ವೈವಿಧ್ಯಮಯ ಕ್ಷೇತ್ರಗಳಲ್ಲಿ ʻಯುವ ಶಕ್ತಿʼಯ ಗಮನಾರ್ಹ ಕೊಡುಗೆಗಳು ಮತ್ತು ಜಾಗತಿಕ ವೇದಿಕೆಯಲ್ಲಿ ಹೆಚ್ಚುತ್ತಿರುವ ಯುವ ಶಕ್ತಿಯ ಪ್ರಭಾವವನ್ನು ಪ್ರಧಾನಮಂತ್ರಿಗಳು ಒತ್ತಿ ಹೇಳಿದರು

ಯುವ ನೇತೃತ್ವದ ಅಭಿವೃದ್ಧಿಗೆ ಸರ್ಕಾರ ಬಲವಾಗಿ ಶ್ರಮಿಸುತ್ತಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೇಳಿದ್ದಾರೆ. ಭಾರತದ ಯುವಕರು ಆತ್ಮವಿಶ್ವಾಸದಿಂದ ತಮ್ಮ ಆಕಾಂಕ್ಷೆಗಳನ್ನು ಬೆನ್ನತ್ತಿರುವುದು ಕಳೆದ 12 ವರ್ಷಗಳಲ್ಲಿ ಭಾರತದಲ್ಲಿ ಕಂಡುಬಂದ ನಿರ್ಣಾಯಕ ಲಕ್ಷಣಗಳಲ್ಲಿ ಒಂದಾಗಿದೆ ಎಂದು ಅವರು ಹೇಳಿದ್ದಾರೆ.

ʻಸ್ಟಾರ್ಟ್ಅಪ್ ಇಂಡಿಯಾʼ, ʻಡಿಜಿಟಲ್ ಇಂಡಿಯಾʼ, ʻಸ್ಕಿಲ್ ಇಂಡಿಯಾʼ ಮತ್ತು ʻಅಟಲ್ ಇನ್ನೋವೇಶನ್ ಮಿಷನ್ʼನಂತಹ ಉಪಕ್ರಮಗಳ ಮೂಲಕ ನಾವೀನ್ಯತೆ, ಉದ್ಯಮಶೀಲತೆ ಮತ್ತು ಉದ್ಯಮವನ್ನು ಉತ್ತೇಜಿಸುವ ಪರಿಸರ ವ್ಯವಸ್ಥೆ ಹೊರಹೊಮ್ಮಿದೆ ಎಂದು ಶ್ರೀ ಮೋದಿ ಒತ್ತಿ ಹೇಳಿದರು. ಇಂದು, ಭಾರತವು ವಿಶ್ವದ ಪ್ರಮುಖ ನವೋದ್ಯಮ ತಾಣಗಳಲ್ಲಿ ಒಂದಾಗಿದೆ ಮತ್ತು ನಮ್ಮ ಯುವ ಶಕ್ತಿತಯು ಈ ಅನೇಕ ಯಶೋಗಾಥೆಗಳನ್ನು ಬರೆಯುತ್ತಿದೆ. ಅದೂ ಸಣ್ಣ ಪಟ್ಟಣಗಳು ಮತ್ತು ಹಳ್ಳಿಗಳಿಂದ ಈ ಯಶಸ್ಸಿನ ಕಥೆಗಳು ಹೊರಹೊಮ್ಮುತ್ತಿವೆ ಎಂದು ಪ್ರಧಾನಮಂತ್ರಿ ಗಮನಸೆಳೆದರು.

