ಕರ್ತವ್ಯ ಪಥದಲ್ಲಿ ನಡೆದ ಗಣರಾಜ್ಯೋತ್ಸವದ ಭವ್ಯ ಮೆರವಣಿಗೆಯ ನೋಟ ಹಂಚಿಕೊಂಡಿರುವ ಪ್ರಧಾನಮಂತ್ರಿ
ಗಣರಾಜ್ಯೋತ್ಸವದ ಸಂದರ್ಭದಲ್ಲಿ ಯೂರೋಪಿಯನ್ ಕೌನ್ಸಿಲ್ ಅಧ್ಯಕ್ಷರಾದ ಆಂಟೋನಿಯೊ ಕೋಸ್ಟಾ ಮತ್ತು ಯೂರೋಪಿಯನ್ ಕಮಿಷನ್ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯೆನ್ ಅವರಿಗೆ ಆತಿಥ್ಯ ನೀಡುತ್ತಿರುವುದು ಭಾರತದ ಸೌಭಾಗ್ಯ : ಪ್ರಧಾನಮಂತ್ರಿ
ಗಣರಾಜ್ಯೋತ್ಸವದ ಮೆರವಣಿಗೆಯಲ್ಲಿ ಪ್ರದರ್ಶಿಸಲಾದ ಅದ್ಭುತ ಭದ್ರತಾ ವ್ಯವಸ್ಥೆಗೆ ಪ್ರಧಾನಮಂತ್ರಿ ಶ್ಲಾಘನೆ
ಗಣರಾಜ್ಯೋತ್ಸವದ ಪರೇಡ್ ಭಾರತದ ಭದ್ರತಾ ಪಡೆಗಳ ಸಾಮರ್ಥ್ಯ ಬಲವರ್ಧನೆ ಪ್ರತಿಬಿಂಬಿಸಿದೆ - ಪ್ರಧಾನಮಂತ್ರಿ
ಗಣರಾಜ್ಯೋತ್ಸವ ಪರೇಡ್ ನಲ್ಲಿ ಭಾರತದ ಸಾಂಸ್ಕೃತಿಕ ವೈವಿಧ್ಯತೆಯ ರೋಮಾಂಚಕ ಪ್ರದರ್ಶನದ ಬಗ್ಗೆ ಪ್ರಧಾನಮಂತ್ರಿ ಪ್ರಸ್ತಾಪ

ಭಾರತ ಅತ್ಯಂತ ಉತ್ಸಾಹ ಮತ್ತು ಹೆಮ್ಮೆಯಿಂದ ಗಣರಾಜ್ಯೋತ್ಸವವನ್ನು ಆಚರಿಸಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.

ಕರ್ತವ್ಯ ಪಥದಲ್ಲಿ ನಡೆದ ಭವ್ಯ ಮೆರವಣಿಯು ಭಾರತದ ಪ್ರಜಾಪ್ರಭುತ್ವದ ಶಕ್ತಿ, ಪರಂಪರೆಯ ಶ್ರೀಮಂತಿಕೆ ಮತ್ತು ದೇಶವನ್ನು ಒಗ್ಗೂಡಿಸಿರುವ ಏಕತೆಯನ್ನು ಪ್ರದರ್ಶಿಸಿತು ಎಂದು ಅವರು ಒತ್ತಿ ಹೇಳಿದ್ದಾರೆ. ಕಾರ್ಯಕ್ರಮದ ನೋಟಗಳನ್ನು ಹಂಚಿಕೊಳ್ಳುತ್ತಾ ಅವರು, ಗಣರಾಜ್ಯೋತ್ಸವ ಸಮಾರಂಭದಲ್ಲಿ ಕರ್ತವ್ಯ ಪಥವು ರಾಷ್ಟ್ರೀಯ ಹೆಮ್ಮೆಯ ಶಕ್ತಿಶಾಲಿ ಪ್ರದರ್ಶನಕ್ಕೆ ಸಾಕ್ಷಿಯಾಯಿತು ಎಂದಿದ್ದಾರೆ.


