ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ದೇಶದ ಜನತೆಗೆ ಶುಭಾಶಯ ತಿಳಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿಗಳು,
"ಗಣರಾಜ್ಯೋತ್ಸವದ ಈ ಶುಭ ಸಂದರ್ಭದಲ್ಲಿ ಶುಭಾಶಯ ತಿಳಿಸುತ್ತೇನೆ. ಈ ಬಾರಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಗಣರಾಜ್ಯೋತ್ಸವ ಆಚರಿಸುತ್ತಿರುವುದು ವಿಶೇಷ. ದೇಶದ ಮಹಾನ್ ಸ್ವಾತಂತ್ರ್ಯ ಯೋಧರ ಕನಸುಗಳನ್ನು ಸಾಕಾರಗೊಳಿಸಲು ನಾವೆಲ್ಲಾ ಒಂದಾಗಿ ಮುಂದಾಗೋಣ ಎಂಬುದು ನನ್ನ ಆಶಯ. ಭಾರತೀಯರಿಗೆಲ್ಲಾ ಗಣರಾಜ್ಯೋತ್ಸವದ ಶುಭಾಶಯಗಳು," ಎಂದು ಹಾರೈಸಿದ್ದಾರೆ.
गणतंत्र दिवस की ढेर सारी शुभकामनाएं। इस बार का यह अवसर इसलिए भी विशेष है, क्योंकि इसे हम आजादी के अमृत महोत्सव के दौरान मना रहे हैं। देश के महान स्वतंत्रता सेनानियों के सपनों को साकार करने के लिए हम एकजुट होकर आगे बढ़ें, यही कामना है।
— Narendra Modi (@narendramodi) January 26, 2023
Happy Republic Day to all fellow Indians!