ವಿಜ್ಞಾನ ಮತ್ತು ತಂತ್ರಜ್ಞಾನದಿಂದ ಹಿಡಿದು ಉತ್ಪಾದನೆ, ಬಾಹ್ಯಾಕಾಶ, ಸೆಮಿಕಂಡಕ್ಟರ್‌ಗಳು ಮತ್ತು ಡ್ರೋನ್‌ಗಳವರೆಗೆ ವಿವಿಧ ಕ್ಷೇತ್ರಗಳಲ್ಲಿ ಭಾರತದ ಯುವಕರು ತಮ್ಮ ಛಾಪು ಮೂಡಿಸುತ್ತಿದ್ದಾರೆ ಎಂದು ಪ್ರಧಾನಮಂತ್ರಿ ಹೇಳಿದರು. ರಾಷ್ಟ್ರ ಮತ್ತು ಪ್ರಪಂಚದ ಭವಿಷ್ಯವನ್ನು ರೂಪಿಸುವ ಕ್ಷೇತ್ರಗಳಿಗೆ ಯುವ ಭಾರತೀಯರು ಕೊಡುಗೆ ನೀಡುತ್ತಿರುವುದನ್ನು ನೋಡುವುದು ಹೃದಯಸ್ಪರ್ಶಿ ಅನುಭವ ಎಂದು ಅವರು ಹೇಳಿದರು. ನಮ್ಮ ಯುವಕರು ಕ್ರೀಡಾ ಕ್ಷೇತ್ರದಲ್ಲಿ ರಾಷ್ಟ್ರಕ್ಕೆ ಅಪಾರ ಕೀರ್ತಿಯನ್ನು ತಂದುಕೊಟ್ಟಿದ್ದಾರೆ, ಹಲವಾರು ಅಂತರರಾಷ್ಟ್ರೀಯ ಸ್ಪರ್ಧೆಗಳಲ್ಲಿ ನಿರಂತರವಾಗಿ ರಾಷ್ಟ್ರೀಯ ಹೆಮ್ಮೆಯನ್ನು ಹೆಚ್ಚಿಸಿದ್ದಾರೆ ಎಂದು ಶ್ರೀ ಮೋದಿ ಒತ್ತಿ ಹೇಳಿದರು. ಬಲವಾದ ಕ್ರೀಡಾ ಪರಿಸರ ವ್ಯವಸ್ಥೆ, ಉತ್ತಮ ಮೂಲಸೌಕರ್ಯ ಮತ್ತು ಕ್ರೀಡಾಪಟುಗಳಿಗೆ ಹೆಚ್ಚಿನ ಬೆಂಬಲವು ಯುವ ಪ್ರತಿಭೆಗಳಿಗೆ ಹೊಸ ಅವಕಾಶಗಳನ್ನು ಸೃಷ್ಟಿಸುತ್ತಿದೆ ಜೊತೆಗೆ ಕ್ರೀಡೆಯನ್ನು ಮುಂದುವರಿಸಲು ಅವರನ್ನು ಪ್ರೋತ್ಸಾಹಿಸುತ್ತಿದೆ ಎಂದು ಅವರು ಹೇಳಿದರು.

ʻಎಕ್ಸ್ʼ ಖಾತೆಯ ಸರಣಿ ಪೋಸ್‌ಗಳಲ್ಲಿ, ಪ್ರಧಾನಮಂತ್ರಿಯವರು ಹೀಗೆ ಹೇಳಿದ್ದಾರೆ:

"ಎನ್‌ಡಿಎ ಸರ್ಕಾರವು ಯುವಕರ ನೇತೃತ್ವದ ಅಭಿವೃದ್ಧಿಗಾಗಿ ಬಲವಾಗಿ ಕೆಲಸ ಮಾಡುತ್ತಿದೆ. ಭಾರತದ ಯುವಕರು ಆತ್ಮವಿಶ್ವಾಸದಿಂದ ತಮ್ಮ ಆಕಾಂಕ್ಷೆಗಳನ್ನು ಬೆನ್ನತ್ತಿರುವುದು ಕಳೆದ 12 ವರ್ಷಗಳ ಕಂಡುಬಂದಿರುವ ನಿರ್ಣಾಯಕ ಲಕ್ಷಣವಾಗಿದೆ.

ಸ್ಟಾರ್ಟ್ ಅಪ್ ಇಂಡಿಯಾ, ಡಿಜಿಟಲ್ ಇಂಡಿಯಾ, ಸ್ಕಿಲ್ ಇಂಡಿಯಾ ಮತ್ತು ಅಟಲ್ ಇನ್ನೋವೇಶನ್ ಮಿಷನ್ ನಂಥ ಉಪಕ್ರಮಗಳ ಮೂಲಕ ನಾವಿನ್ಯತೆ, ಉದ್ಯಮಶೀಲತೆ ಮತ್ತು ಉದ್ಯಮಶೀಲತೆಯನ್ನು ಉತ್ತೇಜಿಸುವ ಪರಿಸರ ವ್ಯವಸ್ಥೆ ಹೊರಹೊಮ್ಮಿದೆ.