ಗಣರಾಜ್ಯೋತ್ಸವ ಸಮಾರಂಭದ ಸಂದರ್ಭದಲ್ಲಿ ಯೂರೋಪಿಯನ್ ಕೌನ್ಸಿಲ್ ಅಧ್ಯಕ್ಷರಾದ ಶ್ರೀ ಆಂಟೋನಿಯೊ ಕೋಸ್ಟಾ ಮತ್ತು ಯೂರೋಪಿಯನ್ ಆಯೋಗದ ಅಧ್ಯಕ್ಷರಾದ ಶ್ರೀಮತಿ ಉರ್ಸುಲಾ ವಾನ್ ಡೆರ್ ಲೇಯೆನ್ ಅವರಿಗೆ ಆತಿಥ್ಯ ನೀಡುವ ಸೌಭಾಗ್ಯ ಭಾರತಕ್ಕೆ ಸಿಕ್ಕಿದೆ ಎಂದು ಪ್ರಧಾನಮಂತ್ರಿ ಹೇಳಿದ್ದಾರೆ. ಯೂರೋಪಿಯನ್ ನಾಯಕರ ಉಪಸ್ಥಿತಿಯು ಭಾರತ-ಯೂರೋಪಿಯನ್ ಒಕ್ಕೂಟದ ಪಾಲುದಾರಿಕೆಯ ಬಲವರ್ಧನೆ ಮತ್ತು ಹಂಚಿತ ಮೌಲ್ಯಗಳಿಗೆ ಭಾರತದ ಬದ್ಧತೆಯನ್ನು ಒತ್ತಿಹೇಳುತ್ತದೆ ಎಂದು ಪ್ರಧಾನಮಂತ್ರಿ ಹೇಳಿದ್ದಾರೆ. ವೈವಿಧ್ಯಮಯ ವಲಯಗಳಲ್ಲಿ ಭಾರತ ಮತ್ತು ಯೂರೋಪ್ ನಡುವಿನ ತೊಡಗಿಸಿಕೊಳ್ಳುವಿಕೆ ಮತ್ತು ಸಹಕಾರಕ್ಕೆ ಈ ಭೇಟಿ ವೇಗ ನೀಡಲಿದೆ ಎಂದು ಅವರು ಹೇಳಿದ್ದಾರೆ.

ಗಣರಾಜ್ಯೋತ್ಸವದ ಮೆರವಣಿಗೆಯು ಭಾರತದ ಅಸಾಧಾರಣ ಭದ್ರತಾ ವ್ಯವಸ್ಥೆಯನ್ನು ಪ್ರದರ್ಶಿಸುತ್ತಾ ರಾಷ್ಟ್ರದ ಸನ್ನದ್ಧತೆ, ತಾಂತ್ರಿಕ ಸಾಮರ್ಥ್ಯ ಮತ್ತು ತನ್ನ ನಾಗರಿಕರನ್ನು ರಕ್ಷಿಸುವ ಅಚಲ ಬದ್ಧತೆಯನ್ನು ಪ್ರತಿಬಿಂಬಿಸಿದೆ ಎಂದು ಪ್ರಧಾನಮಂತ್ರಿ ಹೇಳಿದ್ದಾರೆ.

ಗಣರಾಜ್ಯೋತ್ಸವದ ಮೆರವಣಿಗೆಯು ಭಾರತದ ಭದ್ರತಾ ಪಡೆಗಳ ಬಲವರ್ಧನೆಯ ಸಾಮರ್ಥ್ಯದ ಒಂದು ಇಣುಕು ನೋಟವನ್ನು ನೀಡಿತು ಎಂದು ಶ್ರೀ ಮೋದಿ ಹೇಳಿದ್ದಾರೆ. ಭಾರತದ ಭದ್ರತಾ ಪಡೆಗಳು ನಿಜವಾಗಿಯೂ ರಾಷ್ಟ್ರದ ಗರಿಮೆ ಎಂದು ಬಣ್ಣಿಸುತ್ತಾ, ಪರೇಡ್ ನಲ್ಲಿ ಇದರ ಪರಿಣಾಮಕಾರಿ ಅಭಿವ್ಯಕ್ತಿ ಕಂಡುಬಂದಿತು ಎಂದು ಅವರು ಕೆಲವು ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಗಣರಾಜ್ಯೋತ್ಸವದ ಸಂದರ್ಭದಲ್ಲಿ ಕರ್ತವ್ಯ ಪಥದಲ್ಲಿ ಭಾರತದ ಸಾಂಸ್ಕೃತಿಕ ವೈಭವ ತೆರೆದುಕೊಂಡಿದ್ದು, ದೇಶದ ಶ್ರೀಮಂತ ಮತ್ತು ವೈವಿಧ್ಯಮಯ ಪರಂಪರೆಯನ್ನು ಪ್ರತಿಬಿಂಬಿಸುವ ರೋಮಾಂಚಕ ಪ್ರದರ್ಶನ ಮತ್ತು ಸ್ತಬ್ಧಚಿತ್ರಗಳ ಮೂಲಕ ಭಾರತದ ಸಾಂಸ್ಕೃತಿಕ ವೈವಿಧ್ಯತೆಯನ್ನು ಪರೇಡ್ ಆಚರಿಸಿತು ಎಂದು ಶ್ರೀ ಮೋದಿ ಹೇಳಿದ್ದಾರೆ.

ಪ್ರಧಾನಮಂತ್ರಿ ಅವರು ಸರಣಿ ಎಕ್ಸ್ ಪೋಸ್ಟ್ ಗಳಲ್ಲಿ ಹೀಗೆ ಹೇಳಿದ್ದಾರೆ:

 “ಭಾರತವು ಗಣರಾಜ್ಯೋತ್ಸವವನ್ನು ಅತ್ಯಂತ ಉತ್ಸಾಹ ಮತ್ತು ಹೆಮ್ಮೆಯಿಂದ ಆಚರಿಸಿದೆ.

