ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೊಸದಿಲ್ಲಿಯಲ್ಲಿ ನಡೆದ ಜಿ20 ಶೃಂಗಸಭೆಯ ನೇಪಥ್ಯದಲ್ಲಿ ಇಟಲಿ ಗಣರಾಜ್ಯದ ಪ್ರಧಾನಮಂತ್ರಿ ಘನತೆವೆತ್ತ ಶ್ರೀಮತಿ ಜಾರ್ಜಿಯಾ ಮೆಲೋನಿ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದರು. 2023ರ ಮಾರ್ಚ್ ತಿಂಗಳಲ್ಲಿ ಅಧಿಕೃತ ಭೇಟಿಯ ಬಳಿಕ ಪ್ರಧಾನಿ ಮೆಲೋನಿ ಅವರ ಎರಡನೇ ಭಾರತ ಭೇಟಿ ಇದಾಗಿದೆ, ಈ ಸಮಯದಲ್ಲಿ ದ್ವಿಪಕ್ಷೀಯ ಸಂಬಂಧಗಳನ್ನು ವ್ಯೂಹಾತ್ಮಕ  ಭಾಗೀದಾರಿಕೆಯ  ಮಟ್ಟಕ್ಕೆ ಎತ್ತರಿಸಲಾಗಿತ್ತು.

ಭಾರತದ ಜಿ 20 ಅಧ್ಯಕ್ಷತೆಗೆ ಇಟಲಿಯ ಬೆಂಬಲ ಮತ್ತು ಜಾಗತಿಕ ಜೈವಿಕ ಇಂಧನ ಮಿತ್ರಕೂಟ ಹಾಗು ಭಾರತ - ಮಧ್ಯಪ್ರಾಚ್ಯ - ಯುರೋಪ್ ಆರ್ಥಿಕ ಕಾರಿಡಾರ್ ಗೆ ಇಟಲಿಯ ಬೆಂಬಲವನ್ನು ಪ್ರಧಾನ ಮಂತ್ರಿ ಅವರು  ಶ್ಲಾಘಿಸಿದರು.

ಉಭಯ ದೇಶಗಳ ನಡುವೆ ರಾಜತಾಂತ್ರಿಕ ಸಂಬಂಧಗಳ ಸ್ಥಾಪನೆಯು 75 ವರ್ಷಗಳನ್ನು ಪೂರ್ಣಗೊಳಿಸಿದ ಬಗ್ಗೆ ಉಭಯ ನಾಯಕರು ತೃಪ್ತಿ ವ್ಯಕ್ತಪಡಿಸಿದರು. ಭಾರತ-ಇಟಲಿ ವ್ಯೂಹಾತ್ಮಕ ಪಾಲುದಾರಿಕೆಯ ವಿವಿಧ ಕ್ಷೇತ್ರಗಳಲ್ಲಿನ ಪ್ರಗತಿಯ ಬಗ್ಗೆಯೂ ಅವರು ಮಾಹಿತಿ ಪಡೆದರು ಮತ್ತು ರಕ್ಷಣೆ ಹಾಗು ಹೊಸ ಮತ್ತು ಉದಯೋನ್ಮುಖ ತಂತ್ರಜ್ಞಾನಗಳಂತಹ ಕ್ಷೇತ್ರಗಳಲ್ಲಿ ಸಹಕಾರವನ್ನು ಹೆಚ್ಚಿಸಲು ಒಪ್ಪಿಕೊಂಡರು. ಇನ್ನಷ್ಟು ಪ್ರಮಾಣದ  ಜಾಗತಿಕ ಒಳಿತಿಗಾಗಿ ಜಿ 7 ಮತ್ತು ಜಿ 20 ಸಮನ್ವಯದಿಂದ ಕೆಲಸ ಮಾಡುವ ಅಗತ್ಯವನ್ನು ಅವರು ಮನಗಂಡರು.

ಜಿ 20 ಶೃಂಗಸಭೆಯ ಯಶಸ್ಸಿಗಾಗಿ ಇಟಲಿ ಪ್ರಧಾನಿ ಮೆಲೋನಿ ಅವರು ಪ್ರಧಾನಮಂತ್ರಿಯವರಿಗೆ ಅಭಿನಂದನೆ ಸಲ್ಲಿಸಿದರು.

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India's crude supply secure, LPG production increased: Hardeep Puri

Media Coverage

India's crude supply secure, LPG production increased: Hardeep Puri
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 13 ಮಾರ್ಚ್ 2026
March 13, 2026

Resilient India Under PM Modi: Diplomatic Mastery, Youth Power, and Unstoppable Progress