ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಡೆನ್ಮಾರ್ಕ್ ಪ್ರಧಾನಿ ಶ್ರೀಮತಿ ಮೆಟ್ಟೆ ಫ್ರೆಡೆರಿಕ್ಸೆನ್ ಇಂದು ದೂರವಾಣಿ ಸಂಭಾಷಣೆ ನಡೆಸಿದರು. ಇಬ್ಬರೂ ನಾಯಕರು ದ್ವಿಪಕ್ಷೀಯ ಸಂಬಂಧಗಳ ವಿವಿಧ ಅಂಶಗಳು ಹಾಗೂ ಜಾಗತಿಕ ಬೆಳವಣಿಗೆಗಳ ಬಗ್ಗೆ ಚರ್ಚಿಸಿದರು.
2020ರಲ್ಲಿ ಹಸಿರು ಕಾರ್ಯತಂತ್ರದ ಪಾಲುದಾರಿಕೆ ಪ್ರಾರಂಭವಾದಾಗಿನಿಂದ ಎರಡೂ ದೇಶಗಳ ನಡುವಿನ ಉನ್ನತ ಮಟ್ಟದ ಮಾತುಕತೆಯನ್ನು ನೆನೆದ ನಾಯಕರು, ವಿವಿಧ ಕ್ಷೇತ್ರಗಳಲ್ಲಿ ಹಸಿರು ಕಾರ್ಯತಂತ್ರದ ಪಾಲುದಾರಿಕೆಯ ವಿಸ್ತರಣೆಯ ಬಗ್ಗೆ ಮಾತನಾಡಿದರು. ಇದು ಭಾರತದಲ್ಲಿ ಡ್ಯಾನಿಶ್ ಹೂಡಿಕೆಗಳಿಗೆ ಅನುಕೂಲಕರ ಪರಿಸ್ಥಿತಿಗಳನ್ನು ಸೃಷ್ಟಿಸಿದೆ ಮತ್ತು ಹಸಿರು ಪರಿವರ್ತನೆಗೆ ಕೊಡುಗೆ ನೀಡಿದೆ ಎಂದು ಅವರು ಹೇಳಿದರು. ಇಬ್ಬರೂ ನಾಯಕರು ಪರಸ್ಪರ ಆಸಕ್ತಿಯ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ಸಹ ಚರ್ಚಿಸಿದರು.
ಈ ವರ್ಷದ ಕೊನೆಯಲ್ಲಿ ನಾರ್ವೆಯಲ್ಲಿ ನಡೆಯಲಿರುವ 3ನೇ ಭಾರತ-ನಾರ್ಡಿಕ್ ಶೃಂಗಸಭೆ ಮತ್ತು ಆ ಸಂದರ್ಭದಲ್ಲಿ ಡೆನ್ಮಾರ್ಕ್ ಪ್ರಧಾನಮಂತ್ರಿ ಶ್ರೀಮತಿ ಮೆಟ್ಟೆ ಫ್ರೆಡೆರಿಕ್ಸೆನ್ ಅವರೊಂದಿಗಿನ ಭೇಟಿಯನ್ನು ಎದುರು ನೋಡುತ್ತಿರುವುದಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದರು.
Glad to speak with PM Mette Frederiksen today. Reaffirmed our strong support for the India-Denmark Green Strategic Partnership and enhancing cooperation across sectors for the benefit of our people. We also discussed regional and global developments of mutual interest.@Statsmin
— Narendra Modi (@narendramodi) April 15, 2025


