi) November 15, 2025