ಕರ್ತವ್ಯ ಪಥದಲ್ಲಿ ನಡೆದ ಭವ್ಯ ಮೆರವಣಿಗೆಯು ನಮ್ಮ ಪ್ರಜಾಪ್ರಭುತ್ವದ ಶಕ್ತಿ, ನಮ್ಮ ಪರಂಪರೆಯ ಶ್ರೀಮಂತಿಕೆ ಮತ್ತು ನಮ್ಮ ರಾಷ್ಟ್ರವನ್ನು ಒಗ್ಗೂಡಿಸಿರುವ ಏಕತೆಯನ್ನು ಪ್ರದರ್ಶಿಸಿದೆ.

ಇಲ್ಲಿವೆ ಕೆಲವು ನೋಟಗಳು…. “

 

"ನಮ್ಮ ಗಣರಾಜ್ಯೋತ್ಸವ ಕಾರ್ಯಕ್ರಮದ ಸಂದರ್ಭದಲ್ಲಿ ಯೂರೋಪಿಯನ್ ಕೌನ್ಸಿಲ್ ಅಧ್ಯಕ್ಷರಾದ ಆಂಟೋನಿಯೊ ಕೋಸ್ಟಾ ಮತ್ತು ಯೂರೋಪಿಯನ್ ಕಮಿಷನ್ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯೆನ್ ಅವರಿಗೆ ಆತಿಥ್ಯ ನೀಡುವುದು ಭಾರತಕ್ಕೆ ಹೆಮ್ಮೆಯ ಸಂಗತಿಯಾಗಿದೆ.

ಯೂರೋಪಿಯನ್ ನಾಯಕರ ಉಪಸ್ಥಿತಿಯು ಭಾರತ-ಯೂರೋಪಿಯನ್ ಒಕ್ಕೂಟದ ಪಾಲುದಾರಿಕೆಯ ಹೆಚ್ಚುತ್ತಿರುವ ಬಲವರ್ಧನೆ ಮತ್ತು ಹಂಚಿತ ಮೌಲ್ಯಗಳಿಗೆ ನಮ್ಮ ಬದ್ಧತೆಯನ್ನು ಒತ್ತಿಹೇಳುತ್ತದೆ.

ವೈವಿಧ್ಯಮಯ ವಲಯಗಳಲ್ಲಿ ಭಾರತ ಮತ್ತು ಯುರೋಪ್ ನಡುವೆ ಆಳವಾದ ತೊಡಗಿಸಿಕೊಳ್ಳುವಿಕೆ ಮತ್ತು ಸಹಕಾರಕ್ಕೆ ಈ ಭೇಟಿಯು ವೇಗ ನೀಡಲಿದೆ.

@antoniocostapm

@vonderleyen

@EUCouncil

@EU_Commission”

“The Republic Day parade showcased India’s formidable security apparatus, reflecting the nation’s preparedness, technological capability and unwavering commitment to safeguarding its citizens.”

“The Republic Day parade offered a glimpse into the strengthening capabilities of India’s security forces. Our forces are truly our pride!

Here are some more glimpses.”

“A vivid display of India’s cultural mosaic unfolded at Kartavya Path earlier today. The Republic Day parade celebrated India’s cultural diversity, with vibrant performances and tableaux.”

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Proud Moment For Every Indian: PM Modi On Sarnath Being Inscribed On UNESCO World Heritage List

Media Coverage

Proud Moment For Every Indian: PM Modi On Sarnath Being Inscribed On UNESCO World Heritage List
NM on the go

Nm on the go

Always be the first to hear from the PM. Get the App Now!
...
Prime Minister congratulates weightlifter Mirabai Chanu on winning Gold at Commonwealth Games 2026
July 26, 2026

The Prime Minister, Shri Narendra Modi, has congratulated weightlifter Mirabai Chanu on winning the Gold medal in the 48 kg category at the Commonwealth Games 2026.

The Prime Minister said that Mirabai Chanu once again showcased her skills with a stunning performance. Shri Modi noted that with back-to-back Commonwealth Games Gold medals and an overall fourth Commonwealth Games medal to her name, she remains an inspiration for every Indian.

The Prime Minister extended his best wishes to her for her future endeavours.

In a post on X, Shri Modi said;

“Another glorious chapter in Indian Weightlifting!

The talented Mirabai Chanu once again showcased her skills at the Commonwealth Games with a stunning performance in the 48 kg category and winning Gold. With back-to-back Commonwealth Games Golds and an overall fourth CWG medal to her name, she remains an inspiration for every Indian. Congratulations to her! Best wishes for the endeavours ahead. #CWG2026

@mirabai_chanu”