ಉಕ್ರೇನ್‌ನಲ್ಲಿನ ಸಂಘರ್ಷದ ಶಾಂತಿಯುತ ಪರಿಹಾರದ ಇತ್ತೀಚಿನ ಬೆಳವಣಿಗೆಗಳ ಕುರಿತು ನಾಯಕರಿಂದ ಅಭಿಪ್ರಾಯ ವಿನಿಮಯ
ವಿವಿಧ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರದ ಸಕಾರಾತ್ಮಕ ಬೆಳವಣಿಗೆಗೆ ಉಭಯ ನಾಯಕರ ಮೆಚ್ಚುಗೆ
ಎ.ಐ. ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಅಧ್ಯಕ್ಷ ಮ್ಯಾಕ್ರನ್ ಅವರನ್ನು ಎದುರುಗೊಳ್ಳಲು ಪ್ರಧಾನಮಂತ್ರಿ ಉತ್ಸುಕ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಫ್ರಾನ್ಸ್ ಗಣರಾಜ್ಯದ ಅಧ್ಯಕ್ಷರಾದ ಮಾನ್ಯ ಶ್ರೀ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು.

ಆರ್ಥಿಕತೆ, ರಕ್ಷಣೆ, ವಿಜ್ಞಾನ, ತಂತ್ರಜ್ಞಾನ, ಬಾಹ್ಯಾಕಾಶ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರದ ಬೆಳವಣಿಗೆಗಳನ್ನು ಇಬ್ಬರೂ ನಾಯಕರು ಪರಿಶೀಲಿಸಿ, ಸಕಾರಾತ್ಮಕ ಅಭಿಪ್ರಾಯ ನೀಡಿದ್ದಾರೆ. ಹಾರಿಜಾನ್ 2047 ಮಾರ್ಗಸೂಚಿ, ಇಂಡೋ-ಪೆಸಿಫಿಕ್ ಮಾರ್ಗಸೂಚಿ ಮತ್ತು ರಕ್ಷಣಾ ಕೈಗಾರಿಕಾ ಮಾರ್ಗಸೂಚಿಗಳಿಗೆ ಅನುಗುಣವಾಗಿ ಭಾರತ-ಫ್ರಾನ್ಸ್ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಬಗ್ಗೆ ಎರಡೂ ದೇಶಗಳ ನಾಯಕರು ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದರು.

ಉಕ್ರೇನ್‌ನಲ್ಲಿನ ಸಂಘರ್ಷವನ್ನು ಕೊನೆಗಾಣಿಸಲು ನಡೆದಿರುವ ಇತ್ತೀಚಿನ ಪ್ರಯತ್ನಗಳ ಬಗ್ಗೆಯೂ ಉಭಯರು ಅಭಿಪ್ರಾಯ ವಿನಿಮಯ ಮಾಡಿಕೊಂಡರು.

ಸಂಘರ್ಷದ ಶಾಂತಿಯುತ ಪರಿಹಾರಕ್ಕೆ ಹಾಗೂ ಶೀಘ್ರವಾಗಿ ಶಾಂತಿ ಮತ್ತು ಸ್ಥಿರತೆಯ ಪುನಃಸ್ಥಾಪನೆಗೆ ಭಾರತದ ಸ್ಥಿರ ಬೆಂಬಲವನ್ನು ಪ್ರಧಾನಮಂತ್ರಿ ಮೋದಿ ಅವರು ಪುನರುಚ್ಚರಿಸಿದರು.

ಫೆಬ್ರವರಿ 2026ರಲ್ಲಿ ಭಾರತದಲ್ಲಿ ಆಯೋಜನೆಯಾಗಿರುವ ಎ.ಐ. ಇಂಪ್ಯಾಕ್ಟ್ ಶೃಂಗಸಭೆಗಿನ ಆಹ್ವಾನವನ್ನು ಸ್ವೀಕರಿಸಿದ್ದಕ್ಕಾಗಿ ಪ್ರಧಾನಮಂತ್ರಿ ಮೋದಿ ಅವರು ಅಧ್ಯಕ್ಷ ಮ್ಯಾಕ್ರನ್‌ ಅವರಿಗೆ ಧನ್ಯವಾದ ಅರ್ಪಿಸಿದರು ಮತ್ತು ಭಾರತದಲ್ಲಿ ಅಧ್ಯಕ್ಷ ಮ್ಯಾಕ್ರನ್‌ ಅವರನ್ನು ಸ್ವಾಗತಿಸಲು ಎದುರು ನೋಡುತ್ತಿರುವುದಾಗಿ ಹೇಳಿದರು.

ಜಾಗತಿಕ ಶಾಂತಿ ಮತ್ತು ಸ್ಥಿರತೆಯ ಉತ್ತೇಜನಕ್ಕೆ ಪರಸ್ಪರ ಸಂಪರ್ಕದಲ್ಲಿರಲು ಮತ್ತು ಒಟ್ಟಾಗಿ ಕಾರ್ಯ ನಿರ್ವಹಿಸಲು ಇಬ್ಬರೂ ನಾಯಕರು ಸಮ್ಮತಿಸಿದರು.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India’s power sector set for strong FY27 growth on rising demand, capacity additions: Report

Media Coverage

India’s power sector set for strong FY27 growth on rising demand, capacity additions: Report
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 20 ಜುಲೈ 2026
July 20, 2026

Yuva to Global Stage: How PM Modi’s Policies Are Turning India’s Youth, Farms & Factories into Growth Engines