ಶೇರ್
 
Comments

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವನ್ಯಜೀವಿ ಪ್ರೇಮಿಗಳಿಗೆ, ವಿಶೇಷವಾಗಿ ಹುಲಿ ಸಂರಕ್ಷಣೆಯ ಬಗ್ಗೆ ಆಸಕ್ತಿ ಹೊಂದಿರುವವರಿಗೆ ಅಂತಾರಾಷ್ಟ್ರೀಯ ಹುಲಿ ದಿನದ ಅಂಗವಾಗಿ ಶುಭ ಕೋರಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಪ್ರಧಾನಿ,

“ಅಂತಾರಾಷ್ಟ್ರೀಯ ಹುಲಿ ದಿನದ ಅಂಗವಾಗಿ"#InternationalTigerDay, ವನ್ಯಜೀವಿ ಪ್ರೇಮಿಗಳಿಗೆ, ವಿಶೇಷವಾಗಿ ಹುಲಿ ಸಂರಕ್ಷಣೆಯ ಬಗ್ಗೆ ಆಸಕ್ತಿ ಹೊಂದಿರುವವರಿಗೆ ಶುಭಾಶಯಗಳು. ಜಾಗತಿಕವಾಗಿ ಶೇ.70ಕ್ಕೂ ಹೆಚ್ಚು ಹುಲಿಗಳಿಗೆ ಭಾರತವೇ ನೆಲೆಯಾಗಿದ್ದು,  ನಮ್ಮ ಹುಲಿಗಳಿಗೆ ಸುರಕ್ಷಿತ ಆವಾಸಸ್ಥಾನಗಳನ್ನು ಖಾತರಿಪಡಿಸುವ ಮತ್ತು ಹುಲಿ ಸ್ನೇಹಿ ಪರಿಸರ ವ್ಯವಸ್ಥೆಗಳನ್ನು ಪೋಷಿಸುವ ನಮ್ಮ ಬದ್ಧತೆಯನ್ನು ನಾವು ಪುನರುಚ್ಚರಿಸುತ್ತೇವೆ.ʼʼ

“ಭಾರತವು 51 ಹುಲಿ ಅಭಯಾರಣ್ಯಗಳಿಗೆ ನೆಲೆಯಾಗಿದ್ದು, ಇವು 18 ರಾಜ್ಯಗಳಲ್ಲಿ ವ್ಯಾಪಿಸಿವೆ. ಕಳೆದ 2018ರ ಹುಲಿ ಗಣತಿಯಲ್ಲಿ ಹುಲಿಗಳ ಸಂಖ್ಯೆಯಲ್ಲಿ ಏರಿಕೆ ಕಂಡು ಬಂದಿದೆ. ʻಹುಲಿ ಸಂರಕ್ಷಣೆ ಕುರಿತಾದ ಸೇಂಟ್ ಪೀಟರ್ಸ್‌ಬರ್ಗ್ ಘೋಷಣೆʼಯ ನಿಗದಿತ ಸಮಯಕ್ಕಿಂತಲೂ 4 ವರ್ಷ ಮುಂಚಿತವಾಗಿ ಹುಲಿಗಳ ಜನಸಂಖ್ಯೆಯನ್ನು ದ್ವಿಗುಣಗೊಳಿಸುವ ಗುರಿಯನ್ನು ಭಾರತ ಸಾಧಿಸಿದೆ.”

“ಹುಲಿ ಸಂರಕ್ಷಣೆ ಕುರಿತಾದ ಭಾರತದ ಕಾರ್ಯತಂತ್ರದಲ್ಲಿ ಸ್ಥಳೀಯ ಸಮುದಾಯಗಳ ಪಾಲ್ಗೊಳ್ಳುವಿಕೆಗೆ ಅತಿ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲಾಗಿದೆ. ಭೂಮಿಯ ಮೇಲಿರುವ ಪ್ರಾಣಿ ಮತ್ತು ಸಸ್ಯ ಸಂಪತ್ತಿನ ಜತೆ ಸಹಬಾಳ್ವೆ ನಡೆಸುವ ನಮ್ಮ ಶತಮಾನಗಳ ಹಳೆಯ ತತ್ವದಂದ ನಾವು ಪ್ರೇರಿತರಾಗಿದ್ದೇವೆ." ಎಂದು ಹೇಳಿದ್ದಾರೆ.

 

 

ನಿಮ್ಮ ಸಲಹೆ ಸೂಚನೆಗಳನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೊಂದಿಗೆ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಹಂಚಿಕೊಳ್ಳಿ.
20 ವರ್ಷಗಳ ಸೇವಾ ಮತ್ತು ಸಮರ್ಪಣದ 20 ಚಿತ್ರಗಳು
Explore More
ಚಾಲ್ತಾ ಹೈ' ವರ್ತನೆಯನ್ನು ಬಿಟ್ಟು  ಮತ್ತು ' ಬದಲ್ ಸಕ್ತ ಹೈ'  ಬಗ್ಗೆ ಯೋಚಿಸುವ ಸಮಯವಿದು : ಪ್ರಧಾನಿ ಮೋದಿ

ಜನಪ್ರಿಯ ಭಾಷಣಗಳು

ಚಾಲ್ತಾ ಹೈ' ವರ್ತನೆಯನ್ನು ಬಿಟ್ಟು ಮತ್ತು ' ಬದಲ್ ಸಕ್ತ ಹೈ' ಬಗ್ಗೆ ಯೋಚಿಸುವ ಸಮಯವಿದು : ಪ್ರಧಾನಿ ಮೋದಿ
EPFO adds 15L net subscribers in August, rise of 12.6% over July’s

Media Coverage

EPFO adds 15L net subscribers in August, rise of 12.6% over July’s
...

Nm on the go

Always be the first to hear from the PM. Get the App Now!
...
PM expresses gratitude to doctors and nurses on crossing 100 crore vaccinations
October 21, 2021
ಶೇರ್
 
Comments

The Prime Minister, Shri Narendra Modi has expressed gratitude to doctors, nurses and all those who worked on crossing 100 crore vaccinations.

In a tweet, the Prime Minister said;

"India scripts history.

We are witnessing the triumph of Indian science, enterprise and collective spirit of 130 crore Indians.

Congrats India on crossing 100 crore vaccinations. Gratitude to our doctors, nurses and all those who worked to achieve this feat. #VaccineCentury"