ಇಂದು, ಭಾರತವು ವಿಶ್ವದ ಪ್ರಮುಖ ನವೋದ್ಯಮ ತಾಣಗಳಲ್ಲಿ ಒಂದಾಗಿದೆ ಮತ್ತು ಈ ಅನೇಕ ಯಶೋಗಾಥೆಗಳನ್ನು ನಮ್ಮ ಯುವ ಶಕ್ತಿಯಿಂದ ಮತ್ತು ಅದೂ ಸಣ್ಣ ಪಟ್ಟಣಗಳು ಮತ್ತು ಹಳ್ಳಿಗಳಿಂದ ಬರೆಯಲಾಗುತ್ತಿದೆ.

12YearsOfYuvaShakti”

 

 

"ಭಾರತದ ಯುವಕರು ವಿಜ್ಞಾನ ಮತ್ತು ತಂತ್ರಜ್ಞಾನದಿಂದ ಉತ್ಪಾದನೆ, ಬಾಹ್ಯಾಕಾಶ, ಸೆಮಿಕಂಡಕ್ಟರ್‌ಗಳು ಮತ್ತು ಡ್ರೋನ್‌ಗಳವರೆಗೆ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಛಾಪು ಮೂಡಿಸುತ್ತಿದ್ದಾರೆ. ನಮ್ಮ ರಾಷ್ಟ್ರ ಮತ್ತು ಪ್ರಪಂಚದ ಭವಿಷ್ಯವನ್ನು ರೂಪಿಸುವ ಕ್ಷೇತ್ರಗಳಿಗೆ ಯುವ ಭಾರತೀಯರು ಕೊಡುಗೆ ನೀಡುತ್ತಿರುವುದನ್ನು ನೋಡುವುದು ಹೃದಯಸ್ಪರ್ಶಿಯಾಗಿದೆ.

ನಮ್ಮ ಯುವಕರು ಕ್ರೀಡಾ ಕ್ಷೇತ್ರದಲ್ಲಿ ರಾಷ್ಟ್ರಕ್ಕೆ ಅಪಾರ ಕೀರ್ತಿ ತಂದಿದ್ದಾರೆ. ಹಲವಾರು ಅಂತರರಾಷ್ಟ್ರೀಯ ಸ್ಪರ್ಧೆಗಳಲ್ಲಿ, ಯುವ ಭಾರತೀಯ ಕ್ರೀಡಾಪಟುಗಳು ನಿರಂತರವಾಗಿ ರಾಷ್ಟ್ರೀಯ ಹೆಮ್ಮೆಯನ್ನು ಹೆಚ್ಚಿಸಿದ್ದಾರೆ. ಅದೇ ಸಮಯದಲ್ಲಿ, ಬಲವಾದ ಕ್ರೀಡಾ ಪರಿಸರ ವ್ಯವಸ್ಥೆ, ಉತ್ತಮ ಮೂಲಸೌಕರ್ಯ ಮತ್ತು ಕ್ರೀಡಾಪಟುಗಳಿಗೆ ಹೆಚ್ಚಿನ ಬೆಂಬಲವು ಯುವ ಪ್ರತಿಭೆಗಳಿಗೆ ಹೊಸ ಅವಕಾಶಗಳನ್ನು ಸೃಷ್ಟಿಸುತ್ತಿದೆ ಮತ್ತು ಕ್ರೀಡೆಯನ್ನು ಮುಂದುವರಿಸಲು ಅವರನ್ನು ಪ್ರೋತ್ಸಾಹಿಸುತ್ತಿದೆ.

12YearsOfYuvaShakti"

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
How PLI schemes, design in India and manufacturing excellence are transforming the architectural lighting industry

Media Coverage

How PLI schemes, design in India and manufacturing excellence are transforming the architectural lighting industry
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 28 ಜುಲೈ 2026
July 28, 2026

From Factories to Space & High-Speed Rail: How PM Modi’s Vision is Rewiring India’s Future