ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಮೆರಿಕಾದ ಉಪಾಧ್ಯಕ್ಷರಾದ ಗೌರವಾನ್ವಿತ ಜೆ.ಡಿ. ವ್ಯಾನ್ಸ್ ಅವರನ್ನು ಭೇಟಿ ಮಾಡಿದರು. ಅವರೊಂದಿಗೆ ಎರಡನೇ ಮಹಿಳೆ ಶ್ರೀಮತಿ ಉಷಾ ವ್ಯಾನ್ಸ್, ಅವರ ಮಕ್ಕಳು ಮತ್ತು ಯು.ಎಸ್. ಆಡಳಿತದ ಹಿರಿಯ ಸದಸ್ಯರು ಇದ್ದರು.

ಫೆಬ್ರವರಿಯಲ್ಲಿ ತಾವು ವಾಷಿಂಗ್ಟನ್ ಡಿ.ಸಿ.ಗೆ ಭೇಟಿ ನೀಡಿದ್ದನ್ನು ಮತ್ತು ಅಧ್ಯಕ್ಷರಾದ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಫಲಪ್ರದ ಚರ್ಚೆಗಳನ್ನು ಪ್ರಧಾನಮಂತ್ರಿ ಅವರು ಪ್ರೀತಿಯಿಂದ ಸ್ಮರಿಸಿದರು, ಇದು ಮೇಕ್ ಅಮೆರಿಕ ಗ್ರೇಟ್ ಎಗೇನ್ (ಮ್ಯಾಗಾ) ಮತ್ತು ವಿಕಸಿತ ಭಾರತ 2047ರ ಸಾಮರ್ಥ್ಯಗಳನ್ನು ಬಳಸಿಕೊಂಡು ಭಾರತ ಮತ್ತು ಅಮೆರಿಕ ನಡುವೆ ನಿಕಟ ಸಹಕಾರಕ್ಕೆ ಮಾರ್ಗಸೂಚಿಯನ್ನು ರೂಪಿಸಿತು.

ಪ್ರಧಾನಮಂತ್ರಿ ಮತ್ತು ಉಪಾಧ್ಯಕ್ಷರಾದ ವ್ಯಾನ್ಸ್ ಅವರು ದ್ವಿಪಕ್ಷೀಯ ಸಹಕಾರದ ವಿವಿಧ ಕ್ಷೇತ್ರಗಳಲ್ಲಿನ ಪ್ರಗತಿಯನ್ನು ಪರಿಶೀಲಿಸಿದರು ಮತ್ತು ಧನಾತ್ಮಕವಾಗಿ ಮೌಲ್ಯಮಾಪನ ಮಾಡಿದರು.
ಪರಸ್ಪರ ಲಾಭದಾಯಕ ಭಾರತ-ಅಮೆರಿಕ ಮಾತುಕತೆಗಳಲ್ಲಿನ ಗಮನಾರ್ಹ ಪ್ರಗತಿಯನ್ನು ಅವರು ಸ್ವಾಗತಿಸಿದರು. ದ್ವಿಪಕ್ಷೀಯ ವ್ಯಾಪಾರ ಒಪ್ಪಂದವು ಎರಡೂ ದೇಶಗಳ ಜನರ ಕಲ್ಯಾಣದ ಮೇಲೆ ಕೇಂದ್ರೀಕರಿಸಿದೆ. ಅಂತೆಯೇ, ಇಂಧನ, ರಕ್ಷಣೆ, ಕಾರ್ಯತಂತ್ರದ ತಂತ್ರಜ್ಞಾನಗಳು ಮತ್ತು ಇತರ ಕ್ಷೇತ್ರಗಳಲ್ಲಿಸಹಕಾರವನ್ನು ಹೆಚ್ಚಿಸುವ ನಿಟ್ಟಿನಲ್ಲಿ ನಿರಂತರ ಪ್ರಯತ್ನಗಳನ್ನು ಅವರು ಗಮನಿಸಿದರು.

ಇಬ್ಬರೂ ನಾಯಕರು ಪರಸ್ಪರ ಹಿತಾಸಕ್ತಿಯ ವಿವಿಧ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು ಮತ್ತು ಮಾತುಕತೆ ಮತ್ತು ರಾಜತಾಂತ್ರಿಕತೆಯು ಮುಂದಿನ ಮಾರ್ಗವೆಂದು ಕರೆ ನೀಡಿದರು.

ಪ್ರಧಾನಮಂತ್ರಿ ಅವರು ಉಪಾಧ್ಯಕ್ಷರಾದ, ದ್ವಿತೀಯ ಮಹಿಳೆ ಮತ್ತು ಅವರ ಮಕ್ಕಳಿಗೆ ಭಾರತದಲ್ಲಿ ಆಹ್ಲಾದಕರ ಮತ್ತು ಉತ್ಪಾದಕ ವಾಸ್ತವ್ಯಕ್ಕಾಗಿ ಶುಭ ಕೋರಿದರು.

ಪ್ರಧಾನಮಂತ್ರಿಯವರು ಅಧ್ಯಕ್ಷರಾದ ಡೊನಾಲ್ಡ್ ಟ್ರಂಪ್ ಅವರಿಗೆ ತಮ್ಮ ಹಾರ್ದಿಕ ಶುಭಾಶಯಗಳನ್ನು ತಿಳಿಸಿದರು ಮತ್ತು ಈ ವರ್ಷದ ಕೊನೆಯಲ್ಲಿ ಭಾರತಕ್ಕೆ ಭೇಟಿ ನೀಡುವುದನ್ನು ತಾವು ಎದುರು ನೋಡುತ್ತಿರುವುದಾಗಿ ಹೇಳಿದರು.

Pleased to welcome US @VP @JDVance and his family in New Delhi. We reviewed the fast-paced progress following my visit to the US and meeting with President Trump. We are committed to mutually beneficial cooperation, including in trade, technology, defence, energy and… pic.twitter.com/LRNmodIZLB
— Narendra Modi (@narendramodi) April 21, 2025


